ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ರೈತ ಸಂಘ ಆಗ್ರಹ

Date:

ಕಲಬುರಗಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ₹3 ಲಕ್ಷದವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಸರ್ಕಾರವನ್ನು ಆಗ್ರಹಿಸಿತು.

- Advertisement -

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ನಾಗೇಂದ್ರ ಥಂಭೆ ಮಾತನಾಡಿ, ‘ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ರೈತರು ಸಾಲ ಮಾಡಿ ಜಮೀನು ಸಿದ್ಧಪಡಿಸಿ, ಬೀಜ ಹಾಗೂ ರಸಗೊಬ್ಬರ ಖರೀದಿಸಿ ಬಿತ್ತನೆ ನಡೆಸಿದ್ದರೂ ಸಮರ್ಪಕ ಮಳೆಯ ಕೊರತೆಯಿಂದ ಬೆಳೆಗಳು ಒಣಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಇದೆ ವೇಳೆ ಪ್ರಧಾನ ಕಾರ್ಯದರ್ಶಿ ರಮೇಶ್ ರಾಗಿ ಮಾತನಾಡಿ, ‘ರಾಜ್ಯದಲ್ಲಿ ಸುಮಾರು ಶೇ.40ರಷ್ಟು ಬಿತ್ತನೆ ಆಗಿದ್ದು, ಇನ್ನುಳಿದ 60ರಷ್ಟು ಸಂಪೂರ್ಣ ಬೆಳೆ ಹಾನಿಯಾಗಿದ್ದು, ಜಾನುವಾರುಗಳಿಗೆ ಮೇವು ಕೊರತೆ ಉಂಟಾಗಿದೆ. ಅನೇಕ ರೈತರು ಜಾನುವಾರುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಎರಡು ತಿಂಗಳಲ್ಲಿ 31 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ’ ಎಂದು ಹೇಳಿದರು.

‘ಹವಾಮಾನ ವೈಪರೀತ್ಯ ಹಾಗೂ ಬೆಳೆ ನಷ್ಟದಿಂದ ರೈತರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಸರ್ಕಾರ ಕೂಡಲೇ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಜೊತೆಗೆ ರೈತರ ಕೃಷಿ ಸಾಲವನ್ನು ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು.

‘ಯೂರಿಯಾ, ಡಿಎಪಿ ಸೇರಿದಂತೆ ವಿವಿಧ ರಸಗೊಬ್ಬರಗಳ ಬೆಲೆ ಮತ್ತು ಡೀಸೆಲ್ ದರ ನಿರಂತರ ಏರಿಕೆಯಿಂದ ಕೃಷಿ ಉತ್ಪಾದನಾ ವೆಚ್ಚ ಗಣನೀಯವಾಗಿ ಹೆಚ್ಚಾಗಿದೆ. ರೈತರಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ಪೂರೈಸಬೇಕು ಹಾಗೂ ರಸಗೊಬ್ಬರಗಳಿಗೆ ಹೆಚ್ಚುವರಿ ಸಬ್ಸಿಡಿ ನೀಡಬೇಕು’ ಎಂದು ಆಗ್ರಹಿಸಿದರು.

‘ರೈತರು ಬೆಳೆದ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ವೈಜ್ಞಾನಿಕ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು. ಡಿಎಪಿ ಸೇರಿದಂತೆ ರಸಗೊಬ್ಬರ ಖರೀದಿಸುವ ವೇಳೆ ಇತರೆ ಉತ್ಪನ್ನಗಳನ್ನು ಕಡ್ಡಾಯವಾಗಿ ಖರೀದಿಸುವ ಲಿಂಕ್ ಪದ್ಧತಿಯನ್ನು ರದ್ದುಪಡಿಸಬೇಕು. ಗೊಬ್ಬರದ ಕಾಳಸಂತೆ ಮತ್ತು ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದರು.

‘ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಸಬ್ಸಿಡಿ ದರದಲ್ಲಿ ವಿತರಿಸಬೇಕು. ಗ್ರಾಮೀಣ ಪ್ರದೇಶದ ರೈತರ ಸಾಲ ಮನ್ನಾ ಮಾಡಬೇಕು ಹಾಗೂ ಬೆಳೆ ಹಾನಿಗೊಳಗಾದ ರೈತರಿಗೆ ತಕ್ಷಣ ಪರಿಹಾರ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಭಜಂತ್ರಿ ಮಾತನಾಡಿ, ‘ಸರ್ಕಾರಿ ಗೈರಾಣಿ ಭೂಮಿಯಲ್ಲಿ ಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಯಾವುದೇ ಸರ್ಕಾರಿ ಸೌಲಭ್ಯಗಳು ದೊರೆಯುತ್ತಿಲ್ಲ. ಅವರಿಗೆ ಬೀಜ, ರಸಗೊಬ್ಬರ ಸೇರಿದಂತೆ ಅಗತ್ಯ ಕೃಷಿ ಸೌಲಭ್ಯಗಳನ್ನು ತಕ್ಷಣ ಒದಗಿಸಬೇಕು. 40 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ’ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಗಿಡ ನೆಡುವ ಮೂಲಕ ವಿಶ್ವ ಪ್ರಕೃತಿ ಸಂರಕ್ಷಣೆ ದಿನ ಹಾಗೂ ಬುದ್ಧ ಪೂರ್ಣಿಮೆ ಆಚರಣೆ

ಸುದ್ದಿಗೋಷ್ಠಿಯಲ್ಲಿ ಮಹಾದೇವಿ ಭಜಂತ್ರಿ, ಯುವ ಮೋರ್ಚಾ ಕಾರ್ಯದರ್ಶಿ ಕರೆಪ್ಪ ಕರಗೂಡ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಆನ್‌ಲೈನ್ : ದೇವಿ ದರ್ಶನಕ್ಕೆ ಟಿಕೆಟ್ ಹಾಗೂ ಪ್ರಸಾದ ಲಭ್ಯವಿದೆ 

₹300 ಮತ್ತು ₹1,000 ವಿಶೇಷ ದರ್ಶನ ಟಿಕೆಟ್ಭ ಕ್ತರಿಗೆ ತ್ವರಿತ ಹಾಗೂ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...

ಹಾಸನ | ಜನರಿಗೆ ನದಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಶಾಸಕ ಎ.ಮಂಜು

ರಾಮನಾಥಪುರದ ಕಾವೇರಿ ನದಿಯ ವಹ್ನಿ ಪುಷ್ಕರಿಣಿಯಲ್ಲಿ ಮಂಗಳವಾರ ಹಾಸನ ಮತ್ತು ಕೊಡಗು...