ಚಿತ್ರದುರ್ಗ | ಪಂಪ್‌ಸೆಟ್‌ಗಳಿಗೆ ಮೀಟರ್ ಆಳವಡಿಸದಂತೆ ರೈತ ಸಂಘ ಆಗ್ರಹ

Date:

ಕೃಷಿ ಪಂಫ್‌ಸೆಟ್‌ಗಳಿಗೆ ಮೀಟರ್ ಆಳವಡಿಸದೆ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಆಗ್ರಹಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇತ್ತೀಚೆಗೆ ಕರ್ನಾಟಕ ವಿದ್ಯುತ್‌ಚ್ಛಕ್ತಿ ಬೆಲೆ ನಿಯಂತ್ರಣ ಆಯೋಗವು (ಕೆಇಆರ್‌ಸಿ) ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಪ್ರತಿ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಿ ಆಧಾರ್ ನೊಂದಣಿ ಮಾಡಬೇಕು ಎಂದು ತಿಳಿಸಿದೆ. ಕೆಇಆರ್‌ಸಿ ಗ್ರಾಹಕರ ಹಿತರಕ್ಷಣೆ ಮಾಡಬೇಕಾಗಿದ್ದು, ಅದರ ಬದಲಾಗಿ ನೀತಿ ನಿಯಮಗಳನ್ನು ಸರ್ಕಾರಕ್ಕೆ ನಿರ್ದೇಶನ ಮಾಡುವುದು ಸರಿಯಲ್ಲ ಎಂದು ಪ್ರತಿಭಟನಾ ನಿರತ ರೈತರು ಅಸಮಧಾನ ವ್ಯಕ್ತಪಡಿಸಿದರು.

ಸರ್ಕಾರಗಳು ಅಣೆಕಟ್ಟು ಕಟ್ಟಿ ಕಾಲುವೆ ತೋಡಿ ರೈತರ ಜಮೀನಿಗೆ ನೀರುಣಿಸಲು, ದೇಶದ ಆಹಾರ ಭದ್ರತೆ ಕಾಪಾಡಲು ಅಗಾಧವಾಗಿ ವ್ಯಯ ಮಾಡಬೇಕಾಗುತ್ತದೆ. ಹಿಂದೆ ನಿರ್ಮಾಣ ಮಾಡಿದ ನೀರಾವರಿ ಯೋಜನೆಗಳಲ್ಲಿ ಕೇವಲ ಭತ್ತ ಮಾತ್ರ ಬೆಳೆಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಲೆನಾಡು ಪ್ರಾಂತ್ಯ ಹಾಗೂ ಬಯಲುಸೀಮೆಯಲ್ಲಿ ಅಡಿಕೆ ಬೆಳೆ ಪ್ರಧಾನ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದ್ದಾರೆ.

ಕೃಷಿ ಪಂಪ್‌ಸೆಟ್‌ನ ರೈತರು ತಾವೇ ಸ್ವಂತ ಬಂಡವಾಳ ಹೂಡಿ ಆಹಾರಕ್ಕೆ ಬೇಕಾಗುವ ಹಣ್ಣು ತರಕಾರಿಯಿಂದ ಹಿಡಿದು ದ್ವಿದಳ ಧಾನ್ಯಗಳ ಬೆಳೆ ಬೆಳೆದು, ರಾಗಿ, ಜೋಳದಂತಹ ಆಹಾರ ಬೆಳೆದು ದೇಶದ ಆಹಾರ ಭದ್ರತೆಯನ್ನು ಕಾಪಾಡುತ್ತಿದ್ದಾರೆ. ಅದಕ್ಕೆ ಅನುಗುಣವಾಗಿ ಕರ್ನಾಟಕ ಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ನೀಡುತ್ತಿದೆ. ಈಗ ಕೆಇಆರ್‌ಸಿ ಯ ನಿರ್ದೇಶನವು ಕೃಷಿ ಪಂಪ್‌ಸೆಟ್ ರೈತರ ಕತ್ತು ಹಿಸುಕಿದಂತಾಗುತ್ತದೆ ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಮಕ್ಕಳ ಮನಸ್ಸಿನಲ್ಲಿ ವಿಷ ತುಂಬುವ ಪಾಠಗಳಿಗೆ ಅವಕಾಶವಿಲ್ಲ : ಸಿಎಂ ಸಿದ್ದರಾಮಯ್ಯ

ಸರ್ಕಾರವು ಕೃಷಿ ಪಂಪ್‌ಸೆಟ್‌ಗಳಿಗೆ ಮೀಟ‌ರ್ ಅಳವಡಿಸುವ ಮತ್ತು ಆಧಾ‌ರ್ ನೊಂದಣಿ ಮಾಡುವ ಕೆಲಸವನ್ನು ಕೂಡಲೇ ಕೈಬಿಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ತೀವ್ರ ಚಳವಳಿಯನ್ನು ಕರ್ನಾಟಕ ರಾಜ್ಯ ರೈತ ಸಂಘ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ಧನಂಜಯ, ನುಲೆನೂರು ಶಂಕ್ರಪ್ಪ, ಮಲ್ಲಿಕಾರ್ಜುನ್, ಚೇತನ ಯಳನಾಡು, ಸುರೇಶ್ ಬಾಬು, ರಂಗಸ್ವಾಮಿ, ಹೊರಕೆರಪ್ಪ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ರವಿ ಕೆಂಗುಂಟೆ ಹಾಗೂ ರೈತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...