ಮಡಿಕೇರಿ | ಫೇಸ್ಬುಕ್ ಪರಿಚಯ; ಹಣಕ್ಕಾಗಿ ಬ್ಲಾಕ್ಮೇಲ್, ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆರೋಪ

Date:

ಫೇಸ್‌ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಹಣದ ಅವಶ್ಯಕತೆ ಹೇಳಿ ಹಣ ಪಡೆದು, ನಂತರ ಯುವಕನನ್ನು ಬ್ಲ್ಯಾಕ್‌ಮೇಲ್ ಮಾಡಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದ್ದು, ಆರೋಪದ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಮಂಡ್ಯ ಜಿಲ್ಲೆ, ಮದ್ದೂರು ಮೂಲದ ಹೆಚ್.ಪಿ. ಮಹದೇವ ನೀಡಿದ ದೂರಿನ ಅನ್ವಯ, ಮಡಿಕೇರಿಯ ರಚನಾ ಎಂಬ ಯುವತಿಯೊಂದಿಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದು, ಹಣದ ಅಗತ್ಯವಿದೆ ಎಂದು ಹೇಳಿ ದಿನಾಂಕ-20-11-2025 ರಂದು ₹5,000 ರೂಪಾಯಿ ಹಾಗೂ ದಿನಾಂಕ-28-11-2025 ರಂದು ಮತ್ತೊಮ್ಮೆ ₹5,000 ರೂಪಾಯಿಗಳನ್ನು ಫೋನ್‌ಪೇ ಮೂಲಕ ಪಡೆದುಕೊಂಡಿದ್ದಾಳೆ. ಬಳಿಕ ಹಣ ವಾಪಸ್ ಕೇಳಿದಾಗ, ನಿನಗೆ ಬೇಕಾದ ಸುಖ ಕೊಡುತ್ತೇನೆ, ಮೈಸೂರು ಅಥವಾ ಕುಶಾಲನಗರಕ್ಕೆ ಬಾ ಎಂದು ಆಮಿಷ ಒಡ್ಡಿದ್ದಾಳೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ದಿನಾಂಕ-12-12-2025 ರಂದು ರಚನಾಳ ಮಾತನ್ನ ನಂಬಿ ಮಹದೇವ ಮಡಿಕೇರಿಗೆ ಬಂದಿದ್ದು, ರಾತ್ರಿ ಸುಮಾರು 10-30ರ ವೇಳೆಗೆ ನಕ್ಷತ್ರ ಸೂಪರ್ ಮಾರ್ಕೆಟ್ ಬಳಿ ಕರೆಸಿಕೊಂಡು, ನಂತರ ಮನೆಗೆ ಕರೆದುಕೊಂಡು ಹೋಗಿದ್ದಾಳೆ. ರಾತ್ರಿ 11-45ರ ಸುಮಾರಿಗೆ ರಚನಾಳ ತಾಯಿ ಮಾಲತಿ ಹಾಗೂ ದಿನೇಶ್ ಎಂಬವರು ಆಟೋದಲ್ಲಿ ಮನೆಗೆ ಬಂದು, ದಿನೇಶ್ ಹಣದ ವಿಚಾರದಲ್ಲಿ ಮಾತನಾಡುತ್ತೇನೆ ಎಂದು ಹೇಳಿ ರಚನಾ ಹಾಗೂ ಆಕೆಯ ತಾಯಿಯನ್ನು ಮನೆಯಿಂದ ಹೊರ ಕಳುಹಿಸಿದ್ದಾನೆ.

ನಂತರ, ದಿನೇಶ್ ತನ್ನ ಸ್ನೇಹಿತರಾದ ಸುಜೀತ್ ಹಾಗೂ ದರ್ಶನ್ ಅವರನ್ನು ಕರೆಸಿಕೊಂಡು, ಮೂವರು ಸೇರಿ ದೂರುದಾರ ಮಹದೇವನ ಮೇಲೆ ಕೈ, ದೊಣ್ಣೆ ಹಾಗೂ ಕತ್ತಿಯ ಹಿಡಿಯಿಂದ ಮುಖ, ಬಾಯಿ, ಎದೆ ಭಾಗ ಮತ್ತು ಎಡ ಕಾಲಿನ ಮಂಡಿಗೆ ಹೊಡೆದು ಗಂಭೀರವಾಗಿ ಥಳಿಸಿ, ಗಾಯಗೊಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಮಹದೇವನ ಬಟ್ಟೆಗಳನ್ನು ಬಲವಂತವಾಗಿ ಬಿಚ್ಚಿಸಿ, ಬೆತ್ತಲೆಯನ್ನಾಗಿಸಿ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡು, ಏರ್‌ಗನ್ ತಲೆಗೆ ಇಟ್ಟು ₹50 ಲಕ್ಷ ರೂಪಾಯಿ ಹಣ ಕೊಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ರಾತ್ರಿ ಪೂರ್ತಿ ಮನೆಯಲ್ಲಿ ಬಲವಂತವಾಗಿ ಇರಿಸಿಕೊಂಡು, ರಕ್ತಸಿಕ್ತ ಬಟ್ಟೆಗಳನ್ನು ಮನೆಯೊಳಗೆ ಸುಟ್ಟು ಹಾಕಿರುವ ಆರೋಪ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರಿಗೆ ವೇಗ, ಒತ್ತಡದ ಬೆಳವಣಿಗೆ ಬೇಡ: ಪ್ರೊ ಎಂ ಕೃಷ್ಣೆಗೌಡ

ಬೆಳಗಿನ ಜಾವ ಬಾತ್‌ರೂಮಿಗೆ ಹೋಗುವುದಾಗಿ ಹೇಳಿ ಮಹಾದೇವ ಮನೆಯಿಂದ ತಪ್ಪಿಸಿಕೊಂಡು, ಸದರಿ ಪ್ರಕರಣ ಸಂಬಂಧ ರಚನಾ, ಆಕೆಯ ತಾಯಿ ಮಾಲತಿ, ದಿನೇಶ್, ಸುಜೀತ್ ಹಾಗೂ ದರ್ಶನ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಸದರಿ ದೂರಿನನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...