ಮಂಡ್ಯ | ಸಾಹಿತ್ಯ ಸಮ್ಮೇಳನ ಪ್ರತಿನಿಧಿ ನೋಂದಣಿ ಅವಧಿ ವಿಸ್ತರಣೆಗೆ ಸಜಗೌ ಒತ್ತಾಯ

Date:

ಮಂಡ್ಯ ನಗರದಲ್ಲಿ ಡಿಸೆಂಬರ್‌ 20ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವ ಪ್ರತಿನಿಧಿಗಳ ನೋಂದಣಿಯ ಅವಧಿಯನ್ನು ಡಿ.12ರವರೆಗೆ ವಿಸ್ತರಿಸುವಂತೆ ಜಿಲ್ಲಾ ಯುವ ಬರಹಗಾರರ ಬಳಗದ ಅಧ್ಯಕ್ಷ ಟಿ ಸತೀಶ್ ಜವರೇಗೌಡ(ಸಜಗೌ) ಒತ್ತಾಯಿಸಿದ್ದಾರೆ.

- Advertisement -

ಮಾಧ್ಯಮ ಹೇಳಿಕೆ ನೀಡಿರುವ ಇವರು, “ನಾಡಿನ ಹಲವು ಜಿಲ್ಲೆಗಳಿಂದ ತುಂಬಾ ಮಂದಿ ಸಾಹಿತ್ಯಾಸಕ್ತರು ತಮಗೆ ಕರೆ ಮಾಡಿ ‘ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತರಾಗಿದ್ದೇವೆ. ಆದರೆ, ಆನ್‌ಲೈನ್‌ ನೋಂದಣಿಯಾದ್ದರಿಂದ, ಸಕಾಲಕ್ಕೆ ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಮತ್ತೊಮ್ಮೆ ನೋಂದಣಿಗೆ ಕಡೆಯ ದಿನಾಂಕ ವಿಸ್ತರಿಸಲು ಸ್ವಾಗತ ಸಮಿತಿ ಗಮನಕ್ಕೆ ತನ್ನಿ’ರೆಂದು ಕೋರಿದ್ದಾರೆ. ಹಾಗಾಗಿ ಅವಧಿ ವಿಸ್ತರಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ನೋಡಿದ್ದೀರಾ? ಚನ್ನಪಟ್ಟಣ | ‘ಯೋಗೇಶ್ವರ್‌ಗೆ ಜೈ ಎಂದ ಮತದಾರ!

“ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ಪಾಲ್ಗೊಳ್ಳಲು ಇಚ್ಛಿಸುವವರು ‘ಆನ್‌ಲೈನ್’ ಮೂಲಕವೇ ನೋಂದಣಿ ಮಾಡಿಕೊಳ್ಳಬೇಕಿದೆ. ಎಲ್ಲರಿಗೂ ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಲು ಬರುವುದಿಲ್ಲ. ಬರುವವರು ನೋಂದಣಿ ಮಾಡಿಕೊಳ್ಳಲು ಯತ್ನಿಸಿದಾಗ, ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದಾರೆ. ಕೆಲವರು ನೋಂದಣಿ ಮಾಡಲಾಗದೆ ನಿರಾಶರಾಗಿದ್ದಾರೆ. ಆದ್ದರಿಂದ ಪ್ರತಿನಿಧಿ ನೋಂದಣಿಗೆ ಆನ್‌ಲೈನ್ ಮತ್ತು ಆಫ್‌ಲೈನ್ ಎರಡೂ ವ್ಯವಸ್ಥೆ ಮಾಡಬೇಕು” ಎಂದು ಸಲಹೆ ನೀಡಿದ್ದಾರೆ.

“ನೋಂದಣಿ ಮಾಡಲಾಗದ ಸಾಹಿತ್ಯಾಸಕ್ತರು ಮತ್ತು ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪ್ರತಿನಿಧಿಗಳು ಸಮ್ಮೇಳನ ಕುರಿತ ಅಗತ್ಯ ಮಾಹಿತಿಗಾಗಿ ನೋಂದಣಿ ಸಮಿತಿಯವರಿಗೆ ಕರೆ ಮಾಡಿದರೆ ಯಾರೂ ಸ್ವೀಕರಿಸುವುದಿಲ್ಲವೆಂದು ತಮ್ಮ ಬಳಿ ದೂರವಾಣಿ ಮೂಲಕ ಅಲವತ್ತುಕೊಂಡಿದ್ದಾರೆ. ಆದ್ದರಿಂದ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳಿಗೆ ಅಗತ್ಯ ಮಾಹಿತಿ ಕೊಡಲು ‘ಸಹಾಯ ವಾಣಿ’ ಆರಂಭಿಸಬೇಕು” ಎಂದು ಸತೀಶ್ ಜವರೇಗೌಡ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | ಮಾಹಿತಿ ಆಯುಕ್ತರ ಜರೂರು ನೇಮಕಕ್ಕೆ ಸಾರ್ವಜನಿಕರ ಆಗ್ರಹ

“ಪ್ರತಿನಿಧಿಗಳಾಗಿ ಭಾಗವಹಿಸುವ ನೋಂದಾಯಿತ ಸಾಹಿತ್ಯಾಸಕ್ತರಿಗೆ ‘ಬೆಲ್ಲ ಅಥವಾ ಸಕ್ಕರೆ’ಯ ಕೊಡುಗೆ ಕೊಡುವ ಬದಲು, ಮಂಡ್ಯ ಜಿಲ್ಲೆಯ ಸಾಹಿತಿಗಳ ಪರಿಚಯ, ಅವರ ಕೊಡುಗೆ, ಸಾಂಸ್ಕೃತಿಕ ಸಂಘ, ಸಂಸ್ಥೆಗಳ ಸೇವೆ, ಮಂಡ್ಯದ ಸಾಧಕ ಗಣ್ಯರು, ಪ್ರೇಕ್ಷಣೀಯ ಸ್ಥಳಗಳ ಮಾಹಿತಿಯೂ ಸೇರಿದಂತೆ ವಿವಿಧ ಕ್ಷೇತ್ರದ ಸಾಧನೆಯಗಳನ್ನು ಬಿಂಬಿಸುವ ಮತ್ತು ‘ಮಂಡ್ಯದ ಸಾಹಿತ್ಯ – ಸಾಂಸ್ಕೃತಿಕತನ’ವನ್ನು ಸಾರುವ ಕಿರುಹೊತ್ತಿಗೆ ಪ್ರಕಟಿಸಿ ಉಚಿತ ಕೊಡುಗೆಯಾಗಿ ನೀಡುವುದು ಸೂಕ್ತ” ಎಂದು ಸಲಹೆಯಿತ್ತಿದ್ದಾರೆ.

“ನೋಂದಣಿ ಉಪಸಮಿತಿ ರಚನೆಯಾದ ದಿನದಿಂದ ಈವರೆಗೆ ಎರಡು ಭಾರಿಯಷ್ಟೇ ಸಭೆ ನಡೆದಿದೆ. ಸಮಿತಿಯ ಸದಸ್ಯರಲ್ಲಿ ಹುರುಪು ಕಾಣುತ್ತಿಲ್ಲ. ಸಾಹಿತ್ಯ ಸಮ್ಮೇಳನದ ದಿನಾಂಕ ಹತ್ತಿರವಾಗುತ್ತಿರುವುದರಿಂದ, ಮತ್ತಷ್ಟು ಸಭೆಗಳು ನಡೆದು, ನೋಂದಾಯಿತ ಪ್ರತಿನಿಧಿಗಳ ಸಮಸ್ಯೆಗಳ ನಿವಾರಣೆಗೆ ಬಯಸುವ ಮಾಹಿತಿಗಳಿಗೆ ‘ತುರ್ತು ಸಹಾಯ ವಾಣಿ’ ಆರಂಭಿಸಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...