ಬೀದರ್‌ | ಡಿ. 23 ರಂದು ಬೆಂಗಳೂರಿನಲ್ಲಿ ರೈತ ಸಮಾವೇಶ: ರೈತರ ಸಂಪೂರ್ಣ ಸಾಲ ಮನ್ನಾ ಘೋಷಣೆಗೆ ಆಗ್ರಹ

Date:

Advertisements

ರಾಜ್ಯದ ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ, ಯಾವುದೇ ನಷ್ಟ ಪರಿಹಾರ ನ್ಯಾಯಯುತವಾಗಿ ನೆರವು ನೀಡದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚೆಲ್ಲಾಟವಾಡುತ್ತಿವೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.

ಮಂಗಳವಾರ ಬೀದರ್‌ನ ನಗರದ ಕಾರಂಜಾ ಸಂತ್ರಸ್ತರ ಹೋರಾಟಕ್ಕೆ ಬೆಂಬಲ ಘೋಷಿಸಿ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಕೆಗೆ ಒತ್ತಾಯಿಸಿ ಡಿ. 23 ರಂದು ಬೆಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಬೃಹತ್ ರೈತ ಸಮಾವೇಶ‌ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

“ರಾಜ್ಯದ 223 ತಾಲೂಕುಗಳು ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿವೆ. ಕೃಷಿ ಸಾಲ ಪಡೆದ ರೈತರು ಬೆಳೆಗೆ ಹೂಡಿಕೆ ಮಾಡಿದ್ದಾರೆ. ಬರಗಾಲ ಅತಿವೃಷ್ಟಿ ಕಾರಣಗಳಿಂದ ಬೆಳೆ ನಾಶವಾಗಿ ರೈತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾನೆ. ಆದರೆ ಸರ್ಕಾರಗಳು ಕೈಗಾರಿಕೆಗಳಿಗೆ, ಉದ್ಯಮಿಗಳಿಗೆ ಸಂಕಷ್ಟದ ನೆರವು ಸಾಲ ಮನ್ನಾ ಮಾಡಿರುವ ರೀತಿ, ರೈತರ ಎಲ್ಲಾ ಬ್ಯಾಂಕು ಹಾಗೂ ಸಹಕಾರ ಸಂಘಗಳ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಲೇಬೇಕೆಂದು ರೈತ ಸಮಾವೇಶದಲ್ಲಿ ಒತ್ತಾಯಿಸಲಾಗುತ್ತಿದೆ” ಎಂದರು.

Advertisements

ರೈತರ ವಿವಿಧ ಬೇಡಿಕೆಗಳು ರೈತ ಸಮಾವೇಶದಲ್ಲಿ ಚರ್ಚೆ ನಡೆಸಿ ಕೇಂದ್ರ ರಾಜ್ಯ ಸರ್ಕಾರಗಳನ್ನು ಎಚ್ಚರಿಸಲಾಗುವುದು. ರೈತರನ್ನು ಜಾಗೃತಗೊಳಿಸಿ ದೇಶದ ಎಲ್ಲಾ ರೈತರು ರಾಜಕೀಯೇತರವಾಗಿ ಪ್ರಬಲವಾಗಿ ಹೋರಾಟ ರೂಪಿಸಲು ದೇಶದ ಎಲ್ಲಾ ರೈತ ಮುಖಂಡರು ರೈತ ಅಧಿವೇಶದಲ್ಲಿ ಭಾಗವಹಿಸುತ್ತಿದ್ದಾರೆ. ರಾಜ್ಯದ್ಯಂತ ಇರುವ ಎಲ್ಲಾ ರೈತ ಸಂಘಟನೆಗಳ ಮುಖಂಡರು, ರೈತರು ಭಾಗವಹಿಸಿ ಈ ಸಮಾವೇಶಕ್ಕೆ ಬೆಂಬಲಿಸಬೇಕು” ಎಂದರು.

ರೈತರ ಪ್ರಮುಖ ಬೇಡಿಕೆಗಳು: 

  1. ಪ್ರತಿ ಟನ್ ಕಬ್ಬು ಉತ್ಪಾದನಾ ವೆಚ್ಚ 3580 ರೂ. ತಗಲುತ್ತದೆ. ಆದ್ದರಿಂದ ಎಫ್‌ ಆರ್‌ ಪಿ ದರ ಟನ್ ಗೆ ಕನಿಷ್ಠ 4 ಸಾವಿರ ನಿಗದಿ ಮಾಡಬೇಕು ಹಾಗೂ ಕಳೆದ ವರ್ಷದ ಹೆಚ್ಚುವರಿ ನಿಗದಿಪಡಿಸಿದ 150ರೂ. ಕಬ್ಬಿನ ಬಾಕಿ ಹಣ ಕಾರ್ಖಾನೆಗಳಿಂದ ಕೊಡಿಸಬೇಕು.

2. ಬರಗಾಲ ಪೀಡಿತ ಪ್ರದೇಶದ ರೈತರಿಗೆ ಕೂಡಲೇ ಬರ ಪರಿಹಾರ ನಷ್ಟ ಎಕರೆಗೆ 25,000 ನೀಡಬೇಕು. ಈಗ ಸರ್ಕಾರ ನಿಗದಿ ಮಾಡಿರುವ ಎಕರೆಗೆ 5,100 ಭಿಕ್ಷಾ ರೂಪದ ಹಣ ಬೇಕಾಗಿಲ್ಲ.

3. ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ ಮಾಡಬೇಕು, ಸ್ವಾಮಿನಾಥನ್ ಆಯೋಗದಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು.

4. ಎಲ್ಲಾ ಕೃಷಿ ಉತ್ಪನ್ನಗಳಿಗೆ ಕಡ್ಡಾಯವಾಗಿ ಬೆಳೆ ವಿಮೆಯನ್ನು ಜಾರಿಗೊಳಿಸಬೇಕು. ಅತಿವೃಷ್ಟಿ ಬರ ನಷ್ಟ ಪರಿಹಾರ ಬೆಳೆ ವಿಮೆ ವ್ಯಾಪ್ತಿಯಲ್ಲಿ ನಷ್ಟ ಪರಿಹಾರ ಸಿಗುವಂತಾಗಬೇಕು. ಬೆಳೆ ವಿಮಾ ನಷ್ಟ ಪರಿಹಾರ ಸರಳೀಕರಣವಾಗಬೇಕು.

5. ದೇಶದ ಒಟ್ಟು ಜನತೆಗೆ ಆಹಾರ ಉತ್ಪಾದಿಸಲು ತಮ್ಮ ಜೀವನವನ್ನೆ ತ್ಯಾಗ ಮಾಡುತ್ತಿರುವ 60 ವರ್ಷ ಪೂರೈಸಿದ ರೈತರಿಗೆ ತಿಂಗಳಿಗೆ ಕನಿಷ್ಠ 5 ಸಾವಿರ ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು.

6. ಕೃಷಿಪಂಪ್ ಸೇಟ್ ಗಳ ವಿದ್ಯುತ್ ಖಾಸಗಿಕರಣ ನೀತಿಯನ್ನು ಕೇಂದ್ರ ಸರ್ಕಾರ ಕೈ ಬಿಡಬೇಕು,
ರಾಜ್ಯ ಸರ್ಕಾರ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಕೃಷಿ ಪಂಪ್ ಸೆಟ್‌ ಗಳಿಗೆ ಹಗಲು ವೇಳೆ ನಿರಂತರ 10 ಗಂಟೆಗಳ ವಿದ್ಯುತ್ ಪೂರೈಸಬೇಕು.

7. ಕಾರಂಜಾ ಭೂ ಸಂತ್ರಸ್ತ ಹೋರಾಟಗಾರ ಸಮಸ್ಯೆ ಕೂಡಲೇ ಬಗೆಹರಿಸಬೇಕು

ಈ ಸುದ್ದಿ ಓದಿದ್ದೀರಾ? ಅತ್ಯಾಚಾರ ಪ್ರಕರಣ | ಆರೋಪಿಯೊಂದಿಗೆ ವಿವಾಹವಾಗಲು ಒಪ್ಪಿದ ಸಂತ್ರಸ್ತೆ; ಆರೋಪಿಗೆ ಒಂದು ತಿಂಗಳ ಗಡುವು ನೀಡಿದ ಹೈಕೋರ್ಟ್‌

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಬಸವರಾಜ ಪಾಟೀಲ್ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಕಲ್ಬುರ್ಗಿ ಜಿಲ್ಲಾಧ್ಯಕ್ಷ ರಮೇಶ್ ಉಗಾರ್, ಬೀದರ್ ಜಿಲ್ಲಾ ಸಂಚಾಲಕ ಕಾಶಿನಾಥ್ ಬಿರಾದಾರ್, ಬೀದರ್‌ ಜಿಲ್ಲಾ ರೈತ ಸಂಘ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಸ್ವಾಮಿ ಸೇರಿದಂತೆ ತೈರ ಸಂಘದ ಪ್ರಮುಖರಾದ  ನಾಗಶೆಟ್ಟೆಪ್ಪ ನಂದ್ವಾಡ. ಚಂದ್ರಶೇಖರ್ ಪಾಟೀಲ್, ಬಸವರಾಜ್ ಅಷ್ಟೂರ್‌, ವಿನೋದ್ ಚಿಂತಾಮಣಿ, ವೀರಾರೆಡ್ಡಿ ಪಾಟೀಲ್‌, ಸಂತೋಷ್ ಕುಮಾರ್ ಗುದುಗೆ, ಕರಬಸಪ್ಪ ಹುಡುಗಿ , ಗುಂಡರಾವ್ ಕುಲಕರ್ಣಿ ವಿಠಲರಾವ್ ಮೇತ್ರಿ, ಲಲಿತಾಬಾಯಿ, ಖಾಸಿಂ ಅಲಿ, ವಿಜಯ್ ಕುಮಾರ್ ಬಾವಗಿ, ಶಿವಕಾಂತ್ ಖಂಡೆ, ಖಾಸೀಂ ಖಾನ್‌ ಸೇರಿದಂತೆ ಇತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X