ಪಿರಿಯಾಪಟ್ಟಣ | ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದ ಜಮೀನಿಗೆ ಅಕ್ರಮ ಖಾತೆ ಆರೋಪ: ತಹಶೀಲ್ದಾರ್‌ಗೆ ರೈತರ ಮುತ್ತಿಗೆ

Date:

ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಜಮೀನಿಗೆ ಕಂದಾಯ ಇಲಾಖೆ ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ತಹಶೀಲ್ದಾರ್ ನಿಸರ್ಗ ಪ್ರಿಯಾ ಅವರಿಗೆ ರೈತರು ಮುತ್ತಿಗೆ ಹಾಕಿದ ಘಟನೆ ಗುರುವಾರ ನಡೆದಿದೆ.

- Advertisement -

ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಹೋಬಳಿಯ ದೊಡ್ಡೇಗೌಡನಕೊಪ್ಪಲು ಗ್ರಾಮದ ರೈತ ಡಿ.ಪಿ. ನಾಗೇಶ್ ಅವರ ಕುಟುಂಬದ ಸದಸ್ಯರು ಹಾಗೂ ಸುಮಾರು 50ಕ್ಕೂ ಹೆಚ್ಚು ರೈತರು ತಾಲ್ಲೂಕು ಆಡಳಿತ ಭವನದಲ್ಲಿರುವ ತಹಶೀಲ್ದಾರ್ ಕಚೇರಿಗೆ ತೆರಳಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಪಿ. ನಾಗೇಶ್, ನಾಗನಹಳ್ಳಿ ಗ್ರಾಮದ ಸರ್ವೆ ನಂ.145/2ರಲ್ಲಿ ತಮ್ಮ ಕುಟುಂಬದ ಸಣ್ಣೇಗೌಡ, ಕಲ್ಲೇಗೌಡ ಹಾಗೂ ಜವರೇಗೌಡ ಅವರಿಗೆ ಸೇರಿದ 3.26 ಎಕರೆ ಪಿತ್ರಾರ್ಜಿತ ಜಮೀನು ಇದೆ. ಕಲ್ಲೇಗೌಡ ಅವರು ತಮ್ಮ ಪಾಲಿನ ಜಮೀನನ್ನು ಜವರೇಗೌಡ ಅವರಿಗೆ ಮಾರಾಟ ಮಾಡಿದ್ದು, ನಂತರ ಅವರ ಮಕ್ಕಳು ಪಾಲು ಕೇಳಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಬಳಿಕ 2014ರಲ್ಲಿ ಕಲ್ಲೇಗೌಡ ಹಾಗೂ ಸಣ್ಣೇಗೌಡ ಅವರ ಮಕ್ಕಳು ಮತ್ತೊಮ್ಮೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ ಎಂದು ತಿಳಿಸಿದರು.

ಇಂತಹ ಪರಿಸ್ಥಿತಿಯಲ್ಲಿ 2025ರಲ್ಲಿ ತಮ್ಮದೇ ಗ್ರಾಮದ ಅಣ್ಣೇಗೌಡ ಹಾಗೂ ರಾಮೇಗೌಡ ಅವರು ತಮ್ಮ ಪುತ್ರಿಯರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಖಾತೆ ಮಾಡಿಸಿಕೊಂಡಿದ್ದಾರೆ. ಈ ಜಮೀನಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ. ಆದರೂ ಬೆಟ್ಟದಪುರ ಹೋಬಳಿಯ ಗ್ರಾಮ ಲೆಕ್ಕಾಧಿಕಾರಿ ನಿರಂಜನ್, ಅಂದಿನ ರಾಜಸ್ವ ನಿರೀಕ್ಷಕ ಅಜ್ಮಲ್ ಶರೀಫ್ ಹಾಗೂ ತಹಶೀಲ್ದಾರ್ ನಿಸರ್ಗ ಪ್ರಿಯಾ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಆಕ್ರೋಶಗೊಂಡ ನಾಗೇಶ್ ಕುಟುಂಬದ ಸದಸ್ಯರು ತಹಶೀಲ್ದಾರ್ ಕಚೇರಿಗೆ ನುಗ್ಗಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಈ ಅವ್ಯವಹಾರಕ್ಕೆ ನೀವೇ ಕಾರಣ. ಸಂಬಂಧವಿಲ್ಲದವರಿಗೆ ನಕಲಿ ದಾಖಲೆಗಳ ಆಧಾರದಲ್ಲಿ ಖಾತೆ ಮಾಡಿಕೊಟ್ಟು ನಮಗೆ ಅನ್ಯಾಯ ಮಾಡಿದ್ದೀರಿ. ಕೂಡಲೇ ಈ ತಪ್ಪನ್ನು ಸರಿಪಡಿಸದಿದ್ದರೆ ನಮ್ಮ ಕುಟುಂಬದ 30 ಮಂದಿ ನಿಮ್ಮ ಹೆಸರನ್ನು ಬರೆದಿಟ್ಟು ಇದೇ ಕಚೇರಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬಳಿಕ ಬೆಟ್ಟದ ತುಂಗಾ ಮೇಗಳಕೊಪ್ಪಲು ಗ್ರಾಮದ ಮುಖಂಡ ಚಿಕ್ಕೇಗೌಡ ಹಾಗೂ ರೈತ ಸಂಘದ ಮುಖಂಡ ದೇವರಾಜೇಗೌಡ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು. ತಹಶೀಲ್ದಾರ್ ಅವರೊಂದಿಗೆ ಮಾತುಕತೆ ನಡೆಸಿ, ವಿಷಯವನ್ನು ಶಾಸಕ ಕೆ. ವೆಂಕಟೇಶ್ ಅವರ ಗಮನಕ್ಕೆ ತಂದು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಇದು ನಾಗೇಶ್ ಅವರ ಕುಟುಂಬದ ಪಿತ್ರಾರ್ಜಿತ ಆಸ್ತಿಯಾಗಿದ್ದು, ಹಲವು ದಶಕಗಳಿಂದ ಅವರ ಪೂರ್ವಿಕರು ಉಳುಮೆ ಮಾಡಿಕೊಂಡು ಬರುತ್ತಿದ್ದಾರೆ. ದಾಖಲೆಗಳಲ್ಲಿನ ವ್ಯತ್ಯಾಸದಿಂದ ಸಮಸ್ಯೆ ಉಂಟಾಗಿದೆ. ಈ ಅನ್ಯಾಯವನ್ನು ಸರಿಪಡಿಸುವ ಜವಾಬ್ದಾರಿ ಕಂದಾಯ ಇಲಾಖೆಯ ಮೇಲಿದೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಮುಖಂಡರು ಆಗ್ರಹಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೇ.64ರಷ್ಟು ಬೋಧಕ ಹುದ್ದೆ ಖಾಲಿ: ಉನ್ನತ ಶಿಕ್ಷಣದ ಗುಣಮಟ್ಟಕ್ಕೆ ಗಂಭೀರ ಸವಾಲು

ಈ ಸಂದರ್ಭದಲ್ಲಿ ಮುಖಂಡರಾದ ಪ್ರಭುಗೌಡ, ಮಧು, ಬಸವರಾಜು, ನಾಗೇಗೌಡ, ಕಲ್ಲೇಶ್, ಈರಯ್ಯಚಾರ್, ಯಶೋಧರ್, ಸಾಲುಕೊಪ್ಪಲು ಕಿಟ್ಟಿ, ಪುಟ್ಟರಾಜು, ಅಲ್ಪನಾಯಕನಹಳ್ಳಿ ಭೀಮಾ, ಡಿ.ಜಿ. ಕೊಪ್ಪಲು ಪ್ರಸನ್ನ, ರೇವಣ್ಣ, ಸತೀಶ್, ಮಧು, ಸುರೇಶ್, ನಾಗರಾಜ್, ಹರೀಶ್ ಹಾಗೂ ನಾಗೇಶ್ ಅವರ ಕುಟುಂಬದ ಸದಸ್ಯರಾದ ಜವರೇಗೌಡ, ಸಣ್ಣ ತಮ್ಮೇಗೌಡ, ಪುಟ್ಟ ತಮ್ಮೇಗೌಡ, ಲಲಿತಮ್ಮ, ತಾಯಮ್ಮ, ಲೋಕೇಶ್, ಸವಿತಾ, ಯಶೋಧಾ, ಕಲ್ಪನಾ, ತಮ್ಮೇಗೌಡ, ಜಗಣ್ಣ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....