ಕೃಷಿ ವೆಚ್ಚ, ತೈಲ ಏರಿಕೆ ವಿರುದ್ಧ ರೈತ ಸಂಘದ ಆಕ್ರೋಶ: ಹುಣಸೂರಿನಲ್ಲಿ ಧರಣಿ

Date:

ರಸಗೊಬ್ಬರ, ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆಯಿಂದ ರೈತರಿಗೆ ಉಂಟಾಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನಾ ಧರಣಿ ನಡೆಸಿ, ಉಪವಿಭಾಗಾಧಿಕಾರಿಗಳ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಹೊಸೂರು ಕುಮಾರ್ ಮಾತನಾಡಿ, ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಸಿದ್ಧತೆ ನಡೆಸುತ್ತಿರುವ ರೈತರಿಗೆ ರಸಗೊಬ್ಬರ ಮತ್ತು ಡೀಸೆಲ್ ಬೆಲೆ ಏರಿಕೆಯು ತೀವ್ರ ಆಘಾತವನ್ನು ಉಂಟುಮಾಡಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ...

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸುವುದಷ್ಟೇ ಅಲ್ಲ. ಶಿಕ್ಷಣದ ನಿಜವಾದ ಉದ್ದೇಶ ಮಗುವಿನ ಜ್ಞಾನ, ಚಿಂತನಾ ಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ಸಾಮಾಜಿಕ ಪ್ರಜ್ಞೆ...

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಕಳೆದ ಕೆಲವು ತಿಂಗಳುಗಳಿಂದ ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಟ್ರ್ಯಾಕ್ಟರ್ ಉಳುಮೆ, ನೀರಾವರಿ ಪಂಪ್‌ಸೆಟ್ ಬಳಕೆ ಹಾಗೂ ಬೆಳೆ ಸಾಗಾಣಿಕೆ ವೆಚ್ಚವು ದುಪ್ಪಟ್ಟಾಗಿದೆ. ಇದರ ಜೊತೆಗೆ ರಸಗೊಬ್ಬರಗಳ ಬೆಲೆಯೂ ಗಗನಕ್ಕೇರಿದ್ದು, ಸಣ್ಣ ಹಾಗೂ ಮಧ್ಯಮ ವರ್ಗದ ರೈತರಿಗೆ ಬಿತ್ತನೆ ಕಾರ್ಯವೇ ದುಸ್ತರವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ದೊರೆಯದೆ ನಷ್ಟ ಅನುಭವಿಸುತ್ತಿರುವ ಈ ಸಂದರ್ಭದಲ್ಲಿ ಕೃಷಿ ವೆಚ್ಚದ ಹೆಚ್ಚಳ ರೈತರ ಬೆನ್ನುಮೂಳೆ ಮುರಿದಂತಾಗಿದೆ ಎಂದು ಆರೋಪಿಸಿದ ಅವರು, ರೈತರ ಹಿತದೃಷ್ಟಿಯಿಂದ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ರಸಗೊಬ್ಬರಗಳ ಬೆಲೆಯನ್ನು ಕೂಡಲೇ ಇಳಿಸಬೇಕು ಅಥವಾ ರೈತರಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಹೆಚ್ಚುವರಿ ಸಹಾಯಧನ ನೀಡಬೇಕು. ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಡೀಸೆಲ್ ಅನ್ನು ರಿಯಾಯಿತಿ ದರದಲ್ಲಿ ಕಾರ್ಡ್ ವ್ಯವಸ್ಥೆ ಮೂಲಕ ವಿತರಿಸಬೇಕು. ರೈತರು ಬೆಳೆದ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನಂತೆ ವೈಜ್ಞಾನಿಕ ಬೆಂಬಲ ಬೆಲೆ (MSP) ನಿಗದಿಪಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಇದಲ್ಲದೆ, ರಸಗೊಬ್ಬರ ವಿತರಣೆಯನ್ನು ಎಫ್‌ಐಡಿ ಮೂಲಕವೇ ವಿತರಿಸಿ, ಎಂಆರ್‌ಪಿ ದರವನ್ನು ಪ್ರತಿಯೊಂದು ವರ್ತಕರ ಅಂಗಡಿಗಳಲ್ಲಿ ನಾಮಫಲಕದ ಮೂಲಕ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಬೇಕು. ರೈತರು ಕೇಳಿದ ಗೊಬ್ಬರದೊಂದಿಗೆ ಬೇರೆ ಗೊಬ್ಬರ ಅಥವಾ ಕೀಟನಾಶಕಗಳನ್ನು ಕಡ್ಡಾಯವಾಗಿ ಖರೀದಿಸಲು ಒತ್ತಾಯಿಸುವ ಲಿಂಕ್ ಪದ್ಧತಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೃಷಿ ಚಟುವಟಿಕೆಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ಪೂರೈಸಬೇಕು ಹಾಗೂ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಲಾಯಿತು.

ಕಳೆದ ಮೂರು ತಿಂಗಳುಗಳಿಂದ ಸರ್ವೆ ಪರವಾನಗಿ ಭೂಮಾಪಕರು ಕರ್ತವ್ಯಕ್ಕೆ ಗೈರುಹಾಜರಾಗಿರುವುದರಿಂದ ಸರ್ವೇ ಇಲಾಖೆಯ ಕೆಲಸಗಳು ಸ್ಥಗಿತಗೊಂಡಿದ್ದು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಸರ್ಕಾರ ಕೂಡಲೇ ಭೂಮಾಪಕರ ಬೇಡಿಕೆಗಳನ್ನು ಈಡೇರಿಸಿ ಕರ್ತವ್ಯ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಯಿತು.

ನೆರೆ ರಾಜ್ಯ ಕೇರಳ ಸಮೀಪವಿರುವ ಕಾರಣ ಹುಣಸೂರು, ಪಿರಿಯಾಪಟ್ಟಣ ಹಾಗೂ ಹೆಚ್.ಡಿ.ಕೋಟೆ ತಾಲೂಕುಗಳಿಂದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ಹೊರ ರಾಜ್ಯಗಳಿಗೆ ಸಾಗಣೆ ಮಾಡಲಾಗುತ್ತಿದೆ. ಕೃಷಿಗೆ ಬಳಸಬೇಕಾದ ಯೂರಿಯಾವನ್ನು ಪ್ಲೈವುಡ್ ಕಾರ್ಖಾನೆಗಳಿಗೆ ಬಳಸುತ್ತಿರುವುದರಿಂದ ಪ್ರತಿವರ್ಷ ಗೊಬ್ಬರ ಅಭಾವ ಉಂಟಾಗುತ್ತಿದೆ ಎಂದು ಆರೋಪಿಸಿ, ಈ ಅಕ್ರಮ ಸಾಗಾಣಿಕೆಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಈ ಸುದ್ದಿ ಓದಿದ್ದೀರಾ?ಮೈಸೂರು | ರಸಗೊಬ್ಬರ, ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ರೈತ ಸಂಘದ ಪ್ರತಿಭಟನೆ

ಹುಣಸೂರು ಹಾಗೂ ಹೆಚ್.ಡಿ.ಕೋಟೆ ತಾಲೂಕಿನ ಭೂ ಹಿಡುವಳಿದಾರರು ದಶಕಗಳಿಂದ ಅನುಭವದಲ್ಲಿರುವ ಜಮೀನುಗಳ ದುರಸ್ತಿ ಕಾರ್ಯಕ್ಕೆ ಅರಣ್ಯ ಇಲಾಖೆ ಅಡ್ಡಿಪಡಿಸುತ್ತಿದೆ. ಕಂದಾಯ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಿ ವರದಿ ತಯಾರಿಸಿ ಸಾಗುವಳಿದಾರರಿಗೆ ಅನುಕೂಲವಾಗುವಂತೆ ದುರಸ್ತಿ ಕಾರ್ಯವನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ರಾಮೇಗೌಡ ಅಗ್ರಹಾರ, ತಂಬಾಕು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಉಂಡವಾಡಿ ಚಂದ್ರೇಗೌಡ, ಅಧ್ಯಕ್ಷ ಮೋದೂರು ಶಿವಣ್ಣ, ಜಿಲ್ಲಾ ಖಜಾಂಚಿ ಈಶ್ವರ, ತಾಲೂಕು ಸಂಚಾಲಕ ಅರಳಹಳ್ಳಿ ಬಸವರಾಜೇಗೌಡ, ಜಿಲ್ಲಾ ಉಪಾಧ್ಯಕ್ಷ ಅಲಿಜಾನ್, ಗೌರವಾಧ್ಯಕ್ಷ ಕಲ್ಲಹಳ್ಳಿ ವಿಷಕಂಠಪ್ಪ, ಕೆ.ಬಿ. ಜಯಣ್ಣ, ಧನಂಜಯ ಕಿರಿಜಾಜಿ, ಕಟ್ಟೆ ಮಳಲವಾಡಿ ಮಹದೇವು, ಬಸವರಾಜೇಗೌಡ ಸೇರಿದಂತೆ ನೂರಾರು ರೈತ ಸಂಘಟನೆಯ ಸದಸ್ಯರು ಭಾಗವಹಿಸಿ ಮನವಿ ಪತ್ರ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರಸ್ತೆ ಅಪಘಾತ: ಮೊಪೆಡ್ ಸವಾರ ಸಾವು

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಅಪ್ಪಾಚಿ...

ಹಾಸನ | ಶೆಟ್ಟಿಹಳ್ಳಿ ಸೇತುವೆ ಮೇಲೆ ಕಾರು ನಿಲ್ಲಿಸಿ ವ್ಯಕ್ತಿ ನಾಪತ್ತೆ 

ಹಾಸನ ಜಿಲ್ಲೆ ಶೆಟ್ಟಿಹಳ್ಳಿ ಸೇತುವೆ ಮೇಲೆ ಕಾರು ನಿಲ್ಲಿಸಿ ವ್ಯಕ್ತಿ ನಾಪತ್ತೆಯಾಗಿರುವ...

ರಾಯಚೂರು | ಜಾಲಹಳ್ಳಿ ಜಿ.ಪಂ. ಮತ್ತು ತಾ.ಪಂ. ಕ್ಷೇತ್ರಗಳಿಗೆ ಎಸ್‌ಸಿ ಮೀಸಲಾತಿಗೆ ಆಗ್ರಹ

ಜಾಲಹಳ್ಳಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ...

ಕುಮಟಾ | ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ: ಅಕ್ಟೋಬರ್ 15 ರಿಂದ ಚಾಲನೆ

ಕುಮಟಾ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ...