ಮೈಸೂರು | ರೈತರಿಗೆ ಪರಿಹಾರ ಪಾವತಿ ಒತ್ತಾಯಿಸಿ ರೈತ ಸಂಘದಿಂದ ಅಹೋರಾತ್ರಿ ಧರಣಿ

Date:

ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕೋಚನಹಳ್ಳಿ ಹಾಗು ಹಿಮ್ಮಾವು ಗ್ರಾಮದ ರೈತರು ಗನ್ ಹೌಸ್ ವೃತ್ತದಿಂದ, ರಾಮಸ್ವಾಮಿ ವೃತ್ತದ ಮಾರ್ಗವಾಗಿ ಪಾದಯಾತ್ರೆ ತೆರಳಿ ಕೆ ಆರ್ ಎಸ್ ರಸ್ತೆಯಲ್ಲಿರುವ ಕೆಐಡಿಬಿ ಕಚೇರಿ ಮುಂಭಾಗದಲ್ಲಿ ರೈತರಿಗೆ ಪರಿಹಾರ ಪಾವತಿ ಮಾಡುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

- Advertisement -

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಮಾತನಾಡಿ, ಕೋಚನಹಳ್ಳಿ ಗ್ರಾಮದಲ್ಲಿ ಸುಮಾರು 160 ಎಕರೆ ರೈತರ ಭೂಮಿಯನ್ನು ಗಾಲ್ಫ್ ಕಂಪನಿಯವರು ವಶಕ್ಕೆ ಪಡೆದಿದ್ದಾರೆ. ಮುಖ್ಯವಾಗಿ ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವ ಭರವಸೆ ನೀಡಲಾಗಿತ್ತು. ಅಂದು ಜಿಲ್ಲಾಧಿಕಾರಿಯಾಗಿದ್ದ ಬಗಾದಿ ಗೌತಮ್ ಭೂ ಸಂತ್ರಸ್ತ ರೈತರು ಹಾಗು ಕಂಪನಿಯವರೊಂದಿಗೆ ಸಭೆ ನಡೆಸಿ ಉದ್ಯೋಗ ಕೊಡುವ ಭರವಸೆ ನೀಡಿ, ಆದೇಶ ಮಾಡಲಾಗಿತ್ತು. ಆದರೆ, ಇದುವರೆಗೆ ಭರವಸೆ ಈಡೇರಿಸದೆ ಮೋಸ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಹಿಮ್ಮಾವು ಗ್ರಾಮದಲ್ಲಿ ಸರಿ ಸುಮಾರು 1515 ಎಕರೆ ಭೂಮಿಯನ್ನು ಕೆಐಡಿಬಿ ಸ್ವಾಧೀನ ಪಡಿಸಿಕೊಂಡಿದೆ. ಅದರಲ್ಲಿ, 165 ಎಕರೆ ಭೂಮಿಯನ್ನು ಚಿತ್ರನಗರಿಗೆ ನೀಡಿದೆ. ಇದರಲ್ಲಿ ಗಮನಿಸಬೇಕಾದ ವಿಚಾರ ಎಂದರೆ 500 ಎಕರೆ ಭೂಮಿ ಗೋಮಾಳ ಎಂದು ತಿರುಚಿ ರೈತರಿಗೆ ಸಿಗಬೇಕಿದ್ದ ₹18 ಕೋಟಿ ರೂಪಾಯಿ ಪರಿಹಾರ ಹಣ ನೀಡದೆ ವ್ಯವಸ್ಥಿತವಾಗಿ ಮೋಸ ಮಾಡಲಾಗಿದೆ. ಇದೇ ಕಾರಣಕ್ಕಾಗಿ ಮರು ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಯಾವುದೇ ಹೊಸ ಭರವಸೆ ಹುಟ್ಟು ಹಾಕದ ಬಜೆಟ್: ಬಡಗಲಪುರ ನಾಗೇಂದ್ರ

ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ನೇತ್ರಾವತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ, ಗ್ರಾಮಾಂತರ ತಾಲ್ಲೂಕು ಅಧ್ಯಕ್ಷ ಆನಂದೂರು ಪ್ರಭಾಕರ್, ಚಂದ್ರಶೇಖರ್ ಮೇಟಿ, ಉಗ್ರ ನರಸಿಂಹೆಗೌಡ, ಮಂಡಕಳ್ಳಿ ಮಹೇಶ್, ಯುವ ಘಟಕದ ಪ್ರೇಮ್ ರಾಜ್ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...