ಅಧಿಕಾರದ ದರ್ಪ, ಕುಟುಂಬ ರಾಜಕಾರಣವೇ ಜೆಡಿಎಸ್‌ನ ಹೀನಾಯ ಸ್ಥಿತಿಗೆ ಕಾರಣ: ಕೆ. ಶೇಷಾದ್ರಿ

Date:

  • ‘ಜೆಡಿಎಸ್‌ನ ಪೋಸ್ಟರ್‌ಗಳಲ್ಲಿ ಮತ ತರುವ ಒಂದೇ ಒಂದು ಮುಖಗಳಿಲ್ಲ’
  • ‘ಸೋಲಿನ ಹತಾಶೆಯಿಂದ ಪುಂಖಾನುಪುಂಖವಾಗಿ ಅಪಪ್ರಚಾರ ಮಾಡುತ್ತಿದ್ದಾರೆ’

ಕುಮಾರಸ್ವಾಮಿ ಅವರು ಹೇಳುವಂತೆ ಗಿಫ್ಟ್ ಕಾರ್ಡ್‌ಗಾಗಿ ಮತ ಹಾಕುವ ಮುಟ್ಟಾಳರು ಯಾರೂ ಇಲ್ಲ. ಅಧಿಕಾರದಲ್ಲಿದ್ದಾಗ ತೋರಿದ ದರ್ಪ ಮತ್ತು ಕುಟುಂಬ ರಾಜಕಾರಣವೇ ಅವರ ಇಂದಿನ ಪರಿಸ್ಥಿತಿಗೆ ಕಾರಣ ಎಂದು ರಾಮನಗರ ನಗರಸಭೆ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ಕೆ. ಶೇಷಾದ್ರಿ ಶಶಿ ಟೀಕಿಸಿದರು.

- Advertisement -

ರಾಮನಗರದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದರೂ, ಸೋಲಿಸಿದರೂ ಜನರನ್ನು ಅಯೋಗ್ಯರು ಎನ್ನುವುದು ಅವರ ಜಾಯಮಾನ. ಗೆದ್ದಾಗ ಜನ ಅವರ ಪಾಲಿಗೆ ದೇವರಾಗಿದ್ದರು. ಸೋತಾಗ ಗಿಫ್ಟ್ ಕಾರ್ಡ್ ಪಡೆದು ಮತ ಹಾಕಿದರು” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಜೆಡಿಎಸ್‌ನ ಪೋಸ್ಟರ್‌ಗಳಲ್ಲಿ ಮತ ತರುವ ಒಂದೇ ಒಂದು ಮುಖಗಳಿಲ್ಲ. ಕುಟುಂಬದ ಎಚ್.ಡಿ. ರೇವಣ್ಣ, ಅನಿತಾ ಕುಮಾರಸ್ವಾಮಿ, ಭವಾನಿ ರೇವಣ್ಣ, ಪ್ರಜ್ಜಲ್, ನಿಖಿಲ್ ಹಾಗೂ ಹೆಸರಿಲ್ಲದ ಒಂದೆರಡು ಮುಖಗಳನ್ನು ಬಿಟ್ಟರೆ ಬೇರಾರು ಇಲ್ಲ. ಅಧಿಕಾರದ ದರ್ಪ ಮತ್ತು ಕುಟುಂಬ ರಾಜಕಾರಣವೇ ಜೆಡಿಎಸ್ ಹೀನಾಯ ಸ್ಥಿತಿಗೆ ಕಾರಣ” ಎಂದು ಕುಟುಕಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

“ಸೋಲಿನಿಂದ ಹತಾಶರಾಗಿರುವ ಅವರು, ಗೆದ್ದವರ ವಿರುದ್ಧ ಪುಂಖಾನುಪುಂಖವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ತಾವು ಸತ್ಯ ಹರಿಶ್ಚಂದ್ರ ಅಂದುಕೊಂಡಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆಯುತ್ತಿದ್ದ ವರ್ಗಾವಣೆ ದಂಧೆ ಬಗ್ಗೆ ಎಲ್ಲರಿಗೂ ಗೊತ್ತಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗ ವರ್ಗಾವಣೆ ಸಹಜ ಪ್ರಕ್ರಿಯೆ ಎಂಬ ಸಾಮಾನ್ಯ ಜ್ಞಾನವೂ ಇವರಿಗಿಲ್ಲ. ಆದರೂ, ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...