ಕೆ ಆರ್ ಪೇಟೆ | ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಆಗ್ರಹಿಸಿ ಹೇಮಗಿರಿ ಶುಗರ್ಸ್ ವಿರುದ್ಧ ರೈತರ ಮುತ್ತಿಗೆ

Date:

ರಾಜ್ಯ ಸರ್ಕಾರ ಘೋಷಿಸಿರುವ ಪ್ರತಿ ಟನ್ ಕಬ್ಬಿಗೆ 50 ರೂ. ಹೆಚ್ಚುವರಿ ಬೆಂಬಲ ಬೆಲೆಯನ್ನು ಪಾವತಿಸದೇ ರೈತರನ್ನು ಸತಾಯಿಸುತ್ತಿರುವ ಮಾಕವಳ್ಳಿ ಹೇಮಗಿರಿ ಶುಗರ್ಸ್ ಕಾರ್ಖಾನೆ ವಿರುದ್ಧ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ರೈತ ಸಂಘದ ನೂರಾರು ಕಾರ್ಯಕರ್ತರು ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ವಿನೂತನ ಪ್ರತಿಭಟನೆ ನಡೆಸಿದರು.

- Advertisement -

ಶಂಖ, ಜಾಗಟೆ, ಚಾಟಿ ಹಿಡಿದು ಪ್ರತಿಭಟನೆ ನಡೆಸಿದ ರೈತರು, ಕಾರ್ಖಾನೆ ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದ ಸುಮಾರು 800ಕ್ಕೂ ಹೆಚ್ಚು ರೈತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಈ ಸಂದರ್ಭದಲ್ಲಿ ರೈತ ಸಂಘದ ಹಿರಿಯ ಮುಖಂಡ ಮುದುಗೆರೆ ರಾಜೇಗೌಡ ಮಾತನಾಡಿ, ಕಳೆದ ಕಬ್ಬು ಹಂಗಾಮಿನಲ್ಲಿ ರಾಜ್ಯ ಸರ್ಕಾರ ಎಫ್‌ಆರ್‌ಪಿ ದರದ ಜೊತೆಗೆ ಪ್ರತಿ ಟನ್‌ಗೆ 50 ರೂ. ಹೆಚ್ಚುವರಿ ಬೆಂಬಲ ಬೆಲೆ ನೀಡುವಂತೆ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ಆದೇಶಿಸಿತ್ತು. ರಾಜ್ಯದ ಬಹುತೇಕ ಸಕ್ಕರೆ ಕಾರ್ಖಾನೆಗಳು ಈಗಾಗಲೇ ರೈತರ ಖಾತೆಗಳಿಗೆ ಹಣ ಜಮೆ ಮಾಡಿವೆ. ಆದರೆ ಮಾಕವಳ್ಳಿ ಹೇಮಗಿರಿ ಶುಗರ್ಸ್ ಮಾತ್ರ ಸಾವಿರಾರು ಕಬ್ಬು ಬೆಳೆಗಾರರಿಗೆ ಕೋಟ್ಯಂತರ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ಸರ್ಕಾರದ ಆದೇಶವನ್ನು ಪ್ರಶ್ನಿಸಿ ಉದ್ದೇಶಪೂರ್ವಕವಾಗಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ ಎಂದು ಆರೋಪಿಸಿದರು.

ಕಾರ್ಖಾನೆ ಆಡಳಿತ ಮಂಡಳಿ ಏಳು ದಿನಗಳೊಳಗೆ ತಡೆಯಾಜ್ಞೆಯನ್ನು ಹಿಂಪಡೆದು ರೈತರಿಗೆ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾರ್ಖಾನೆಯ ಗೇಟ್‌ಗೆ ಬೀಗ ಜಡಿದು ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಡಾ. ಎಸ್.ಯು. ಅಶೋಕ್ ರೈತರ ಮನವಿ ಸ್ವೀಕರಿಸಿ, ಅವರ ಬೇಡಿಕೆ ನ್ಯಾಯಸಮ್ಮತವಾಗಿದೆ. ಈ ವಿಷಯವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರದ ಗಮನಕ್ಕೆ ತಂದು, ಕಾರ್ಖಾನೆ ಮಾಲೀಕರ ಸಭೆ ಕರೆದು ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ಹೇಮಗಿರಿ ಸಕ್ಕರೆ ಕಾರ್ಖಾನೆಯ ಅಧಿಕಾರಿ ದತ್ತಾತ್ರೇಯ, ಪ್ರಕರಣ ನ್ಯಾಯಾಲಯದಲ್ಲಿ ಇರುವುದಾಗಿ ತಿಳಿಸಿದರು. ಇದರಿಂದ ಆಕ್ರೋಶಗೊಂಡ ರೈತರು, ಉಳಿದ ಸಕ್ಕರೆ ಕಾರ್ಖಾನೆಗಳು ಹೆಚ್ಚುವರಿ ಬೆಂಬಲ ಬೆಲೆಯನ್ನು ಪಾವತಿಸಿರುವಾಗ ಹೇಮಗಿರಿ ಮಾತ್ರ ನ್ಯಾಯಾಲಯದ ನೆಪ ಹೇಳುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?SIR ವಿರೋಧಿ ಜಾಥಾಕ್ಕೆ ಮಂಡ್ಯದಲ್ಲಿ ಬೆಂಬಲ: ಜೂನ್ 20ರ ಪ್ರತಿರೋಧ ಸಮಾವೇಶಕ್ಕೆ ಕರೆ

“ನಾವು ಬೆವರು ಸುರಿಸಿ ಬೆಳೆದ ಕಬ್ಬನ್ನು ಅರೆಯಿಸಿ ಸಕ್ಕರೆ ಮಾರಾಟ ಮಾಡಿ ಲಾಭ ಗಳಿಸಿದ್ದೀರಿ. ನಮ್ಮ ಪಾಲಿನ 50 ರೂ. ನೀಡಲು ಮಾತ್ರ ನ್ಯಾಯಾಲಯದ ಮೊರೆ ಹೋಗುತ್ತೀರಿ. ರೈತರ ಬೆವರಿನ ಹಣವನ್ನು ನುಂಗುತ್ತಿರುವ ಕಾರ್ಖಾನೆಯ ವಿರುದ್ಧ ಹೋರಾಟ ಮುಂದುವರಿಯಲಿದೆ” ಎಂದು ರೈತರು ಶಂಖ ಊದುತ್ತಾ ಆಕ್ರೋಶ ಹೊರಹಾಕಿದರು.

ಈ ಸುದ್ದಿ ಓದಿದ್ದೀರಾ?ಮೈಸೂರಿನಲ್ಲಿಂದು ಎಸ್‌ಐಆರ್ ವಿರೋಧಿ ಜಾಗೃತಿ ಜಾಥಾ

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಂದಗೆರೆ ಜಯರಾಮ್, ತಾಲ್ಲೂಕು ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಬೂಕನಕೆರೆ ನಾಗರಾಜು, ಜಿಲ್ಲಾ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್, ಸಿಂದಘಟ್ಟ ಮುದ್ದುಕುಮಾರ್, ಲಕ್ಷ್ಮಿಪುರ ಜಗದೀಶ್, ಕರೋಟಿ ತಮ್ಮಯ್ಯ, ಚೌಡೇನಹಳ್ಳಿ ನಾರಾಯಣಸ್ವಾಮಿ, ರಾಮೇಗೌಡ, ಹಿರಿಕಳಲೆ ನಾಗರಾಜ್, ಕಾರಿಗನಹಳ್ಳಿ ಕುಮಾರ್, ಶಂಕರ್, ಕರೋಟಿ ಪುಟ್ಟೇಗೌಡ, ಹೆಗ್ಗಡಹಳ್ಳಿ ಚೇತನ್, ವಿಠಲಪುರ ಅರುಣ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಕೋಲಾ | ಲಾರಿಯನ್ನು ಅಡ್ಡಗಟ್ಟಿ ಚಾಲಕನಿಗೆ ಬೆದರಿಕೆ: 7 ಮಂದಿ ವಿರುದ್ಧ ದೂರು ದಾಖಲು

ಜೆಲ್ಲಿ ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಕ್ರೇಟಾ ಕಾರಿನಲ್ಲಿ ಬಂದ ಐವರು ಅಡ್ಡಗಟ್ಟಿ,...

ಮಂಡ್ಯ | ಸಕಾಲಕ್ಕೆ ಸರ್ಕಾರಿ ಬಸ್ ಕಲ್ಪಿಸುವಂತೆ ಗ್ರಾಮಸ್ಥರ ಆಗ್ರಹ

ಗ್ರಾಮೀಣ ಭಾಗಗಳಲ್ಲಿ ಸರ್ಕಾರಿ ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸದೆ ಇರುವುದರಿಂದ ವಿದ್ಯಾರ್ಥಿಗಳು,...

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು...

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಕಬ್ಬು ಬೆಳೆಗಾರರು ಮುತ್ತಿಗೆ

ಕಬ್ಬು ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಳೆದ...