ರಾಯಚೂರು | ರೈತರ ಸಮಸ್ಯೆಯ ಬಗ್ಗೆ ಡಿ ಕೆ ಶಿವಕುಮಾರ್ ಉಡಾಫೆ ವರ್ತನೆ : ಚಾಮರಸ ಮಾಲಿ ಪಾಟೀಲ್ ಆರೋಪ

Date:

Advertisements

ತುಂಗಭದ್ರ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗಳ ಸಮಸ್ಯೆಗಳ ಕುರಿತು ಚರ್ಚಿಸಲು ಮುನಿರಾಬಾದ್‌ಗೆ ಜಲ ಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಆಗಮಿಸಿದಾಗ ರೈತರ ಮನವಿಗೆ ಉಡಾಫೆಯಿಂದ ಉತ್ತರಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಆರೋಪಿಸಿದ್ದಾರೆ.

ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ರೈತರು ಕೆಳ ಭಾಗದಲ್ಲಿ ನೀರು ತಲುಪುತ್ತಿಲ್ಲ ಎಂದು ಮನವಿಗೆ ಮುಂದಾದಾಗ ಡಿಸಿಎಂ ಡಿ ಕೆ ಶಿವಕುಮಾರ್ ಉಡಾಫೆಯಾಗಿ ಮಾತನಾಡಿದ್ದಾರೆ. ರೈತರಿಗೆ ನೀರು ತಲುಪದೇ ಹೋದಲ್ಲಿ ಮುಖ್ಯಮಂತ್ರಿ ಸೇರಿ ಎಲ್ಲ ಸಚಿವರಿಗೆ ಘೇರಾವ್ ಹಾಕಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

photo 6312118881958871277 y

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ರೈತ ನಿಯೋಗದ ಮನವಿ ಸ್ವೀಕರಿಸಿದ್ದ ಸಿಎಂ ಸಿದ್ದರಾಮಯ್ಯನವರು ರಾಯಚೂರು ಮತ್ತು ಕೊಪ್ಪಳ ಉಸ್ತುವಾರಿ ಸಚಿವರನ್ನು ತರಾಟೆಗೆ ತೆಗೆದುಕೊಂಡು ಸಮರ್ಪಕ ನೀರು ಪೂರೈಕೆಗೆ ಸೂಚನೆ ನೀಡಿದ್ದಾರೆ. ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಭೆ ನಡೆಸಿ, ಕೊನೆಭಾಗಕ್ಕೆ ನೀರು ತಲುಪಿಸಲು ಸೂಚಿಸಿದ್ದಾರೆ. ಕೊಪ್ಪಳ ಉಸ್ತುವಾರಿ ಸಚಿವ ಶಿವರಾಜ ತಂಗಡಗಿಯವರಿಂದ ಕೊನೆಭಾಗಕ್ಕೆ ನೀರು ಬಾರದ ಇರುವ ಕುರಿತು ರೈತರು, ಶಾಸಕರುಗಳು ಸಿಎಂಗೆ ಮನವರಿಕೆ ಮಾಡಿದ್ದಾರೆ. ಆದರೆ ಜಲ ಸಂಪನ್ಮೂಲ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ನೀಡಲು ಹೋದರೆ, ಪ್ರತಿಭಟನೆ ಮಾಡಿ ಎಂದು ಹೇಳುವ ಮೂಲಕ ವ್ಯಂಗ್ಯವಾಗಿ ಉತ್ತರಿಸಿದ್ದಾರೆ. ರೈತರನ್ನು ನಿರ್ಲಕ್ಷ್ಯಿಸಿ ಮಾತನಾಡಿದ್ದಾರೆ ಎಂದು ಚಾಮರಸ ಮಾಲಿ ಪಾಟೀಲ್ ಆರೋಪಿಸಿದರು.

Advertisements

ರೈತರು ಇಂದು ಹೋರಾಟ ಮಾಡಿಯೇ ನೀರು ಪಡೆಯುವಂತಾಗಿದೆ. ಅಕ್ರಮ ನೀರಾವರಿ ತಡೆಯಲು ಕಾಯ್ದೆ ರೂಪಿಸಿದ್ದರೂ ರಾಜ್ಯದಲ್ಲಿ ಇನ್ನೂ ಜಾರಿಯಾಗಿಲ್ಲ. ರೈತರು ಪ್ರತಿವರ್ಷ ಒಂದೊಂದು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಾರಿ ಕಾಲುವೆ ನೀರು ಬಾರದೇ ಹೋದರೆ ಹೋರಾಟದ ಸ್ವರೂಪ ಬದಲಿಸಬೇಕಾಗುತ್ತದೆ. ಜಿಲ್ಲೆಗೆ ಬರುವ ಸಚಿವರುಗಳಿಗೆ ಘೇರಾವ್ ಮಾಡಿ ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ, ಅಮರಣ್ಣ ಗುಡಿಹಾಳ, ಬೂದೆಯ್ಯಸ್ವಾಮಿ, ದೇವಯ್ಯ ನಾಯಕ, ಮಲ್ಲಣ್ಣ ದಿನ್ನಿ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X