ಬೆಂಗಳೂರು | ಫೆ.10ರಂದು ರೈತ ನಾಯಕ ಪ್ರೊ. ಎಂಡಿಎನ್ ನೆನಪಿನಲ್ಲಿ ಬೃಹತ್ ರೈತ ಸಮಾವೇಶ

Date:

ರೈತ ನಾಯಕ ಪ್ರೋ. ಎಂ.ಡಿ ನಂಜುಂಡಸ್ವಾಮಿ ಅವರ ಜನ್ಮದಿನದ ಅಂಗವಾಗಿ ಫೆಬ್ರವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ. ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ವಿವಿಧ ಜಾತಿ, ಸಮುದಾಯಗಳಲ್ಲಿರವು ರೈತ ಸಮುದಾಯವನ್ನು ಸಮಾಜವಾದಿ ಚಿಂತನೆಗಳ ಕರೆತಂದು, ಜಾತಿಗಿಂತ ವರ್ಗ ದೊಡ್ಡದು ಎಂಬ ಪ್ರಜ್ಞೆ ಮೂಡಿಸಿದವರು ನಂಜುಂಡಸ್ವಾಮಿ ಅವರು. ರೈತಸಂಘವನ್ನು ಪರಿಣಾಮಕಾರಿ ಮತ್ತು ಪ್ರಭಾವ ಬೀರುವ ಚಳುವಳಿಯಾಗಿ ಅವರು ಕಟ್ಟಿದ್ದಾರೆ. ಅವರನ್ನು ಸ್ಮರಿಸುವುದು ನಾಡಿದ ರೈತರ ಕರ್ತವ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಂಜುಂಡಸ್ವಾಮಿ ಅವರ ಗರಡಿಯಲ್ಲಿ ಬೆಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಅಂದು ರೈತರ ನಾನಾ ಬೇಡಿಕೆಗಳಿರುವ 38 ಪುಟಗಳ ಹಕ್ಕೊತ್ತಾಯವನ್ನು ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗುತ್ತದೆ. ರೈತ ಚಿಂತನೆಯಿರುವ ಸಮಾಜ ಕಲ್ಯಾಣ ಸಚಿವ ಡಾ.ಹೆಚ್ ಮಹಾದೇವಪ್ಪ, ಶಾಸಕ ಹಾಗೂ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್ ಪಾಟೀಲ್, ಮೇಲಕೋಟೆ ಶಾಸಕ ದರ್ಶನ ಪುಟ್ಟಣ್ಣಯ್ಯ ಕೂಡ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ” ಎಂದು ತಿಳಿಸಿದರು.

“2013ರಲ್ಲಿ ಕಾಂಗ್ರೆಸ್‌ ಸರ್ಕಾರವೇ ರಚಿಸಿದ್ದ ಕೃಷಿ ಬೆಲೆ ಆಯೋಗವನ್ನು ಮತ್ತಷ್ಟು ಬಲವರ್ಧನೆ ಮಾಡಬೇಕು. ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ಹಣ ನೀಡುವ ಬದಲು ರೈತರು ಬೆಳೆಯುತ್ತಿರುವ ಜೋಳ, ರಾಗಿ, ತೊಗರಿ ಬೇಳೆ ಹಾಗೂ ಎಣ್ಣೆ ವಿತರಣೆ ಮಾಡಬೇಕು. ಇದರಿಂದ ಸರ್ಕಾರದ ಮೇಲಿನ ಹೊರೆಯೂ ಕಡಿಮೆಯಾಗುತ್ತದೆ. ರೈತರಿಗೆ ಅನುಕೂಲವಾಗುತ್ತದೆ” ಎಂದು ಬಡಗಲಪುರ ನಾಗೇಂದ್ರ ತಿಳಿಸಿದರು.

ಸಮಾವೇಶಕ್ಕೆ ಮುಖ್ಯಮಂತ್ರಿಯನ್ನು ಕರೆಸುವುದು ಸಂಘಟನೆಯ ಮೇಲೆ ರಾಜಕೀಯ ಪ್ರಭಾವ ಬೀರುವುದಿಲ್ಲವೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಇದು ಪ್ರತಿಭಟನಾ ಸಮಾವೇಶವಲ್ಲ. ನಂಜುಂಡಸ್ವಾಮಿ ಅವರನ್ನು ಸ್ಮರಿಸುವ ಸಮಾವೇಶ. ಸಿದ್ದರಾಮಯ್ಯ ಅವರು ನಂಜುಂಡಸ್ವಾಮಿ ಅವರನ್ನು ತಮ್ಮ ರಾಜಕೀಯ ಗುರುಗಳು ಎಂದು ಹೇಳುತ್ತಾರೆ. ಹೀಗಾಗಿ, ಅವರು ನಂಜುಂಡಸ್ವಾಮಿ ಅವರ ಅನುಯಾಯಿಯಾಗಿ ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ. ಸರ್ಕಾರದ ವಿರುದ್ಧ ಹೋರಾಟ ನಿರಂತರವಾಗಿ ನಡೆಯುತ್ತದೆ. ಅದರಲ್ಲಿ ಯಾವುದೇ ರಾಜಿ ಇಲ್ಲ. ಸಂಘಟನೆ ಮೇಲೆ ಯಾವುದೇ ರಾಜಕೀಯ ಪ್ರಭಾವ ಬೀರುವುದಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಹೋರಾಟಕ್ಕೆ ಮಣಿದ ನ್ಯಾಷನಲ್ ಕಾಲೇಜು;ದಲಿತ ಪ್ರಾಧ್ಯಾಪಕರ ಹಿಂಬಡ್ತಿ ಆದೇಶ ವಾಪಸ್‌

ರೈತ ಸಂಘದ ಕಾರ್ಯಾಧ್ಯಕ್ಷ ವಿರಸಂಗಯ್ಯ ಮಾತನಾಡಿ, “ಕರ್ನಾಟಕ ಹಳ್ಳಿಗಳ ರಾಜ್ಯ. ಬೆರಳೆಣಿಕೆಯ ನಗರಗಳನ್ನು ಅಭಿವೃದ್ಧಿ ಮಾಡಿದರೆ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಹಳ್ಳಿಗಳು ಉಳಿದರೆ, ಮಾತ್ರ ದೇಶ ಉಳಿಯುತ್ತದೆ. ಇಂತಹ ಕಾಲ ದಿಕ್ಕು ತಪ್ಪಿದೆ. ಗ್ರಾಮೀಣ ಭಾಗದ ಯುವಕರಿಗೆ ವಿವಾಹಕ್ಕೆ ಹೆಣ್ಣು ಸಿಗದೇ ಇರುವುದು ಸಮಾಜದಲ್ಲಿ ಸೂತಕದ ಛಾಯೆಯನ್ನು ಸೂಚಿಸುತ್ತದೆ. ರೈತ ಯುವಜನರನ್ನು ಪ್ರೋತ್ಸಾಹಿಸುವ, ಅವರಿಗೆ ಕನಿಷ್ಠ ಆದಾಯ ಖಾತ್ರಿಯಾಗುವಂತಹ ಯೋಜನೆಗಳನ್ನು ಜಾರಿಗೆ ತರಬೇಕು” ಎಂದರು.

ಸುದ್ದಿಗೋಷ್ಠಿಯಲ್ಲಿ ಗೋಪಾಲ್ ಪಾಪೇಗೌಡ, ರವಿಕರಣ್ ಪುಣಚ, ಶ್ರೀಶೈಲ ನಾಯಕ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...