ಹುಣಸೂರು | ಚಿಲ್ಕುಂದದಲ್ಲಿ ಮತ್ತೊಂದು ತಂಬಾಕು ಹರಾಜು ಮಾರುಕಟ್ಟೆ ಸ್ಥಾಪನೆಗೆ ರೈತ ಸಂಘ ಆಗ್ರಹ

Date:

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಲ್ಕುಂದ ತಂಬಾಕು ಹರಾಜು ಮಾರುಕಟ್ಟೆಗೆ ಮತ್ತೊಂದು ಹರಾಜು ಮಾರುಕಟ್ಟೆಯನ್ನು ಮಂಜೂರು ಮಾಡಿಕೊಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ತಂಬಾಕು ಬೆಳೆಗಾರರು ಬುಧವಾರ ಚಿಲ್ಕುಂದ ಪ್ಲಾಟ್‌ಫಾರಂಗೆ ಆಗಮಿಸಿದ್ದ ಹರಾಜು ನಿರ್ದೇಶಕ ಶ್ರೀನಿವಾಸ್ ಬಿ.ಸಿ. ಅವರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ, ಚಿಲ್ಕುಂದ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ವಿಶಾಲವಾದ ಜಾಗವಿದ್ದರೂ ಪ್ರಸ್ತುತ ಒಂದೇ ಮಾರುಕಟ್ಟೆ ಕಾರ್ಯನಿರ್ವಹಿಸುತ್ತಿರುವುದರಿಂದ ಈ ಭಾಗದ ಸಾವಿರಾರು ರೈತರು ತಂಬಾಕು ಮಾರಾಟಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಹರಾಜಿನಲ್ಲಿ ತಂಬಾಕು ಮಾರಾಟ ಮಾಡಲು ರೈತರಿಗೆ ಸರದಿ ಬರಲು ಸುಮಾರು ಒಂದು ತಿಂಗಳವರೆಗೆ ಕಾಯಬೇಕಾಗುತ್ತಿದೆ. ಇದರಿಂದ ಮಾರುಕಟ್ಟೆ ಅವಧಿ ಮುಕ್ತಾಯವಾಗುವ ವೇಳೆಗೆ ಅನೇಕ ರೈತರು ತಮ್ಮ ಉತ್ಪನ್ನವನ್ನು ಸಕಾಲದಲ್ಲಿ ಮಾರಾಟ ಮಾಡಲು ಸಾಧ್ಯವಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಸಮಸ್ಯೆಯನ್ನು ಹಲವು ವರ್ಷಗಳಿಂದ ರೈತರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಅನುಮತಿ ಪಡೆದು ಪ್ರಸಕ್ತ ಸಾಲಿನ ಹರಾಜು ಪ್ರಾರಂಭಕ್ಕೂ ಮುನ್ನವೇ ಚಿಲ್ಕುಂದದಲ್ಲಿ ಮತ್ತೊಂದು ತಂಬಾಕು ಹರಾಜು ಮಾರುಕಟ್ಟೆಗೆ ಮಂಜೂರಾತಿ ನೀಡಬೇಕು. ಅಗತ್ಯ ಕಟ್ಟಡ ನಿರ್ಮಿಸಿ ರೈತರ ಅನುಕೂಲಕ್ಕಾಗಿ ಹೊಸ ಮಾರುಕಟ್ಟೆಯನ್ನು ಆರಂಭಿಸುವಂತೆ ಹರಾಜು ನಿರ್ದೇಶಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಇದೇ ವೇಳೆ ತಂಬಾಕು ಬೆಳೆಗಾರರ ಆರೋಗ್ಯ ಭದ್ರತೆಗಾಗಿ ಘೋಷಿಸಲಾಗಿದ್ದ ಹೆಲ್ತ್ ಫಂಡ್ ಯೋಜನೆಯಡಿ ಪ್ರಸ್ತುತ ₹1 ಲಕ್ಷ ಪ್ರೀಮಿಯಂ ನೀಡುವುದಾಗಿ ತಿಳಿಸಲಾಗಿದ್ದರೂ ಇದುವರೆಗೆ ಜಾರಿಯಾಗಿಲ್ಲ. ಈ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವುದರ ಜೊತೆಗೆ ಆರೋಗ್ಯ ವಿಮೆ ಮೊತ್ತವನ್ನು ₹5 ಲಕ್ಷಕ್ಕೆ ಹೆಚ್ಚಿಸುವಂತೆ ರೈತರು ಒತ್ತಾಯಿಸಿದರು.

ಹರಾಜು ಮಾರುಕಟ್ಟೆಯ ಎಲ್ಲಾ ಫ್ಲೋರ್‌ಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವುದರಿಂದ ಪ್ರತಿಯೊಂದು ಫ್ಲೋರ್‌ಗೆ ಕ್ಯಾಂಟೀನ್, ರೈತ ಭವನ ಹಾಗೂ ವಿಶ್ರಾಂತಿ ಗೃಹಗಳನ್ನು ನಿರ್ಮಿಸಿ ರೈತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ?ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೇ.64ರಷ್ಟು ಬೋಧಕ ಹುದ್ದೆ ಖಾಲಿ: ಉನ್ನತ ಶಿಕ್ಷಣದ ಗುಣಮಟ್ಟಕ್ಕೆ ಗಂಭೀರ ಸವಾಲು

ಮನವಿ ಸಲ್ಲಿಕೆ ವೇಳೆ ತಂಬಾಕು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮೋದೂರು ಶಿವಣ್ಣ, ಗೌರವಾಧ್ಯಕ್ಷ ಉಂಡವಾಡಿ ಚಂದ್ರೇಗೌಡ, ವಿಕ್ರಂ ಗೌಡ, ಪ್ರಭಾಕರ ನಿಲುವಾಗಿಲು, ಚೆಲುವಯ್ಯ ಪಿರಿಯಾಪಟ್ಟಣ, ಪ್ರಕಾಶ್ ರಾಜ್ ಅರಸ್, ಕಿರಿಜಾಜಿ ಧನಂಜಯ, ಕರಿಗೌಡ, ಬಸವರಾಜು, ಮುತ್ತುರಾಜು, ಹರೀಶ್, ಸತೀಶ್ ಸೇರಿದಂತೆ ಹಲವಾರು ತಂಬಾಕು ಬೆಳೆಗಾರರು ಹಾಗೂ ರೈತ ಸಂಘದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...