ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿ: ಉಮರ್‌ ಯು.ಹೆಚ್.

Date:

ಪಠ್ಯಪುಸ್ತಕಗಳ ಓದು ಮತ್ತು ಬರಹದಿಂದ ಶಾಲಾ ಕಾಲೇಜಿನ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಬಹುದು. ಅದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡರೆ ಮತ್ತು ಪಠ್ಯೇತರ ಪುಸ್ತಕಗಳನ್ನು ಓದುವ ಮತ್ತು ಬರೆಯುವ ಹವ್ಯಾಸವನ್ನು ಬೆಳೆಸಿಕೊಂಡರೆ ವಿದ್ಯಾರ್ಥಿಗಳು ಸಾಧಕರಾಗಲು ಸಹಕಾರಿಯಾಗಬಹುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್‌ ಯು.ಹೆಚ್.‌ ಹೇಳಿದರು.

- Advertisement -

ಅವರು ಇಂದು (ನ. 6) ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಮಂಗಳೂರಿನ ನ್ಯಾಶನಲ್‌ ಟುಟೋರಿಯಲ್‌ ಕಾಲೇಜಿನ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಬ್ಯಾರಿ ಸಾಹಿತ್ಯ ಕಮ್ಮಟ ಉದ್ಘಾಟಿಸಿ ಮಾತನಾಡುತ್ತಿದ್ದರು. ಬ್ಯಾರಿ ಸಮುದಾಯದ ವಿದ್ಯಾರ್ಥಿ ಯುವಜನರು ಆಡಳಿತ, ನ್ಯಾಯಾಂಗ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಗುರಿಗೆ ಆಧ್ಯತೆ ನೀಡಬೇಕಾದ ಅಗತ್ಯವಿದೆ ಎಂದು ಉಮರ್‌ ಯು.ಹೆಚ್.‌ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಅಖಿಲ ಭಾರತ ಬ್ಯಾರಿ ಪರಿಷತ್‌ನ ಮಹಿಳಾ ಘಟಕದ ಅಧ್ಯಕ್ಷೆ ಶಮೀಮಾ ಕುತ್ತಾರ್‌ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯ, ಕಾರ್ಯಕ್ರಮದ ಸದಸ್ಯ ಸಂಚಾಲಕ ಯು. ಎಚ್. ಖಾಲಿದ್ ಉಜಿರೆ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.

ನ್ಯಾಷನಲ್ ಟ್ಯುಟೋರಿಯಲ್ ಶಿಕ್ಷಣ ಸಂಸ್ಥೆ ಮುಖ್ಯೋಪಾಧ್ಯಾಯಿನಿ ವಿದ್ಯಾ ಭಟ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯ ಹಮೀದ್‌ ಹಸನ್‌ ಮಾಡೂರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನ್ಯಾಷನಲ್ ಟ್ಯುಟೋರಿಯಲ್ ಶಿಕ್ಷಣ ಸಂಸ್ಥೆಯ ಉಪನ್ಯಾಸಕಿ ಶುಭಾ ಕಾರ್ಯಕ್ರಮ ನಿರೂಪಿಸಿ, ಕಚೇರಿ ವ್ಯವಸ್ಥಾಪಕಿ ಅನಿತಾ ಧನ್ಯವಾದ ವಿತ್ತರು. ಉಪನ್ಯಾಸಕಿಯರಾದ ಶೋಭಾ, ಜಯಲಕ್ಷ್ಮಿ ಮತ್ತು ರಿಂಶಾ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...