ಕೊಡಗು | ಮಾನವ-ವನ್ಯಜೀವಿ ಸಂಘರ್ಷ ತಡೆಗೆ ತಜ್ಞರ ಮಟ್ಟದಲ್ಲಿ ಚರ್ಚೆ ಅಗತ್ಯ: ಈಶ್ವರ ಖಂಡ್ರೆ

Date:

ಕೊಡಗು ಜಿಲ್ಲೆಯ ದುಬಾರೆಯಲ್ಲಿ ಕಾವೇರಿ ನದಿಗೆ ನಿರ್ಮಾಣವಾಗಲಿರುವ ₹7.3 ಕೋಟಿ ರೂಪಾಯಿ ವೆಚ್ಚದ ತೂಗು ಸೇತುವೆ ಕಾಮಗಾರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆಯ ನೂತನ ವಾಹನಗಳಿಗೆ ಹಸಿರು ನಿಶಾನೆ ತೋರಿಸಿ, ಅಧಿಕಾರಿಗಳ ವಸತಿಗೃಹ ನಿರ್ಮಾಣಕ್ಕೂ ಭೂಮಿ ಪೂಜೆ ನೆರವೇರಿಸಿದರು.

- Advertisement -

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರ ಜೀವ ಹಾಗೂ ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶಗಳಲ್ಲಿ ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣ ಕುರಿತ ಸಲಹೆಗಳು ಬಂದಿವೆ. ಈ ಕುರಿತು ಸಾರ್ವಜನಿಕವಾಗಿ ಹಾಗೂ ತಜ್ಞರ ಮಟ್ಟದಲ್ಲಿ ಗಂಭೀರ ಚರ್ಚೆ ನಡೆಯಬೇಕಿದೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ತಜ್ಞರ ಸಮಿತಿ ರಚಿಸಲಾಗಿದ್ದು, ವರದಿ ಸಲ್ಲಿಕೆಯಾಗಿದೆ. ರೈಲ್ವೆ ಬ್ಯಾರಿಕೇಡ್‌, ಆನೆ ಕಂದಕ ನಿರ್ಮಾಣಕ್ಕೆ ಅನುದಾನದ ಕೊರತೆ ಇಲ್ಲ. ಹೆಚ್ಚಿನ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಶೀಘ್ರದಲ್ಲೇ ಇನ್ನಷ್ಟು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುವುದು ಎಂದರು.

ಅರಣ್ಯದಂಚಿನ ಜನರು ದೀರ್ಘಕಾಲದಿಂದ ಅರಣ್ಯ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಆದರೆ ಇತ್ತೀಚೆಗೆ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಿ ಅಮೂಲ್ಯ ಜೀವಹಾನಿ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಜನರ ಜೀವ ರಕ್ಷಣೆಗೂ ಮೊದಲ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

Advertisements

ದುಬಾರೆ ಹಾಡಿಯ ಸುಮಾರು 150ಕ್ಕೂ ಹೆಚ್ಚು ಕುಟುಂಬಗಳ ಬಹುಕಾಲದ ಬೇಡಿಕೆಯಾಗಿದ್ದ ತೂಗು ಸೇತುವೆ ನಿರ್ಮಾಣದಿಂದ ಸ್ಥಳೀಯರಿಗೆ ಹಾಗೂ ಪ್ರವಾಸಿಗರಿಗೆ ಅನುಕೂಲವಾಗಲಿದೆ. ತುರ್ತು ವೈದ್ಯಕೀಯ ಸೇವೆ ಸೇರಿದಂತೆ ವಿವಿಧ ಅಗತ್ಯಗಳಿಗೆ ಜನರು ಸುಲಭವಾಗಿ ನಗರ ಪ್ರದೇಶ ತಲುಪಲು ಸಾಧ್ಯವಾಗಲಿದೆ ಎಂದು ಹೇಳಿದರು.

ಕೊಡಗು ಜಿಲ್ಲೆ ಜಗತ್ತಿನ ಜೀವವೈವಿಧ್ಯತೆಯ ತಾಣವಾಗಿದ್ದು, ಪಶ್ಚಿಮಘಟ್ಟದ ಅಮೂಲ್ಯ ಪರಿಸರ ಸಂಪತ್ತನ್ನು ಹೊಂದಿದೆ. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಮತ್ತು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಅರಣ್ಯ ಇಲಾಖೆ ಆನೆಗಳ ಚಲನವಲನದ ಮೇಲೆ ನಿಗಾ ಇಡಲು ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡುತ್ತಿದೆ. ವಿಶೇಷವಾಗಿ ನವೆಂಬರ್‌ರಿಂದ ಜನವರಿವರೆಗೆ ಆನೆಗಳು ಕಾಡಿನಿಂದ ಹೊರಬಂದು ಬೆಳೆ ಪ್ರದೇಶಗಳಿಗೆ ಬರುತ್ತಿರುವುದರಿಂದ ಸಂಘರ್ಷ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ತೋಟದ ಮಾಲೀಕರು ಸಹ ಸಹಕಾರದಿಂದ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ದುಬಾರೆ ಆನೆ ಶಿಬಿರಕ್ಕೆ ಶತಮಾನಗಳ ಇತಿಹಾಸವಿದ್ದು, ಇಲ್ಲಿ 15 ಕುಮ್ಕಿ ಆನೆಗಳು ಕಾರ್ಯನಿರ್ವಹಿಸುತ್ತಿವೆ. ದಸರಾ ಮಹೋತ್ಸವ ಸೇರಿದಂತೆ ವಿವಿಧ ಕಾರ್ಯಾಚರಣೆಗಳಲ್ಲಿ ಅವು ಭಾಗವಹಿಸುತ್ತಿವೆ. ವನ್ಯಜೀವಿ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಸಚಿವ ಈಶ್ವರ ಖಂಡ್ರೆ ಹಲವಾರು ಸುಧಾರಣೆಗಳನ್ನು ತಂದಿದ್ದಾರೆ. ಕೊಡಗಿನಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ತಡೆಗೆ ತೋಟದ ಆನೆಗಳನ್ನು ಸ್ಥಳಾಂತರಿಸುವ ಕ್ರಮ ಕೈಗೊಳ್ಳಬೇಕು ಹಾಗೂ ಬೆಳೆ ಹಾನಿಗೆ ಶೀಘ್ರ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಂಗವಾಗಿ ಅರಣ್ಯ ಇಲಾಖೆಯ ಜನಸಂಪರ್ಕ ಕಾರ್ಯಕ್ರಮದಡಿ ಕಾಡಂಚಿನ ಗ್ರಾಮಗಳ ಫಲಾನುಭವಿಗಳಿಗೆ ಜೇನು ಪೆಟ್ಟಿಗೆ, ಹನಿ ಎಕ್ಸ್‌ಟ್ರಾಕ್ಟರ್‌, ಹೊಲಿಗೆ ಯಂತ್ರಗಳು ಹಾಗೂ ಸರ್ಕಾರಿ ಶಾಲೆಗಳಿಗೆ ಇಂಟರ್‌ಆಕ್ಟಿವ್ ಪ್ಯಾನಲ್‌ಗಳನ್ನು ವಿತರಿಸಲಾಯಿತು. ಇದರ ಜೊತೆಗೆ ಕುಶಾಲನಗರ ಪಟ್ಟಣದ ಸರ್ಕಾರಿ ನಾಟ ಸಂಗ್ರಹಾಲಯ ಆವರಣದಲ್ಲಿ ₹90 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನಾಲ್ಕು ವಸತಿ ಗೃಹಗಳ ಮಾಹಿತಿ ನೀಡಲಾಯಿತು. ಜೊತೆಗೆ ದುಬಾರೆ ಸಾಕಾನೆ ಶಿಬಿರಕ್ಕೆ ₹29 ಲಕ್ಷ ರೂಪಾಯಿ ವೆಚ್ಚದ ಹೊಸ ಲಾರಿ ಹಾಗೂ ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕಾಗಿ ₹37.20 ಲಕ್ಷ ರೂಪಾಯಿ ವೆಚ್ಚದ ನಾಲ್ಕು ಬೊಲೇರೋ ಕ್ಯಾಂಪರ್ ವಾಹನಗಳನ್ನು ಇಲಾಖೆಗೆ ಸೇರ್ಪಡೆಗೊಳಿಸಲಾಯಿತು.

ಈ ಸುದ್ದಿ ಓದಿದ್ದೀರಾ?ಕೊಡಗು | ಮೇ.26ರಂದು ವಿರಾಜಪೇಟೆಯಲ್ಲಿ ನುಡಿ ಉತ್ಸವ: ಭಾಷಾ ನೀತಿ ಕುರಿತ ವಿಚಾರ ಸಂಕಿರಣ

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್, ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮೀಜಿ, ಕಲ್ಲಹಳ್ಳಿ ಮಠದ ರುದ್ರಮುನಿ ಸ್ವಾಮೀಜಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...