ಸಂಸದ ತೇಜಸ್ವಿ ಸೂರ್ಯರನ್ನು ತರಾಟೆಗೆ ತೆಗೆದುಕೊಂಡ ರೈತ ಮುಖಂಡರು; ಕಾಲ್ಕಿತ್ತ ಸಂಸದ

Date:

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇಂದು (ಆಗಸ್ಟ್‌ 23) ವಿಧಾನಸೌಧದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು. ಸಭೆ ನಡೆದ ನಂತರ ಶಕ್ತಿಸೌಧದ ಹೊರಗಡೆ ಜಮಾಯಿಸಿದ್ದ ರೈತ ಮುಖಂಡರು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ನಾಡಿನ ಜಲ ವಿವಾದಗಳಾದ ಕಾವೇರಿ, ಮೇಕೆದಾಟು ಹಾಗೂ ಮಹದಾಯಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ನಿರ್ಲಕ್ಷ್ಯದ ವಿರುದ್ಧ ರೈತರು ಕಿಡಿ ಕಾರಿದರು.

- Advertisement -

ಮಹದಾಯಿ ಯೋಜನೆಗಾಗಿ ಹಲವಾರು ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಕೇಂದ್ರ ಸರ್ಕಾರ ಯೋಜನೆಯ ಬಗ್ಗೆ ತಾತ್ಸಾರ ತೋರಿದೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಯೋಜನೆ ಪ್ರಾರಂಭಕ್ಕೆ ಏನೇನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂದರ್ಭದಲ್ಲಿ ರೈತರೊಂದಿಗೆ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ‘ಮಹದಾಯಿ ಯೋಜನೆಗೆ ಅನುಮೋದನೆ ದೊರಕಿದ್ದು ನಮ್ಮ ಸರ್ಕಾರದ ಅವಧಿಯಲ್ಲಿ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ರಾಜ್ಯದಿಂದ ಮಧ್ಯಂತರ ಅರ್ಜಿ ಸಲ್ಲಿಸಿ ತಡೆಯಾಗಿರುವ ಅರ್ಜಿಯನ್ನು ತೆರವುಗೊಳಿಸಲು ನಾನು ನಿಮ್ಮ ಜೊತೆ ಕೈಜೋಡಿಸುತ್ತೇನೆ’ ಎಂದು ರೈತರನ್ನು ಸಮಾಧಾನಪಡಿಸಲು ಮುಂದಾದರು.

ಈ ಸುದ್ದಿ ಓದಿದ್ದೀರಾ? 6,366 ಕೋಟಿ ರೂ. ನರೇಗಾ ಬಾಕಿ ಉಳಿಸಿಕೊಂಡಿರುವ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ

ಸಂಸದರ ಉತ್ತರಗಳಿಂದ ತೃಪ್ತರಾಗದ ರೈತರು ಪ್ರಶ್ನಿಸುತ್ತಲೇ ಇದ್ದರು. ನಂತರ ತೇಜಸ್ವಿ ಸೂರ್ಯ ಸ್ಥಳದಿಂದ ಕಾಲ್ಕಿತ್ತರು.

ಸಿಎಂ ಭರವಸೆ

ಸರ್ವಪಕ್ಷ ಸಭೆಯಲ್ಲಿ ಮೇಕೆದಾಟು, ಕಾವೇರಿ, ಮಹದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ, ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ವಿನಂತಿಸಿದರು.

‘ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. 5-6 ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ಸರ್ಕಾರ ಎಲ್ಲ ಅಗತ್ಯ ಬೆಂಬಲ ನೀಡಲಿದೆ’ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ ಎಸ್ ಯಡಿಯೂರಪ್ಪ, ಎಚ್‌ ಡಿ ಕುಮಾರಸ್ವಾಮಿ, ಜಗದೀಶ್ ಶೆಟ್ಟರ್, ಡಿ ವಿ ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಎಚ್‌ ಕೆ ಪಾಟೀಲ, ಚಲುವರಾಯಸ್ವಾಮಿ, ಡಾ.ಜಿ ಪರಮೇಶ್ವರ್, ಕೆ ಜೆ ಜಾರ್ಜ್, ಕೃಷ್ಣಭೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...