ಕೆ ಆರ್ ಪೇಟೆ | ಭ್ರಷ್ಟಾಚಾರ ತಡೆಗಟ್ಟುವಂತೆ ಆಗ್ರಹಿಸಿ ಏ.9ರಂದು ರೈತ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ

Date:

ಕೃಷ್ಣರಾಜಪೇಟೆ ತಾಲ್ಲೂಕಿನ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಏಪ್ರಿಲ್.9ರಂದು ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಹೋರಾಟ ಆರಂಭಿಸುವುದಾಗಿ ಮಾಜಿ ಜಿಲ್ಲಾಧ್ಯಕ್ಷರಾದ ಎಂ.ವಿ. ರಾಜೇಗೌಡ ತಿಳಿಸಿದ್ದಾರೆ.

- Advertisement -

ಮಂಡ್ಯ ಜಿಲ್ಲೆ, ಕೆ ಆರ್ ಪೇಟೆ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಎಂ.ವಿ. ರಾಜೇಗೌಡ, ತಾಲ್ಲೂಕಿನ ಗವಿಮಠದ ಮೊರಾರ್ಜಿ ವಸತಿ ಶಾಲೆಯ ಅಕ್ಕಿ ಹಗರಣ, ಶೀಳನೆರೆ ಹೋಬಳಿಯಲ್ಲಿ ಕಂದಾಯ ಇಲಾಖೆ ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗ ಸೇರಿ ಅಕ್ರಮ ಪೌತಿ ಖಾತೆ ನೀಡಿ ರೈತರಿಗೆ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಶಿಕ್ಷಣ ಇಲಾಖೆ ಸೂಚನೆ ಮೇರೆಗೆ ಟಿಎಪಿಸಿಎಂಎಸ್ ಗೋದಾಮಿನಿಂದ ಎತ್ತುವಳಿಯಾಗಿ, ಗವಿಮಠದ ವಸತಿ ಶಾಲೆಗೆ ಸೇರಬೇಕಾದ ಅಕ್ಕಿ ವಸತಿ ಶಾಲೆ ಸೇರುವ ಬದಲು ಪಟ್ಟಣದ ಖಾಸಗಿ ರೈಸ್ ಮಿಲ್ ಗೆ ಹೋಗಿದೆ. ರೈತರು ಪತ್ತೆ ಹಚ್ಚಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದರೂ ಇದರ ಬಗ್ಗೆ ಇದುವರೆಗೂ ಯಾವುದೇ ತನಿಖೆಯಾಗಿಲ್ಲ ಎಂದು ಕಿಡಿಕಾರಿದರು.

ಜಿಲ್ಲಾ ಉಪಾಧ್ಯಕ್ಷರಾದ ಮರುವನಹಳ್ಳಿ ಶಂಕರ್‌ ಮಾತನಾಡಿ, ಶಿಳನೆರೆ ಹೋಬಳಿಯ ಚೌಡ ಘಟ್ಟ, ಸಿಂಧಘಟ್ಟ ಮತ್ತಿತರ ಕಡೆ ಹೋಬಳಿಯ ರಾಜಸ್ವ ನಿರೀಕ್ಷಕ ರಾಜಮೂರ್ತಿ, ಗ್ರಾಮ ಲೆಕ್ಕಿಗರಾದ ಶಶಿಕುಮಾ‌ರ್, ಈರಣ್ಣ ಎನ್ನುವವರು ನಕಲಿ ವಂಶವೃಕ್ಷಗಳನ್ನು ಸೃಷ್ಟಿಸಿ ಪೌತಿದಾರರ ಕುಟುಂಬಕ್ಕೆ ಸೇರಬೇಕಾದ ಆಸ್ತಿಯನ್ನು ಇತರರ ಹೆಸರಿಗೆ ಖಾತೆ ಮಾಡಿ ನೈಜ ವಂಶಸ್ತರು ಕೋರ್ಟ್, ಕಚೇರಿ ತಿರುಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಬಗ್ಗೆ ರೈತಸಂಘ ಕಳೆದ ಒಂದೂವರೆ ತಿಂಗಳ ಹಿಂದೆಯೇ ದಾಖಲೆಗಳ ಸಮೇತ ಮಾಹಿತಿ ನೀಡಿ ಶಿಸ್ತು ಕ್ರಮ ಜರುಗಿಸಿ, ರೈತ ಕುಟುಂಬಗಳಿಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದರೂ ತಹಶೀಲ್ದಾರ್ ಡಾ. ಅಶೋಕ್ ಇದುವರೆಗೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ರೈತಸಂಘದ ಅಧ್ಯಕ್ಷರಾದ ಕಾರಿಗನಹಳ್ಳಿ ಪುಟ್ಟೇಗೌಡ ಮಾತನಾಡಿ, ತಾಲ್ಲೂಕಿನಾದ್ಯಂತ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ದಲ್ಲಾಳಿಗಳನ್ನು ನೇಮಕ ಮಾಡಿಕೊಂಡು ಕಮೀಷನ್ ದಂಧೆಯಲ್ಲಿ ಮುಳುಗಿದ್ದಾರೆ. ಈ ವಿಚಾರವಾಗಿ ಏಪ್ರಿಲ್.9ರಂದು ಹೋರಾಟ ಹಮ್ಮಿಗೊಂಡಿದ್ದು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಭ್ರಷ್ಟರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ನಿರಂತರವಾಗಿ ಪ್ರತಿಭಟನೆ ನಡೆಯಲಿದೆ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ತಡಿಯಂಡಮೋಳ್ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಯುವತಿ ಪತ್ತೆ

ಸಭೆಯಲ್ಲಿ ರೈತ ಮುಖಂಡರಾದ ಬೂಕನಕೆರೆ ನಾಗರಾಜು, ಮಡುವಿನಕೋಡಿ ಪ್ರಕಶ್, ಕೃಷ್ಣಾಪುರ ರಾಜಣ್ಣ, ಸಿಂಧಘಟ್ಟ ಮುದ್ದುಕುಮಾರ್, ಚೌಡೇನಹಳ್ಳಿ ಕೃಷ್ಣೆಗೌಡ, ನೀತಿಮಂಗಲ ಮಹೇಶ್, ಕರೋಟಿ ತಮ್ಮಯ್ಯ, ಹಿರೀಕಳಲೆ ಬಸವರಾಜು, ಲಕ್ಷ್ಮೀಪುರ ನಾಗರಾಜು, ನಾರಾಯಣಸ್ವಾಮಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...