ಚಿಕ್ಕಬಳ್ಳಾಪುರ | ಜಿಲ್ಲೆಯಲ್ಲಿ 7 ನಕಲಿ ಕ್ಲಿನಿಕ್‌ಗಳು ಸೀಜ್ : ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

Date:

Advertisements

ಜಿಲ್ಲೆಯಲ್ಲಿ ಇತ್ತೀಚೆಗೆ ನಕಲಿ ವೈದ್ಯರು, ಕ್ಲಿನಿಕ್‌ಗಳ ಹಾವಳಿ ಹೆಚ್ಚಾಗಿದ್ದು, ಇಂತಹ ನಕಲಿ ವೈದ್ಯರು ಸಾರ್ವಜನಿಕರ ಆರೋಗ್ಯಕ್ಕೆ ಆತಂಕಕಾರಿಯಾಗಿದ್ದಾರೆ. ನಕಲಿ ವೈದ್ಯರ ಹಾವಳಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವಲ್ಲಿ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಹೇಳಿದರು.

ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕೆ.ಪಿ.ಎಂ.ಇ ಹಾಗೂ ಪಿ.ಸಿ ಮತ್ತು ಪಿ.ಎನ್.ಡಿ.ಟಿ ನೋಂದಣಿ ಹಾಗೂ ಕುಂದುಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ಎಲ್ಲಾ ಖಾಸಗಿ ಆರೋಗ್ಯ ಸಂಸ್ಥೆಗಳು Karnataka Private Medical Establishment (KPME) ಅಧಿನಿಯಮದಡಿ ನೋಂದಣಿಯಾಗಿ ಕಾರ್ಯನಿರ್ವಹಿಸಬೇಕಾಗಿದೆ. ಆದರೆ ಜಿಲ್ಲೆಯಲ್ಲಿ ಇತ್ತೀಚೆಗೆ ನಕಲಿ ವೈದ್ಯರು ಹಾಗೂ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿರುವುದು ತಿಳಿದುಬಂದಿದ್ದು, ಖಚಿತ ಮಾಹಿತಿಯ ಮೇರೆಗೆ ಅನಿರೀಕ್ಷಿತ ದಾಳಿ ನಡೆಸಲಾಗಿದೆ. ಗೌರಿಬಿದನೂರು ಮತ್ತು ಚಿಂತಾಮಣಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ 7 ನಕಲಿ ಕ್ಲಿನಿಕ್‌ಗಳನ್ನು ಸೀಜ್ ಮಾಡಿ ಬಂದ್ ಮಾಡಲಾಗಿದೆ ಎಂದು ತಿಳಿಸಿದರು.

Advertisements

ಸೂಕ್ತ ವೈದ್ಯಕೀಯ ವಿದ್ಯಾರ್ಹತೆ ಹೊಂದಿಲ್ಲದಿದ್ದರೂ ಕ್ಲಿನಿಕ್‌ಗಳನ್ನು ತೆರೆದು ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಚಿಕಿತ್ಸೆ ನೀಡುತ್ತಿದ್ದ ಗೌರಿಬಿದನೂರು ತಾಲ್ಲೂಕಿನ ನಾಗಭೂಷಣ್.ಎ, ಶ್ರೀನಿವಾಸಚಾರಿ, ಸೈಫುಲ್ಲಾ, ರಾಮಕೃಷ್ಣರೆಡ್ಡಿ, ಮತ್ತು ಫಕೃದ್ಧಿನ್ ಹಾಗೂ ಚಿಂತಾಮಣಿ ತಾಲ್ಲೂಕಿನ ಮುನೀರ್ ಮತ್ತು ನಾರಾಯಣರೆಡ್ಡಿ.ಬಿ ಎಂಬುವವರಿಗೆ KPME ಅಧಿನಿಯಮದಡಿ ರೂ. 50,000/-ಗಳವರೆಗೆ ದಂಡವನ್ನು ವಿಧಿಸಲಾಗಿರುತ್ತದೆ ಎಂದು ಮಾಹಿತಿ ನೀಡದರು.

ಈ ರೀತಿಯ ದಾಳಿ ಕಾರ್ಯವನ್ನು ಮುಂದಿನ ದಿಗಳಲ್ಲೂ ಮುಂದುವರಿಸಬೇಕು. ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವನ್ನು ಜರುಗಿಸಿ. ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವಲ್ಲಿ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.

ಈ ಸಂರ್ದಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್ ಮಹೇಶ್ ಕುಮಾರ್, ಜಿಲ್ಲಾ ಅಯುಷ್ ಅಧಿಕಾರಿ ತಬೀಬಾ ಬಾನು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X