ಗದಗ | ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿ, ಇಂಜೆಕ್ಷನ್​ ಸಿಗದೆ ರೋಗಿಗಳ ಪರದಾಟ

Date:

ಚಿಕಿತ್ಸೆಗಾಗಿ ಗದಗದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಈಗ ಅಕ್ಷರಶಃ ಕಂಗಾಲಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ, ಔಷಧಿ ಸಿಗುತ್ತೆಂದು ಬಂದ ರೋಗಿಗಳಿಗೆ ಇಲ್ಲಿನ ಸಿಬ್ಬಂದಿ ‘ಈ ಔಷಧಿಗಳು ನಮ್ಮಲ್ಲಿ ಇಲ್ಲ’ ಎನ್ನುತ್ತಿದ್ದು, ಬಡ ರೋಗಿಗಳು ಖಾಸಗಿ ಔಷಧಿ ಅಂಗಡಿಯಲ್ಲಿ ಖರೀದಿ ಮಾಡುವಂತಾಗಿದೆ.

- Advertisement -

ರೋಗಿಗಳಿಗೆ ಅಗತ್ಯ ಔಷಧಿಯನ್ನು ವೈದ್ಯರು ಚೀಟಿ ಬರೆದುಕೊಡುತ್ತಾರೆ. ರೋಗಿಗಳು ಜಿಮ್ಸ್ ಆಸ್ಪತ್ರೆ ಔಷಧಾಲಯಕ್ಕೆ ಹೋದರೆ, ಈ ಔಷಧಿ ನಮ್ಮಲ್ಲಿ ಇಲ್ಲ, ಹೊರಗಡೆ ಹೋಗಿ ಎನ್ನುತ್ತಿದ್ದಾರಂತೆ. ಕಡಿಮೆ ದರದ ಔಷಧಿಗಳು ಜಿಮ್ಸ್ ಆಸ್ಪತ್ರೆಯಲ್ಲಿ ದೊರೆಯುತ್ತವೆ. ಆದರೆ, ದುಬಾರಿ ಬೆಲೆಯ ಅತಿ ಅಗತ್ಯದ ಔಷಧಿ, ಇಂಜೆಕ್ಷನ್​ಗಳು ಸಿಗುತ್ತಿಲ್ಲ ಎಂದು ರೋಗಿಗಳು ಕಿಡಿ ಕಾರುತ್ತಿದ್ದಾರೆ. ಚರ್ಮ ರೋಗಿಯೊಬ್ಬ ಒಂದೊಂದು ಮುಲಾಮಿಗೆ 300-400 ರೂಪಾಯಿ ಕೊಟ್ಟು ಖಾಸಗಿಯಲ್ಲಿ ಖರೀದಿ ಮಾಡಬೇಕಾಗಿದೆ. ಬಡವರು ಸರ್ಕಾರಿ ಆಸ್ಪತ್ರೆಯಲ್ಲಿ ಫ್ರೀ ಚಿಕಿತ್ಸೆ, ಔಷಧಿ ಸಿಗುತ್ತೆ ಎಂದು ಬಂದ್ರೆ ಔಷಧಿಯೇ ಸಿಗುತ್ತಿಲ್ಲ. ಹಣ ಕೊಟ್ಟು ಖರೀದಿ ಮಾಡುವಂತ ಸ್ಥಿತಿ ಇದೆಯೆಂದು ಗೋಳಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಕುರಿತು ಜಿಮ್ಸ್ ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ರೇಖಾ ಅವರನ್ನು ಮಾಧ್ಯಮದವರು ಪ್ರಶ್ನಿಸಿದಾಗ, “ನಮ್ಮ ಔಷಧಾಲಯದಲ್ಲಿ ಇದ್ದ ಔಷಧಿಗಳು ಮಾತ್ರ ಬರೆಯುವಂತೆ ವೈದ್ಯರಿಗೆ ಈಗಾಗಲೇ ಸೂಚಿಸಲಾಗಿದೆ. ಹೊರಗಡೆ ಮಾತ್ರೆ ಬರೆಯದಂತೆ ಲಿಖಿತವಾಗಿ ಹೇಳಲಾಗಿದೆ. ಆದರೂ, ಹೊರಗಡೆ ಬರೆದುಕೊಡುತ್ತಾರೆ ಎಂದರೆ, ನಿರ್ದೇಶಕರಿಗೆ ಕೇಳಬೇಕು. ಔಷಧಿ ಕೊರತೆ ಬಗ್ಗೆ ನಿರ್ದೇಶಕರಿಗೆ ಪತ್ರ ಬರೆದಿದ್ದೇನೆ. ನನ್ನ ಹಂತದಲ್ಲಿ ಏನು ಮಾಡಬಹುದೋ ಅದನ್ನು ಮಾಡಿದ್ದೇನೆ. ಮುಂದಿನದ್ದು ನಿರ್ದೇಶಕರದ್ದು,” ಎನ್ನುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ...

ಉತ್ತರ ಕನ್ನಡ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.76.52ರಷ್ಟು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ...

ಚಿಕ್ಕಮಗಳೂರು | ಮಳೆ ಅಬ್ಬರ: ಜಾಲವೃತಗೊಂಡ ಪಟ್ಟಣ 

ತರೀಕೆರೆ ತಾಲೂಕಿನಲ್ಲಿ ವರುಣನ ಭರ್ಜರಿಯಾಗಿ ಆರ್ಭಟಿಸಿದ್ದು, ನಿನ್ನೆ ಮಧ್ಯಾಹ್ನ ಆರಂಭವಾದ ಮಳೆ...

ಚಿಕ್ಕಮಗಳೂರು | ವಯಕ್ತಿಕ ದ್ವೇಷಕ್ಕೆ 150 ಅಡಿಕೆ ಗಿಡ ಕತ್ತರಿಸಿದ ಕಿಡಿಗೇಡಿಗಳು 

ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಅ.21ರ ಬುಧವಾರದಂದು ವೈಯಕ್ತಿಕ ದ್ವೇಷದ...