ಬೆಂಗಳೂರು ದಕ್ಷಿಣ | ಪಟ್ಟಾರೆಡ್ಡಿಪಾಳ್ಯ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಒತ್ತಾಯ: ರೈತ ಸಂಘದಿಂದ ಪ್ರತಿಭಟನೆ

Date:

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬೆಂಗಳೂರು ದಕ್ಷಿಣ ತಾಲ್ಲೂಕಿನ ಪಟ್ಟಾರೆಡ್ಡಿಪಾಳ್ಯ ಗ್ರಾಮದಲ್ಲಿ ರಸ್ತೆಯು ತುಂಬಾ ಕಿರಿದಾಗಿದ್ದು, ಈ ರಸ್ತೆಯಲ್ಲಿ ಪ್ರತಿದಿನವೂ ಹಲವಾರು ಹಳ್ಳಿಗಳ ರೈತರು, ಪ್ರತಿಷ್ಠಿತ ರೆಸಾರ್ಟ್‌ಗಳ ಪ್ರವಾಸಿಗಳು, ಪ್ರತಿಷ್ಠಿತ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಕಿರಿದಾದ ತಿರುವುಗಳನ್ನುಳ್ಳ ಈ ರಸ್ತೆಯಲ್ಲಿ ಪ್ರತಿದಿನವೂ ವಾಹನ ಕಿರಿಕಿರಿ ಉಂಟಾಗುತ್ತಿದೆ ಎಂದು ರೈತ ಸಂಘದ ಕಗ್ಗಲೀಪುರ ತಾಲೂಕು ಘಟಕ ಅಧ್ಯಕ್ಷರಾದ ನದೀಮ್ ಪಾಷ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಪಟ್ಟಾರೆಡ್ಡಿಪಾಳ್ಯ ರಸ್ತೆಗೆ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ವಿನೂತನ ರೀತಿ ಕನಕಪುರ ರಸ್ತೆಯಲ್ಲಿ ದೊಡ್ಡ ಮಟ್ಟದ ಕಟೌಟನ್ನು ಹಾಕಿ ನ.19ರ ಮಂಗಳವಾರ ರೈತ ಸಂಘದಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಗ್ಗಲೀಪುರ ಕೆರೆಯ ಅಂಚಿನಲ್ಲಿ ಕೆರೆಯ ಸ್ವರೂಪಕ್ಕೆ ಯಾವುದೇ ರೀತಿ ಧಕ್ಕೆ ಆಗದ ರೀತಿಯಲ್ಲಿ 300 ಮೀಟರ್ ಮೇಲ್ ಸೇತುವೆ ನಿರ್ಮಿಸಬೇಕೆಂದು ರೈತ ಸಂಘವು ಸಂಬಂಧಪಟ್ಟ ಜಿಲ್ಲಾ ಪಂಚಾಯತ್ ಇಲಾಖೆಗೆ ಮನವಿಯನ್ನು ಸಲ್ಲಿಸಿ ನಂತರ ಎಲ್ಲಾ ಪ್ರಕ್ರಿಯೆಗಳು ಪ್ರಾರಂಭವಾಗಿ ಅನುದಾನ ಬಿಡುಗಡೆಗೊಳಿಸುವ ಹಂತಕ್ಕೆ ಬಂದು ನಿಂತಿವೆ. ಕರ್ನಾಟಕ ಕೆರೆ ಸಂರಕ್ಷಣೆ ಹಾಗೂ ಅಭಿವೃದ್ಧಿ ಪ್ರಾಧಿಕಾರದಿಂದ ಕೂಡ ಅನುಮತಿಯನ್ನು ಪಡೆದಿದ್ದು ಸ್ಥಳಕ್ಕೆ ನಿರ್ದೇಶಕರು ಆಗಮಿಸಿ ಅನುಮತಿಯನ್ನು ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಶಾಂತ್ ಹೊಸದುರ್ಗ ಮಾತನಾಡಿ, 4 ಕೋಟಿ ಅನುದಾನ ಬಿಡುಗಡೆಯಾದರೆ ಕೂಡಲೇ ಕಾಮಗಾರಿ ಪ್ರಾರಂಭಿಸಬಹುದು ಈ ಸಮಸ್ಯೆಯ ಬಗ್ಗೆ ರೈತ ಸಂಘವು ಕಳೆದ ಜೂನ್ ತಿಂಗಳಿನಲ್ಲಿ ದೊಡ್ಡಮಟ್ಟದ ಪ್ರತಿಭಟನೆ ಕೂಡ ನಡೆಸಿ ಈ ಸಮಸ್ಯೆಯ ಬಗ್ಗೆ ಸ್ಥಳೀಯ ಶಾಸಕರಾದ ಎಸ್.ಟಿ ಸೋಮಶೇಖರ್ ಬಳಿ ಕೂಡ ಹೋಗಿ 3 ಬಾರಿ ಚರ್ಚಿಸಿ ಅವರ ಗಮನಕ್ಕೆ ತಂದಿದೆ ಎಂದರು.

IMG 20241119 WA0051

ಶಾಸಕರು ಕೇವಲ ಆಶ್ವಾಸನೆಯನ್ನು ಕೊಡುವುದರಲ್ಲಿ ಮುಂದಾಗಿದ್ದಾರೆಯೇ ಹೊರತು ಈವರೆಗೆ ಅನುದಾನದ ಬಗ್ಗೆ ಎಲ್ಲೂ ಕೂಡ ಚರ್ಚಿಸಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರ ಹಾಕಿದರು. 15 ದಿನಗಳ ಒಳಗಾಗಿ ಕಾಮಗಾರಿ ಪ್ರಾರಂಭವಾಗದೆ ಹೋದಲ್ಲಿ ರಸ್ತೆ ತಡೆ ನಡೆಸುವುದಾಗಿ ಕೂಡ ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಮಂಡ್ಯ | ಸೀಟ್ ಬೆಲ್ಟ್ ಧರಿಸದ ಚಾಲಕನಿಗೆ ₹18 ಸಾವಿರ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು!

ಪ್ರತಿಭಟನೆಯಲ್ಲಿ ಕಗ್ಗಲೀಪುರ ತಾಲೂಕು ಘಟಕ ಮಂಜುನಾಥ್, ವೆಂಕಟೇಶ್, ಶ್ರೀನಿವಾಸ್, ಜಯಕುಮಾರ್, ಪ್ರದೀಪ್, ರಘು ರೆಡ್ಡಿ, ರಾಮಕೃಷ್ಣ ರೆಡ್ಡಿ, ಕೆಂಪಯ್ಯ, ಜಯರಾಮ್, ಪಟ್ಟರೆಡ್ಡಿಪಾಳ್ಯ, ನೌಕಲಪಾಳ್ಯ ಹಾಗೂ ಕಗ್ಗಲೀಪುರ ಗ್ರಾಮಸ್ಥರು ಮತ್ತು ಇನ್ನಿತರರು ಪಾಲ್ಗೊಂಡಿದ್ದರು.

IMG 20241119 WA0049
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...