ಕೆಐಎಡಿಬಿ ಅಧಿಸೂಚನೆ ಕೈ ಬಿಡುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿದ 13 ಹಳ್ಳಿಗಳ ರೈತರು

Date:

ಚಿಕ್ಕಬಳ್ಳಾಪುರ: ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2334 ಎಕರೆ ಭೂಮಿಗೆ ಸಂಬಂಧಿಸಿದಂತೆ ಕೆಐಎಡಿಬಿ (KIADB) ಅಧಿಸೂಚನೆ ವಾಪಸ್ಸು ಪಡೆಯಬೇಕು. ಫಲವತ್ತಾದ ಭೂಮಿಯಲ್ಲಿ ಕೈಗಾರಿಕೆ ಮಾಡಲು ಹೊರಟಿರುವ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಟ್ರಾಕ್ಟರ್ ಅಡ್ಡ ನಿಲ್ಲಿಸಿ ಬಿರುಬಿಸಿಲಿನಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

- Advertisement -

ಜಿಲ್ಲಾಡಳಿತ ಭವನದ ಎದುರು ಕಳೆದ 22 ದಿನಗಳಿಂದ ನಡೆಸುತ್ತಿರುವ ನಮ್ಮ ಭೂಮಿ ನಮ್ಮ ಹಕ್ಕು ಅನಿರ್ಧಿಷ್ಟ ಆಹೋರಾತ್ರಿ ಹೋರಾಟ ಸೋಮವಾರ ಉಗ್ರಸ್ವರೂಪ ತಾಳಿದ್ದು ಸರಕಾರ ಜಿಲ್ಲಾಡಳಿತ ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಿ 11 ಗಂಟೆ ಯಿಂದ 2 ಗಂಟೆ ತನಕ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಕೋಡಿಹಳ್ಳಿ ಬಣದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ, ನಾವು ಕೈಗಾರಿಕೆ ಸ್ಥಾಪನೆಗೆ ವಿರೋಧಿಸುತ್ತಿಲ್ಲ. ಆದರೆ ಎಲ್ಲಾ ವರ್ಗದ ಭೂಮಿ ಜಂಗಮಕೋಟೆ ಹೋಬಳಿಯಲ್ಲಿ ಇದೆ. ಈ ಭಾಗದಲ್ಲಿ ಸರಕಾರ ಉದ್ದೇಶಿಸಿರುವ ಕೈಗಾರಿಕಾ ಪ್ರಸ್ತಾವನೆ ಕೂಡಲೇ ಕೈಬಿಡಬೇಕು. ಕಾರಣ ಈ ಭೂಮಿ ಫಲವತ್ತಾದ ಕೃಷಿ ಭೂಮಿ ಯಾಗಿದೆ. ಕೈಗಾರಿಕೆಗೆ ಯಾವ ಭೂಮಿ ಬಳಸಬೇಕು ಎಂಬ ಬಗ್ಗೆ ಮಾರ್ಗದರ್ಶಿ ಸೂತ್ರವಿದೆ. ಸಿ ವರ್ಗದ ಭೂಮಿಯಲ್ಲಿ ಕೈಗಾರಿಕೆ ಮಾಡಬೇಕು. ಇದನ್ನು ಬಿಟ್ಟು ಎಲ್ಲಾ ವರ್ಗದ ಭೂಮಿ ಯಲ್ಲಿ ಮಾಡಲು ಹೊರಟಿರುವುದರ ಔಚಿತ್ಯವಾದರೂ ಏನು ಎಂದು ಪ್ರಶ್ನಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕ ರವಿಕುಮಾರ್ ಕುಮ್ಮಕ್ಕಿನಿಂದ ಸರಕಾರ ರೈತ ಸಂಘದ 22 ತಿಂಗಳ ಹೋರಾಟದ ನಡುವೆ ಇಲ್ಲಿಯೇ ಕೈಗಾರಿಕೆ ಮಾಡಲು ಹೊರಟಿದೆ. ಮೇಲಾಗಿ ನಮ್ಮ ವಿರುದ್ದ ಮತ್ತೊಂದು ಸಂಘಟನೆಯನ್ನು ಎತ್ತಿ ಕಟ್ಟಿ ಹೋರಾಟ ಮಾಡಲು ಬಿಟ್ಟು ರೈತರ ನಡುವೆ ಬಿರುಕು ಉಂಟು ಮಾಡಿದ್ದಾರೆ. ಇಷ್ಟೇ ಅಲ್ಲದೆ ಏ.6ರಿಂದ 13 ಹಳ್ಳಿಗಳ ರೈತರೊಂದಿಗೆ ದರ ನಿಗದಿ ಮಾಡಲು ಮುಂದಾಗಿದೆ.

ಇಲ್ಲಿ ಭೂಮಿ ಕೊಡಲು ಸಾಧ್ಯವಿಲ್ಲ ಎಂಬ 859 ರೈತರು 22 ದಿನಗಳಿಂದ ಅಹೋರಾತ್ರಿ ಹೋರಾಟ ನಡೆಸುತ್ತಿದ್ದಾರೆ. ಕನಿಷ್ಠ ಸೌಜನ್ಯಕ್ಕಾದರೂ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಬಂದು ರೈತರ ಅಹವಾಲು ಆಲಿಸಿಲ್ಲ, ಶಾಸಕರು ಬಂದು ನಿಮ್ಮ ಸಮಸ್ಯೆ ಏನೆಂದು ಕೇಳಿಲ್ಲ. ಸರಕಾರವೂ ಇವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಇದನ್ನು ಪ್ರತಿಭಟಿಸಿ ರಸ್ತೆ ತಡೆ ನಡೆಸಲಾಗಿದೆ ಎಂದರು.

ಜಂಗಮಕೋಟೆ ಹೋಬಳಿಯಲ್ಲಿ ಅಧಿಕಾರಿಗಳು ಕೆಐಎಡಿಬಿಗೆ ಭೂಮಿ ನೀಡುವ ಅಂಗವಾಗಿ ಭ್ರಷ್ಟಾಚಾರ ಮಾಡುವ ಮೂಲಕ ಪಾಲಿಹೌಸ್ ಇಲ್ಲದಿದ್ದರೂ ಇದೆ ಎಂದು ಬಿಡುವುದು, ಇರುವ ಕಡೆ ಇಲ್ಲ ಎಂದು ಬರೆಯುವ ಮೂಲಕ ರೈತರಿಗೆ ಅನ್ಯಾಯ ಮಾಡಿದ್ದಾರೆ. ಇದನ್ನು ನಿಲ್ಲಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ಇದನ್ನು ಓದಿದ್ದೀರಾ..? ಕಸಬಾ ಸಹಕಾರ ಸಂಘಕ್ಕೆ ಮಂಜುನಾಥ ರೆಡ್ಡಿ ಅಧ್ಯಕ್ಷ, ಶಬ್ಬೀರ್ ಅಹ್ಮದ್ ಪಾಷಾ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ಪ್ರತಿಭಟನಾ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿ, ನಿಮ್ಮ ಆಗ್ರಹವನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸ ಮಾಡಲಾಗುವುದು. ಕೆಐಎಡಿಬಿಗೆ ಭೂಮಿ ಕೊಡುವ ವಿಷಯದಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಗಳಿಗೆ ಮಾತನಾಡಿ, ಸ್ಥಳಕ್ಕೆ ಬಂದು ನಿಮ್ಮ ಬೇಡಿಕೆ ಆಲಿಸುವಂತೆ ಕೋರಲಾಗುವುದು. ದಯವಿಟ್ಟು ರಸ್ತೆತಡೆ ನಿಲ್ಲಿಸಿ ಎಂದು ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಸಂಧಾನದಿಂದ ತೃಪ್ತರಾದ ರೈತರು ರಸ್ತೆತಡೆ ಪ್ರತಿಭಟನೆ ವಾಪಸ್ಸು ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...