ವಡಗೇರಾ ಸಂಪೂರ್ಣ ಬರಪೀಡಿತ ಘೋಷಣೆಗೆ ರೈತರ ಆಗ್ರಹಿಸಿ ಮನವಿ

Date:

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ಬುಧವಾರ ಜಯ ಕರ್ನಾಟಕ ಸಂಘಟನೆಯ ವಡಗೇರಾ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಸಂಘಟನೆಯ ಗೌರವಾಧ್ಯಕ್ಷ ಮಲ್ಲು ಹಲಗಿ ಮಾತನಾಡಿ, ‘ಮುಂಗಾರು ಮಳೆ ಕೈಕೊಟ್ಟ ಪರಿಣಾಮ ತಾಲೂಕಿನಾದ್ಯಂತ ರೈತರು ಬೆಳೆದಿರುವ ಬೆಳೆಗಳು ಒಣಗಿ ಹೋಗಿವೆ. ಸಾಲ ಮಾಡಿ ಬೀಜ, ರಸಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ್ದ ರೈತರು ಇದೀಗ ಮಳೆಗಾಗಿ ಮುಗಿಲು ನೋಡುವಂತಾಗಿದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

‘ಕಳೆದ ವರ್ಷ ಅತಿಯಾದ ಮಳೆಯಿಂದ ಬೆಳೆ ಹಾನಿಯಾಗಿತ್ತು. ಈ ಬಾರಿ ಮಳೆ ಕೊರತೆಯಿಂದ ಬೆಳೆ ಕೈಕೊಟ್ಟಿದೆ. ಸತತ ಎರಡು ವರ್ಷಗಳಿಂದ ರೈತರು ಸಂಕಷ್ಟದಲ್ಲಿದ್ದು, ಜಾನುವಾರುಗಳಿಗೂ ಮೇವಿನ ಕೊರತೆ ಎದುರಾಗಿದೆ. ಸರ್ಕಾರ ತಕ್ಷಣ ರೈತರ ನೆರವಿಗೆ ಧಾವಿಸಬೇಕು’ ಎಂದು ಒತ್ತಾಯಿಸಿದರು.

‘ಪ್ರತಿ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾನುವಾರುಗಳಿಗಾಗಿ ಮೇವು ಬ್ಯಾಂಕ್ ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು.

‘ರೈತರ ಸಮಸ್ಯೆಗಳಿಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ರೈತರನ್ನು ಸಂಘಟಿಸಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಮಲ್ಲು ಹಲಗಿ ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಭೀಮಣ್ಣ ಬೂದಿಹಾಳ, ಜಿಲ್ಲಾ ಕಾರ್ಯದರ್ಶಿ ಶಂಕರಗೌಡ ಕುರಕುಂದಿ, ಉಪಾಧ್ಯಕ್ಷ ಮುತ್ತಣ್ಣ, ನಿಂಗಣ್ಣ ಬೀಳಾರ್, ವೆಂಕಟ್ ರೋಟ್ನಡಗಿ, ದೇವಪ್ಪ ಇಟಗಿ ವಡಗೇರಾ, ಮರೆಪ್ಪ ರಾಮಜಗಲಿ, ಹಣಮಂತ ಹಂಚಿನಾಳ, ಜಲಾಲ್ ಸಾಬ್ ಕೋನಳ್ಳಿ, ಬಸಪ್ಪ ಮಾಲಹಳ್ಳಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...