ಮೈಸೂರು | ಅ.18 ರಂದು ಯಾದಗಿರಿಯಲ್ಲಿ ರೈತ ಸಮಾವೇಶ : ಬಡಗಲಪುರ ನಾಗೇಂದ್ರ

Date:

ಮೈಸೂರಿನ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, ಇದೇ ಅಕ್ಟೋಬರ್.18 ರಂದು ಯಾದಗಿರಿಯಲ್ಲಿ ರೈತ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.

- Advertisement -

“ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರಕ್ಕಾಗಲಿ, ಕೇಂದ್ರ ಸರ್ಕಾರಕ್ಕಾಗಲಿ ರೈತರ ಕಾಳಜಿಯಿಲ್ಲ. ಇಂತಹ ಸಂದರ್ಭದಲ್ಲಿ ರೈತರ ಪರವಾಗಿ ನಿಲ್ಲಬೇಕಿದೆ. ರೈತರ ಸಾಲ ಮನ್ನಾ ಸೇರಿದಂತೆ, ಹೆಚ್ಚು ಮಳೆಯಿಂದ, ಬರದಿಂದ ನಷ್ಟ ಹೊಂದಿದ ರೈತರಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ‘ರೈತ ಸಮಾವೇಶ’ ನಡೆಸುತ್ತಿರುವುದಾಗಿ” ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸತತವಾಗಿ ರೈತರು ಒಂದಲ್ಲಾ ಒಂದು ಸಮಸ್ಯೆಗೆ ಸಿಲುಕುತಿದ್ದಾರೆ. ರಾಜ್ಯದಲ್ಲಿ ಒಂದೊಂದು ಕಡೆ ಮಳೆಯಾಗದೆ ಬರದ ಪರಿಸ್ಥಿತಿ, ಇನ್ನೊಂದು ಕಡೆ ಬರಪೂರ ಮಳೆ. ರೈತ ಬೆಳೆ ಬೆಳೆಯಲು, ಬೆಳೆದ ಬೆಳೆ ಉಳಿಸಿಕೊಳ್ಳಲು ಪರದಾಡುವ ಪರಿಸ್ಥಿತಿ ಎದುರಾಗಿದೆ. ಅದಲ್ಲದೆ, ಇತ್ತೀಚಿಗೆ ವರ್ಷದ ಮಳೆಯಾಗಿ ಪರಿಣಮಿಸಿದ್ದರಿಂದ ರೈತ ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎನ್ನುವುದೇ ತಿಳಿಯದ ಪರಿಸ್ಥಿತಿಯು ನಿರ್ಮಾಣವಾಗಿದೆ.

ಅಂಕಿ ಅಂಶಗಳ ಪ್ರಕಾರ ಹೇಳುವುದಾದರೆ 2002 ನೇ ಸಾಲಿನಿಂದ ಈಚೆಗೆ 23 ವರ್ಷಗಳ ಅವಧಿಯಲ್ಲಿ 17 ಬಾರಿ ಅತಿವೃಷ್ಟಿ, 4 ಬಾರಿ ಬರ ಕಂಡಿದ್ದೇವೆ. ಹೀಗಾದರೆ ರೈತರ ಕಥೆಯೇನು? ಎನ್ನುವುದು ನಮ್ಮುಂದಿರುವ ಪ್ರಶ್ನೆ.

ಒಂದೆಡೆ ಅತಿಯಾದ ಮಳೆಯಿಂದ ಬೆಳೆ ನೆಲ ಕಚ್ಚಿದೆ, ಇನ್ನೊಂದೆಡೆ ಬರದಿಂದ ಬೆಳೆಯಾಗಿಲ್ಲ, ಕೆಲವು ಕಡೆ ಕಳಪೆ ಬಿತ್ತನೆ ಬೀಜದಿಂದ ರೈತ ನಷ್ಟ ಅನುಭವಿಸಿದ್ದಾನೆ ಇದನ್ನೆಲ್ಲಾ ಪರಿಗಣಿಸಿ ಸರ್ಕಾರ ಸೂಕ್ತವಾದ ಪರಿಹಾರವನ್ನು ಎಕರೆ ಅನುಸಾರ ನೀಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಾಹಿತಿ ಹಕ್ಕು ಅನುಷ್ಠಾನ ಸಭೆ; ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ

ಪತ್ರಿಕಾಗೋಷ್ಠಿಯಲ್ಲಿ ವಿಭಾಗಿಯ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಮೈಸೂರು ಗ್ರಾಮಾಂತರ ಕಾರ್ಯದರ್ಶಿ ಮಂಟಕಳ್ಳಿ ಮಹೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...