ಬೆಳಗಾವಿ ಜಿಲ್ಲಾದ್ಯಂತ ರೈತರ ಹೋರಾಟ ಚುರುಕು: ಪ್ರತಿಭಟನಾಕಾರರ ಮೇಲೆ ಲಘು ಲಾಠಿಪ್ರಹಾರ

Date:

ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರ(ರೈತ)ರು ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಇಂದಿಗೆ 9ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟ ತೀವ್ರ ಸ್ವರೂಪ ಪಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸೋದು ಕಷ್ಟವಾಗುತ್ತಿದೆಯೆಂದು ಹೇಳಿ ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿರುವುದಾಗಿ ತಿಳಿದುಬಂದಿದೆ.

- Advertisement -

ಪ್ರತಿ ಟನ್‌ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕೆಂದು ಒತ್ತಾಯಿಸಿ ಹುಕ್ಕೇರಿ ತಾಲೂಕಿನ ಸಾವಿರಾರು ರೈತರು ಟ್ರ್ಯಾಕ್ಟರ್‌ಗಳ ಸಹಿತ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದು, ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...
ಹತ್ತಗಿರಿಯಲ್ಲಿ ತೀವ್ರ ಹೋರಾಟ
ಹತ್ತರಗಿ ಟೋಲ್‌ಗೇಟ್‌ನಲ್ಲಿ ಕಬ್ಬು ಬೆಳೆಗಾರರ ತೀವ್ರ ಹೋರಾಟ

ಸುಮಾರು ಒಂದು ಗಂಟೆಗೂ ಅಧಿಕ ಕಾಲ ಹೆದ್ದಾರಿ ಬಂದ್ ಆಗಿದ್ದ ಪರಿಣಾಮ ಸಾವಿರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ವಾಹನ ಸವಾರರು ಪರದಾಡಿದರು. ಒಂದು ಗಂಟೆ ಬಳಿಕ ಸರ್ವೀಸ್ ರಸ್ತೆಯಲ್ಲಿ ರೈತರು ಹೋರಾಟ ಶುರು ಮಾಡಿದರು. ಇಲ್ಲಿಯೇ ಅಡುಗೆ ಕೂಡ ಮಾಡುತ್ತಿದ್ದಾರೆ. 3,500 ರೂ. ದರ ಘೋಷಿಸುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ. ಸದ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ಪೊಲೀಸರು ಮುಕ್ತ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...