ರಾಯಚೂರು | ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ರೈತರು ಧರಣಿ

Date:

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

- Advertisement -

ʼರೈತರು ಕೃಷಿ ಪಂಪ್ ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರೇ ವೆಚ್ಚ ಭರಿಸಲು ಸೂಚಿಸಿರುವ ಆದೇಶ ಹಿಂಪಡೆಯಬೇಕು. 2 ರಿಂದ 3 ಲಕ್ಷ ಹಣವನ್ನು ರೈತರು ಭರಿಸಲು ಸಾಧ್ಯವಾಗುದಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼರಾಜ್ಯದಲ್ಲಿ ಕಳೆದ ವರ್ಷ ಏಪ್ರಿಲ್‌ನಿಂದ ಈವರಗೆ 1182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಲ್ಲಿ ಅತಿಹೆಚ್ಚು ಯುವ ರೈತರೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೂಡಲೇ ಸರ್ಕಾರ ರೈತರಲ್ಲಿ ಆತ್ಮಸೈರ್ಯ ಹೆಚ್ಚಿಸಲು ಮುಂದಾಗಬೇಕು. ಕೃಷಿ ಬೆಲೆ ಆಯೋಗವನ್ನು ಸಬಲೀಕರಣಗೊಳಿಸಿ ರಾಜ್ಯ ಸರ್ಕಾರವೇ ಬೆಂಬಲ ಬೆಲೆ ನಿಗದಿಪಡಿಸಬೇಕು. ಬ್ಯಾಂಕ್‌ಗಳು ಬರಗಾಲದಲ್ಲೂ ಒತ್ತಾಯದಿಂದ ಸಾಲ ವಸೂಲಾತಿಗೆ ಮಾಡುತ್ತಿರುವುದು ತಡೆಯಬೇಕುʼ ಎಂದು ಒತ್ತಾಯಿಸಿದರು.

ʼಎಲ್ಲ ಬೆಳೆಗಳಿಗೆ ಫಸಲ್ ಭೀಮಾ ಯೋಜನೆಯಡಿ ವಿಸ್ತರಿಸಿ ಗ್ರಾಮ ಮಟ್ಟದಲ್ಲಿ ಬೆಳೆಹಾನಿ ನಿರ್ಧರಿಸಿ ವಿಮಾ ಕಂಪನಿಗಳು ಬಾಕಿ ಉಳಿಸಿಕೊಂಡ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಬೇಕು, ಫಸಲ್ ಭೀಮಾ, ಪಹಣಿ , ಪಕ್ಕ ಪೋಡಿ, ಹದ್ದುಬಸ್ತು ಶುಲ್ಕ ಹೆಚ್ಚಳ ಹಿಂಪಡೆಯಬೇಕು. ಖರೀದಿ ಕೇಂದ್ರದ ಮೂಲಕ ರೈತರಿಂದ ಜೋಳ, ರಾಗಿ ಖರೀದಿಸಿ ಬಾಕಿ ಉಳಿಸಿಕೊಂಡ ರೈತರ ಹಣ ಪಾವತಿಸಬೇಕುʼ ಎಂದರು.

ಅರಣ್ಯ ಭೂಮಿ ಸಾಗುವಳಿ ರೈತರಿಗೆ ಪಟ್ಟಾ ಭೂಮಿ ನೀಡುವುದು, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಗೋಹತ್ಯೆ ನಿಷೇದ ಕಾಯ್ದೆ ಹಿಂಪಡೆಯಬೇಕು. ತುಂಗಭದ್ರ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಅನಧಿಕೃತ ನೀರಾವರಿ ತಡೆದು ಕೆಳಭಾಗದ ರೈತರ ಜಮೀನಿಗೆ ನೀರು ಒದಗಿಸಬೇಕು. ನಾರಾಯಣಪುರ ಬಲದಂಡೆ ಕಾಲುವೆ 18 ವಿತರಣಾ ಕಾಲುವೆ ದುರಸ್ತಿ ಅರಬರೆಯಾಗಿದ್ದು ಕಳಪೆಯಾಗಿದೆ. ಕೂಡಲೇ ಗುಣಮಟ್ಟ ಕಾಮಗಾರಿ ಪೂರ್ಣಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ರೈತ ಮುಖಂಡರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್-ಬೆಂಗಳೂರು ವಿಮಾನ ಸೇವೆ: 2 ವಾರದಲ್ಲಿ ವರದಿ ಸಲ್ಲಿಸಲು ಸಚಿವ ಎಂ.ಬಿ.ಪಾಟೀಲ್ ಸೂಚನೆ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ, ವೆಂಕಪ್ಪ ಕಾರಬಾರಿ, ಮಲ್ಲಣ್ಣದಿನ್ನಿ, ಬಸನಗೌಡ ಮಲ್ಲಿಗೆಮಡಗು, ಲಿಂಗಾರೆಡ್ಡಿ ಪಾಟೀಲ್, ಗೋವಿಂದ ನಾಯಕ, ಮಲ್ಲಮ್ಮ ಹುನಕುಂಟಿ, ಸಿದ್ದಯ್ಯಸ್ವಾಮಿ ಮಾನವಿ, ಹುಚ್ಚಪೀರಸಾಬ ಮಲ್ದಕಲ್, ಉಮಣ್ಣ ಮಲದಕಲ್, ದೇವರಾಜ ನಾಯಕ, ಬ್ರಹ್ಮಯ್ಯ ಆಚಾರಿ, ರವಿಕುಮಾರ ಗಬ್ಬೂರು, ಸೂಗರೆಡ್ಡಿ ಕುನ್ನಿ, ಕಲ್ಲೂರಾಯ, ಬಯ್ಯಾರೆಡ್ಡಿ, ಶಿವರಾಜ, ಚನ್ನಬಸವ, ವೀರೇಶ ಗವಿಗಟ್ಟ, ಶಂಕ್ರಪ್ಪಗೌಡ, ರಮೇಶ ಅಬಕಾರಿ ಸುಂಕೇಶ್ವರಹಾಳ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...