ಫೆಬ್ರವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ರೈತ‌ ಸಮಾವೇಶ

Date:

Advertisements

ಫೆಬ್ರವರಿ 10ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತಪರ ಬಜೆಟ್ ರೂಪಿಸಲು ಹಕ್ಕೊತ್ತಾಯ ಮಂಡನೆ ಮಾಡಲಾಗುತ್ತದೆ ಎಂದು ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ಸಾರಿ ಬರಗಾಲ ಎದುರಾದಾಗ ಪರಿಹಾರ ನೀಡುತ್ತವೆ. ಇದರಿಂದ ರೈತ ಸಮಸ್ಯೆಗಳಿಗೆ ಪರಿಹಾರ ಸಿಗುವದಿಲ್ಲ. ಬರ ನಿವಾರಣೆಗೆ ಶಾಸ್ವತವಾಗಿ ಯೋಜನೆಗಳನ್ನು ರೂಪಿಸಬೇಕು. ಸಣ್ಣ ನೀರಾವರಿ ಯೋಜನೆಗಳು ಬರ ಪರಿಹಾರಕ್ಕೆ ಹೆಚ್ಚು ಅನುಕೂಲವಾಗಲಿದೆ” ಎಂದರು.

“ರಾಜ್ಯ ಸರ್ಕಾರವು ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಮತ್ತು ಬರ ಪರಿಹಾರಕ್ಕೆ ಯೋಜನೆಗಳನ್ನು ರೂಪಿಸಬೇಕು. ಬೇಸಾಯ ಪದ್ದತಿಯಲ್ಲಿ ಬದಲಾವಣೆ ಮಾಡಬೇಕು. ರೈತರಿಗೆ ಆದಾಯ ಭದ್ರತೆಯನ್ನು ನೀಡಬೇಕು. ರಾಜ್ಯದ ಜನತೆಗೆ ನೀಡುತ್ತಿರುವ ಅಕ್ಕಿಯ ಜೊತೆಗೆ ರಾಗಿ, ಜೋಳ, ಎಣ್ಣೆ, ಬೇಳೆಕಾಳು ಸಹ ನೀಡಬೇಕು. ಮುಖ್ಯವಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತ ಪರ ಬಜೆಟ್ ಮಂಡನೆ ಮಾಡಬೇಕು. ಇಂತಹ ಅನೇಕ ವಿಷಯಗಳನ್ನು ಇಟ್ಟುಕೊಂಡು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ” ನಡೆಯಲಿದೆ ಎಂದು ತಿಳಿಸಿದರು.

Advertisements

ಪತ್ರಿಕಾಗೋಷ್ಠಿಯಲ್ಲಿ ಚಾಮರಸ ಮಾಲಿ ಪಾಟಿಲ್, ಬಸವರಾಜ ಮೋಕಾಶಿ, ಶಿವನಗೌಡ ಪಾಟಿಲ, ಗಣಾಚಾರಿ,
ಬಾಳಪ್ಪ ಪಾಟಿಲ ಹಾಗೂ ಹಲವು ರೈತ ಮುಖಂಡರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X