ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡುವುದಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಜೂನ್ 6ರಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಪುತ್ತೂರು ಉಪವಿಭಾಗದ ದಂಡಾಧಿಕಾರಿಯಾದ ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ. ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂನ್ 6ರಂದು ನಿಗದಿಪಡಿಸಲಾಗಿದೆ. ಆದ್ದರಿಂದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ಸೂಚಿಸಲಾಗಿದೆ.
ಇದನ್ನು ಓದಿದ್ದೀರಾ? ಬಂಟ್ವಾಳ | ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸುವಂತಹ ಉದ್ರೇಕಕಾರಿ ಭಾಷಣಗಳನ್ನು ಮಾಡುತ್ತಿರುವ ಸಂಘಪರಿವಾರದ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹ ಹೆಚ್ಚಾಗುತ್ತಿರುವ ನಡುವೆ ಈ ಬೆಳವಣಿಗೆ ಕಂಡುಬಂದಿದೆ.
ಸೋಮವಾರ ಪ್ರಚೋದನಾಕಾರಿ ಭಾಷಣ ಮಾಡಿದ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಎಆರ್ ದಾಖಲಾಗಿದೆ. ಜೊತೆಗೆ 15 ಮಂದಿ ಕಾರ್ಯಕರ್ತರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಇದಾದ ಬೆನ್ನಲ್ಲೇ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್ ನೀಡಲಾಗಿದೆ.
