ಬೀದರ್‌ | ಕಾಡುಪ್ರಾಣಿಗಳ ಹಾವಳಿ ತಡೆಗೆ ರೈತ ಸಂಘ ಒತ್ತಾಯ

Date:

Advertisements

ಕಾಡು ಹಂದಿ, ಜಿಂಕೆ ಸೇರಿದಂತೆ ಇತರೆ ವನ್ಯಜೀವಿಗಳ ಹಾವಳಿಯಿಂದ ರೈತರ ಬೆಳೆ ಸಂಪೂರ್ಣ ಹಾಳಾಗುತ್ತಿದ್ದು, ಕಾಡುಪ್ರಾಣಿಗಳ ರಕ್ಷಣೆಗೆ ಇಲಾಖೆ ಮುಂದಾಗಬೇಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ ಒತ್ತಾಯಿಸಿದೆ.

ಬೀದರ್‌ ಜಿಲ್ಲೆ ಔರಾದ ತಾಲೂಕಿನ ಸಂತಪೂರ ಪಟ್ಟಣದ ಬಸವೇಶ್ವರ ವೃತ್ತದಿಂದ ಪ್ರಾದೇಶಿಕ ಅರಣ್ಯ ವಲಯ ಅಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅರಣ್ಯಾಧಿಕಾರಿ ಅಂಕುಶ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಔರಾದ ತಾಲೂಕಿನಾದ್ಯಂತ ಪ್ರಸಕ್ತ ಸಾಲಿನಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಳಿಸಿದ್ದು, ಉತ್ತಮ ಫಸಲು ಬೆಳೆಯುವ ನಿರೀಕ್ಷೆಯಲ್ಲಿ ಮಳೆಗಾಗಿ ಕಾಯುತ್ತಿದ್ದಾರೆ. ಮಳೆ ಅಭಾವದಿಂದ ರೈತರು ಸಂಕಷ್ಟದಲ್ಲಿರುವ ವೇಳೆ ಕಾಡುಹಂದಿ, ಜಿಂಕೆ, ಮಂಗ ಸೇರಿದಂತೆ ಇನ್ನಿತರ ಕಾಡುಪ್ರಾಣಿಗಳ ಹಿಂಡು ರೈತರ ಹೊಲಗಳಿಗೆ ನುಗ್ಗಿ ಸಂಪೂರ್ಣ ಬೆಳೆ ನಾಶಪಡಿಸುತ್ತಿವೆ. ಕೃಷಿಯನ್ನೇ ನಂಬಿಕೊಂಡು ಬದುಕುತ್ತಿರುವ ರೈತರು ವನ್ಯಜೀವಿಗಳ ಹಾವಳಿಯಿಂದ ತತ್ತರಿಸಿದ್ದಾರೆ” ಎಂದು ರೈತ‌ ಸಂಘದ ಜಿಲ್ಲಾ ಕಾರ್ಯದರ್ಶಿ ಶ್ರೀಮಂತ ಬಿರಾದಾರ ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಸುಮಾರು ವರ್ಷಗಳಿಂದ ತಮ್ಮ ಇಲಾಖೆಗೆ ರೈತರು ಮೌಖಿಕ ಮತ್ತು ಲಿಖಿತವಾಗಿ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ. ವನ್ಯಜೀವಿಗಳಿಂದ ಬೆಳೆ ರಕ್ಷಿಸಿಕೊಳ್ಳಲು ಪರಿಹಾರ ಸೂಚಿಸಬೇಕು. ಪ್ರಾಣಿಗಳಿಂದ ರೈತರಿಗೆ ಅನಾನೂಕೂಲವಾಗದಂತೆ ತಡೆ ಹಿಡಿಯಬೇಕು. ವಾರದೊಳಗೆ ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣ ಮಾಡದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಖುದ್ದಾಗಿ ತಾವೇ ಜವಾಬ್ದಾರರು” ಎಂದು ಪ್ರತಿಭಟನಾ ರೈತರು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬರಪೀಡಿತ ಪ್ರದೇಶ ಘೋಷಣೆಗೆ ಒತ್ತಾಯ

ರೈತ ಸಂಘದ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಔರಾದ ತಾಲೂಕು ಅಧ್ಯಕ್ಷ ಪ್ರಕಾಶ್ ಬಾವಗೆ ಸೇರಿದಂತೆ ಪ್ರಮುಖಋುಗಳಾದ ಬಸವರಾಜ ಘೂಳೆ, ಪ್ರಭುದಾಸ, ವಿಶ್ವನಾಥ್ ಧರಣೆ, ಝರಣೆಪ್ಪ ದೇಶಮುಖ, ಕೃಷ್ಣಾರೆಡ್ಡಿ, ಹಣಮಂತರಾವ ಬಿರಾದರ, ಪ್ರಕಾಶ್ ಪಾಟೀಲ್, ಮಲ್ಲಿಕಾರ್ಜುನ ಕೋರೆ, ಗಣಪತಿ ದೇಶಪಾಂಡೆ, ಬಸವರಾಜ ಪಾಟೀಲ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X