ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಅದು ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗದ ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

“ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು ಕುಲ ಕಸುಬನ್ನಷ್ಟೆ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇದಾವಿಯಾದರು” ಎಂದರು.

Advertisements

“ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು” ಎಂದು ಹೇಳಿದರು.

“ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು. ಎಸ್ ಸಿ/ ಎಸ್ ಟಿ ಸಮುದಾಯಗಳ‌ ಜನಸಂಖ್ಯೆ ರಾಜ್ಯದಲ್ಲಿ 24% ಇದ್ದಾರೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ 24 ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್ ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ” ಎಂದು ತಿಳಿಸಿದರು.

“ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಮಗವಾಗಿ ಮರುನಾಮಕರಣ ಮಾಡುಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು. ಸಿದ್ಧರಾಮೇಶ್ವರ ಅಧ್ಯಯನ‌ಪೀಠಕ್ಕಾಗಿ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು” ಎಂದು ಭರವಸೆ ನೀಡಿದರು.

ಸಚಿವರಾದ ಶಿವರಾಜ್ ತಂಗಡಗಿ, ಡಿ.ಸುಧಾಕರ್, ಸತೀಶ್ ಜಾರಕಿಹೊಳಿ, ಶಾಸಕರಾದ ರಘುಮೂರ್ತಿ, ವೀರೇಂದ್ರ ಪಪ್ಪಿ, ಹೆಚ್.ವಿ.ವೆಂಕಟೇಶ್, ಶ್ರೀನಿವಾಸ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಚಂದ್ರಣ್ಣ ಸೇರಿ ಹಲವು ಮಂದಿ ಸಮಾಜದ ಮುಖಂಡರು ಮತ್ತು ಸಮುದಾಯದ ಶ್ರೀಗಳು ಹಾಗೂ ನಾನಾ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X