ಕೆ ಆರ್ ಪೇಟೆ | ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ತಡೆಗಟ್ಟುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

Date:

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಚಾರ ತಡೆಗಟ್ಟುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

- Advertisement -

ಅನಿರ್ಧಿಷ್ಟಾವಧಿ ಧರಣಿಗೆ ಮುಂದಾಗಿರುವ ರೈತ ಸಂಘದ ಮುಖಂಡರು, ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರೊಂದಿಗೆ ತಾಲ್ಲೂಕು ಕಚೇರಿ ಮುತ್ತಿಗೆ ಹಾಕಿ ಶಂಖ, ಜಾಗಟೆ, ತುತ್ತೂರಿ ಊದುವ ಮೂಲಕ ಭ್ರಷ್ಟ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ತಾಲ್ಲೂಕಿನಾದ್ಯಂತ ಭ್ರಷ್ಟಾಚಾರ ಮಿತಿಮೀರಿದ್ದು ಗವೀಮಠದ ಮೊರಾರ್ಜಿ ವಸತಿ ಶಾಲೆಯ ಅಕ್ಕಿ ಹಗರಣ, ಕಂದಾಯ ಇಲಾಖೆಯಲ್ಲಿ ಅಕ್ರಮವಾಗಿ ಪೌತಿ ಖಾತೆ ಮಾಡಿ ರೈತರಿಗೆ ಕಿರುಕುಳ ನೀಡುತ್ತಿರುವುದರ ವಿರುದ್ಧ ನಿರಂತರವಾಗಿ ದೂರು ನೀಡಿದರು, ಪ್ರತಿಭಟನೆ ನಡೆಸಿ ಮನವಿ ನೀಡಿದರು ಕಾನೂನು ರೀತ್ಯಾ ಕ್ರಮ ಕೈಗೊಳ್ಳದ ತಾಲ್ಲೂಕು, ಜಿಲ್ಲಾ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ರೈತ ಮುಖಂಡರಾದ ಎಂ.ವಿ. ರಾಜೇಗೌಡ ಮಾತನಾಡಿ, “ಶಿಕ್ಷಣ ಇಲಾಖೆ ಸೂಚನೆ ಮೇರೆಗೆ ತಾಲ್ಲೂಕು ಟಿಎಪಿಸಿಎಂಎಸ್‌ನ ಗೋದಾಮಿನಿಂದ ಎತ್ತುವಳಿಯಾದ ಅಕ್ಕಿ, ಗವೀಮಠ ವಸತಿ ಶಾಲೆಗೆ ತಲುಪುವ ಬದಲು ಪಟ್ಟಣದ ಖಾಸಗಿ ಅಕ್ಕಿ ಗಿರಣಿಗೆ ಹೋಗಿದೆ. ದಿನಾಂಕ-17-03-2026 ಅಕ್ಕಿ ದಾಸ್ತಾನಿನ ಲಾರಿ ಸಮೇತ ಪತ್ತೆ ಹಚ್ಚಿದ ತಾಲ್ಲೂಕು ರೈತ ಸಂಘದ ಕರೋಟಿ ತಮ್ಮೆಗೌಡ ಹಾಗೂ ಮರುವಿನಹಳ್ಳಿ ಶಂಕರ್ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರು. ಲಾರಿ ವಶಕ್ಕೆ ಪಡೆದು ಪ್ರಕರಣ ದಾಖಲಾಗಿತ್ತು. ಆದರೆ, 21 ದಿನ ಕಳೆದರು ಇದುವರೆಗೂ ಯಾವುದೇ ತನಿಖೆಯಾಗಿಲ್ಲ. ವಸತಿ ಶಾಲೆಗೆ ಸೇರಬೇಕಾದ ಅಕ್ಕಿಯನ್ನು ಖಾಸಗಿ ಅಕ್ಕಿ ಗಿರಣಿಗೆ ಸಾಗಿಸಿದ್ದಾದರು ಏಕೆ? ಎಂಬುದಕ್ಕೆ ಉತ್ತರ ಸಿಕ್ಕಿಲ್ಲ. ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ದಾಖಲೆ ಸಮೇತ ಮಾಹಿತಿ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಉತ್ತರ ನೀಡಬೇಕು” ಎಂದು ಆಗ್ರಹಿಸಿದರು.

ತಾಲ್ಲೂಕು ಅಧ್ಯಕ್ಷರಾದ ಕಾರಿಗನಹಳ್ಳಿ ಪುಟ್ಟೇಗೌಡ ಮಾತನಾಡಿ, “ತಾಲ್ಲೂಕಿನಾದ್ಯಂತ ಸರ್ಕಾರಿ ಕಛೇರಿಗಳಲ್ಲಿ ರೈತರ ಕೆಲಸ ಆಗುತ್ತಿಲ್ಲ. ಬಹುತೇಕ ಅಧಿಕಾರಿಗಳು ದಲ್ಲಾಳಿಗಳನ್ನು ನೇಮಕ ಮಾಡಿಕೊಂಡಿದ್ದು ಕಮೀಷನ್ ದಂದೆಯಲ್ಲಿ ಮುಳುಗಿದ್ದಾರೆ. ರೈತರ ಕೆಲಸಗಳು ವಿಳಂಬವಾಗುತ್ತಿದೆ. ಅದರಲ್ಲೂ ಅಕ್ರಮ ಪೌತಿ ಖಾತೆ ಮಾಡಿ ದುಡ್ಡು ಮಾಡುವ ಕೆಲಸ ಎಗ್ಗಿಲ್ಲದೆ ಸಾಗಿದೆ. ಕಚೇರಿಗಳಲ್ಲಿ ಕೆಲಸ ಆಗಬೇಕು ಅಂದರೆ ದಲ್ಲಾಳಿಗಳ ಮೂಲಕ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಭ್ರಷ್ಟ ಅಧಿಕಾರಿಗಳೇ ಕಾರಣ” ಎಂದು ಆರೋಪ ಮಾಡಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಡಾ. ಎಸ್.ಯು. ಅಶೋಕ್ ಏಪ್ರಿಲ್.18ರಂದು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಒಳಗೊಂಡಂತೆ ರೈತರ ಸಮ್ಮುಖದಲ್ಲಿ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ, ಅದುವರೆಗೆ ಪ್ರತಿಭಟನೆಯನ್ನು ಕೈಬಿಡುವಂತೆ ಮನವಿ ಮಾಡಿದರು. ಆದರೆ, ರೈತ ಸಂಘದ ಮುಖಂಡರು ತಹಶೀಲ್ದಾರ್ ಅವರ ಮನವಿ ತಿರಸ್ಕರಿಸಿ, ಕೂಡಲೇ ಕ್ರಮಕ್ಕೆ ಮುಂದಾಗುವಂತೆ ಆಗ್ರಹಿಸಿ ಧರಣಿ ಮುಂದುವರೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಏಕರೂಪ ಶಿಕ್ಷಣಕ್ಕಾಗಿ ಆಗ್ರಹಿಸಿ ರೈತ ಸಂಘದಿಂದ 1295ಕಿಮೀ ಪಾದಯಾತ್ರೆ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಮಹಿಳಾ ಘಟಕದ ಮಾಜಿ ರಾಜ್ಯಾಧ್ಯಕ್ಷರಾದ ನಂದಿನಿ ಜಯರಾಂ, ಕೆ.ಆರ್. ಜಯರಾಂ, ಎಲ್.ಬಿ. ಜಗದೀಶ್, ಕರೋಟಿ ತಮ್ಮೆಗೌಡ, ಬೂಕನಕೆರೆ ನಾಗರಾಜು, ಮಡುವಿನಕೋಡಿ ಪ್ರಕಾಶ್, ಕೃಷ್ಣಾಪುರ ರಾಜಣ್ಣ, ಸಿಂಧುಘಟ್ಟ ಮುದ್ದುಕುಮಾರ್, ನಗರೂರು ಕುಮಾರ್, ಅಕ್ಕಿಮಂಚನಹಳ್ಳಿ ಹೊನ್ನೇಗೌಡ, ಬೇಲದಕೆರೆ ಶಿವಣ್ಣ, ಚೌಡೇನಹಳ್ಳಿ ಕೃಷ್ಣಗೌಡ, ನೀತಿಮಂಗಲ ಮಹೇಶ್, ಹಿರೀಕಳಲೆ ಬಸವರಾಜು, ಲಕ್ಷ್ಮೀಪುರ ನಾಗರಾಜು, ನಾರಾಯಣಸ್ವಾಮಿ, ಕೆ.ಆರ್.ಎಸ್ ನಾಗರಾಜು ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...