ಬೀದರ್‌ | ಬರಪೀಡಿತ ತಾಲೂಕುಗಳಿಗೆ ಶೀಘ್ರ ಪರಿಹಾರ ಹಣ ಬಿಡುಗಡೆಗೆ ರೈತ ಸಂಘ ಒತ್ತಾಯ

Date:

  • ಕಾವೇರಿ ನೀರು ತಮಿಳುನಾಡಿಗೆ ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರ ತಪ್ಪು ಮಾಡುತ್ತಿದೆ.
  • ಕಾವೇರಿ, ಕೃಷ್ಣ, ಗೋದಾವರಿ, ತುಂಗಭದ್ರಾ ಹಾಗೂ ಕಾರಂಜಾ ನದಿಗಳ ನೀರು ರಕ್ಷಿಸಿ ರೈತರ ಹಿತ ಕಾಪಾಡಬೇಕು.

ಬೀದರ್‌ ಜಿಲ್ಲೆಯ ಬಸವಕಲ್ಯಾಣ ಹಾಗೂ ಹುಲಸೂರು ತಾಲ್ಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದ್ದು, ಸರ್ಕಾರ ಶೀಘ್ರವೇ ಬರ ಪರಿಹಾರ ಹಾಗೂ ಬೆಳೆ ವಿಮೆ ಹಣ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಒತ್ತಾಯಿಸಿದರು.

- Advertisement -

ಬಸವಕಲ್ಯಾಣ ನಗರದಲ್ಲಿ ತಾಲೂಕು ಘಟಕದ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಶಾಂತಗೌಡ ಬಿರಾದರ್ ಅವರಿಗೆ ಸಲ್ಲಿಸಿ, ವಿವಿಧ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕೇಂದ್ರ ಸರ್ಕಾರ ಕಬ್ಬಿನ ಎಫ್‌ಪಿಆರ್ ದರ ನಿಗದಿಪಡಿಸಿದ ನಂತರ ಜಿಲ್ಲೆಯ ಎಲ್ಲಾ ಕಾರ್ಖಾನೆಗಳು ರೈತರ ಸಭೆ ನಡೆಸಿ ಕಾರ್ಖಾನೆ ಪ್ರಾರಂಭಿಸಬೇಕು. ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಬೆಳೆ ರಕ್ಷಣೆಗೆ ಅರಣ್ಯ ಇಲಾಖೆ ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಉಪಾಯ ಹುಡುಕಬೇಕು” ಎಂದರು.

“ಕಾವೇರಿ, ಕೃಷ್ಣ, ಗೋದಾವರಿ, ತುಂಗಭದ್ರಾ ಹಾಗೂ ಕಾರಂಜಾ ನದಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದು, ಅವುಗಳ ನೀರು ರಕ್ಷಣೆ ಜೊತೆಗೆ ರಾಜ್ಯಕ್ಕೆ ಆದ್ಯತೆ ನೀಡಬೇಕು, ಕಾವೇರಿ ನೀರು ತಮಿಳುನಾಡಿಗೆ ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರ ತಪ್ಪು ಮಾಡುತ್ತಿದೆ. ರಾಜ್ಯದ ನೆಲ, ಜಲ ರೈತರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು

ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ರುದ್ರಯ್ಯ ಸ್ವಾಮಿ, ಉಪಾಧ್ಯಕ್ಷ ಸಂತೋಷ ಗುದುಗೆ, ಪ್ರಧಾನ ಕಾರ್ಯದರ್ಶಿ ಅಣವೀರ ಬಿರಾದರ್‌, ಬಸವರಾಜ ಬಂಡೆ, ರಾಜಕುಮಾರ ಹೊಳ್ಳೆ, ಮಹೇಶ ಬಂಡೆ, ಕಾಶಿನಾಥ, ಅನೀಲ ಮರಪಳ್ಳೆ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...