ಮೈಸೂರು | ಗುಡುಮಾದನಹಳ್ಳಿ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ವಿರೋಧಿಸಿ ರೈತರ ಪ್ರತಿಭಟನೆ

Date:

ಮೈಸೂರು ತಾಲ್ಲೂಕಿನ ಗುಡುಮಾದನಹಳ್ಳಿಯ 20 ಎಕರೆ ಫಲವತ್ತಾದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನೂರಾರು ರೈತರು, ಮಹಿಳೆಯರು, ಯುವಕರು ಹಾಗೂ ಕಾರ್ಯಕರ್ತರು ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಭಾರೀ ಪ್ರತಿಭಟನೆ ನಡೆಸಿದರು.

- Advertisement -

ಗುಡುಮಾದನಹಳ್ಳಿಯಲ್ಲಿ ಜಮಾಯಿಸಿದ ಪ್ರತಿಭಟನಕಾರರು ‘ಕೃಷಿ ಭೂಮಿ ಉಳಿಸಲೇಬೇಕು’ ಎಂಬ ಘೋಷಣೆಗಳೊಂದಿಗೆ ಪಾದಯಾತ್ರೆ ಆರಂಭಿಸಿ, ಸುಮಾರು ಆರು ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿವರೆಗೆ ಸಾಗಿದರು. ಪ್ರತಿಭಟನೆಯಲ್ಲಿ ಹಸುಗಳು ಭಾಗಿಯಾಗಿದ್ದು, ಅವುಗಳ ಕೊರಳಿಗೆ ‘ನಮ್ಮ ಮೇವು, ನಮ್ಮ ಹಕ್ಕು’ ಎಂಬ ಘೋಷಣಾ ಫಲಕಗಳನ್ನು ಕಟ್ಟಲಾಗಿತ್ತು. ಎತ್ತಿನ ಬಂಡಿಗೆ ಜನರೇ ಹೆಗಲು ನೀಡಿದ್ದು ಪ್ರತಿಭಟನೆಗೆ ವಿಶೇಷ ಆಕರ್ಷಣೆಯಾಯಿತು. ‘ಹಸಿರೇ ಉಸಿರು’, ‘ಹಸಿರು ಉಳಿದರೆ ಜೀವ ಉಳಿಯುತ್ತದೆ’, ‘ಬಡ ರೈತ ಮಹಿಳೆಯ ಬದುಕನ್ನು ಉಳಿಸಿ’ ಎಂಬ ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ನಾವು ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ, ಫಲವತ್ತಾದ ಕೃಷಿ ಭೂಮಿಯಿರುವ ಗುಡುಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತವಲ್ಲ, ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ತಾಲ್ಲೂಕಿನ ಹೊಸಹುಂಡಿ, ಚೋರನಹಳ್ಳಿ, ಹಡಜನ, ವಾಜಮಂಗಲ ಹಾಗೂ ಇಮ್ಮಾವು ಗ್ರಾಮಗಳಲ್ಲಿ ಸರ್ಕಾರಿ ಜಮೀನು ಲಭ್ಯವಿದ್ದು, ಅವುಗಳನ್ನು ಪರಿಗಣಿಸಬೇಕು. ಒಂದು ವೇಳೆ ಆಸ್ಪತ್ರೆ ನಿರ್ಮಾಣ ಕೈಬಿಡಡಿದ್ದರೆ ‘ಜೈಲ್ ಭರೋ’ ಚಳವಳಿ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಮಾತನಾಡಿ, “ಆಸ್ಪತ್ರೆಗೆ ಗುರುತಿಸಿರುವ ಜಾಗದಲ್ಲಿ ಕಳೆದ 70 ವರ್ಷಗಳಿಂದ ಸುಮಾರು 80 ಕುಟುಂಬಗಳು ಬೇಸಾಯ ಮಾಡಿಕೊಂಡು ಬದುಕು ಸಾಗಿಸುತ್ತಿವೆ. ವರ್ಷಕ್ಕೆ ಎರಡು ಭತ್ತದ ಫಸಲಿನ ಜೊತೆಗೆ ತೆಂಗು ಹಾಗೂ ತೋಟಗಾರಿಕೆ ಬೆಳೆ ಬೆಳೆಯಲಾಗುತ್ತಿದೆ. ಇಲ್ಲಿ 400 ಹಸುಗಳು, 300 ಕುರಿಗಳು ಹಾಗೂ 100 ಮೇಕೆಗಳಿದ್ದು, ಈ ಪ್ರದೇಶ ಜಾನುವಾರುಗಳ ಮೇವಿಗೆ ಸೂಕ್ತವಾಗಿದೆ. ಸಂಪೂರ್ಣ ನೀರಾವರಿ ಸೌಲಭ್ಯವಿರುವ ಈ ಭೂಮಿ ಕೃಷಿಗೆ ಮಾತ್ರ ಯೋಗ್ಯವಾಗಿದೆ. ಇಲ್ಲಿ ಕಟ್ಟಡ ನಿರ್ಮಿಸಿ ತೆರಿಗೆದಾರರ ಹಣ ವ್ಯರ್ಥ ಮಾಡಬಾರದು” ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ದ್ವಾರದಲ್ಲಿ ಪೊಲೀಸರು ಪ್ರತಿಭಟನಕಾರರನ್ನು ತಡೆದ ವೇಳೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಜೊತೆಗಿದ್ದ ಜಾನುವಾರುಗಳು ಆತಂಕದಿಂದ ಓಡಾಡಿದ ಪರಿಣಾಮ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಕಾರ್ಯಾಲಯದ ಕರ್ತವ್ಯಾಧಿಕಾರಿ ಶಿವಸ್ವಾಮಿ ಅವರ ಮೂಲಕ ಮನವಿ ಸಲ್ಲಿಸಿದರು. ಸರ್ಕಾರ ಕೂಡಲೇ ಸ್ಪಂದಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಆಶಾ ಕಾರ್ಯಕರ್ತೆಯರಿಗೆ ₹264.14 ಕೋಟಿ ಬಾಕಿ ಪ್ರೋತ್ಸಾಹ ಧನ ಬಿಡುಗಡೆ: ಬಗೆಹರಿಯದ ʼಆಶಾ ಸಾಫ್ಟ್ʼ ತಾಂತ್ರಿಕ ದೋಷ

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ದಸಂಸ ಜಿಲ್ಲಾ ಸಂಚಾಲಕರಾದ ಬೆಟ್ಟಯ್ಯಕೋಟೆ, ಅಲಗೂಡು ಶಿವಕುಮಾರ್, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶು, ಸವಿತಾ ಪಾ. ಮಲ್ಲೇಶ್, ಉಗ್ರ ನರಸಿಂಹೆಗೌಡ, ಮಂಡ್ಯ ಜಿಲ್ಲಾಧ್ಯಕ್ಷ ಕೆ.ಎಲ್. ಕೆಂಪೂಗೌಡ, ಕಾಳಚನ್ನೇಗೌಡ, ನೇತ್ರಾವತಿ, ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ, ಮಂಡಕಳ್ಳಿ ಮಹೇಶ್, ಚಾಮರಾಜನಗರ ಬೋರೇಗೌಡ, ಜಿ.ಎನ್. ಕುಮಾರ್, ಸಂಯುಕ್ತ ಹೋರಾಟದ ಯಶವಂತ್, ಪರಿಸರವಾದಿ ಪ್ರಶಾಂತ್, ಪರಿಸರಕ್ಕಾಗಿ ನಾವು ಸಂಘಟನೆಯ ಪರಶುರಾಮೇಗೌಡ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...