ಬಾಗೇಪಲ್ಲಿ | ಬಾರದ ಮಳೆಯಿಂದಾಗಿ ಬೆಳೆ ನಷ್ಟ: ‘ಬರಪೀಡಿತ ತಾಲೂಕು’ ಎಂದು ಘೋಷಿಸಲು ಮನವಿ

Date:

Advertisements

ಬಾಗೇಪಲ್ಲಿ ತಾಲೂಕಿನಲ್ಲಿ ಸರಿಯಾಗಿ ಮಳೆ ಬಾರದ ಹಿನ್ನೆಲೆಯಲ್ಲಿ ರೈತರಿಗೆ ಸಂಕಷ್ಟ ಎದುರಾಗಿದ್ದು, ಸರ್ಕಾರ ಕೂಡಲೇ ತಾಲೂಕಿನ ಬರಪೀಡಿತ ಎಂದು ಘೋಷಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ತಾಲೂಕಿನ ಪಾತಪಾಳ್ಯ ಹೋಬಳಿಯ ಬಿಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಉಗ್ರಾಣಂಪಲ್ಲಿ ಗ್ರಾಮದಲ್ಲಿ ಪ್ರಗತಿಪರ ಹಾಗೂ ರೈತ ಹಾಗೂ ಮುಖಂಡರಾದಂತಹ ನರಸಿಂಹರೆಡ್ಡಿಯವರು ಮಳೆಯಾಶ್ರಿತವಾಗಿ ಸುಮಾರು 5 ಎಕರೆಯಲ್ಲಿ ಮೆಕ್ಕೆಜೋಳದ ಬೆಳೆಯನ್ನು ಹಾಕಿರುತ್ತಾರೆ. ಆದರೆ ಸಕಾಲದಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ ಬಹುತೇಕ ನಷ್ಟವನ್ನು ಅನುಭವಿಸುತ್ತಿದ್ದು, ಸಾಲದ ಸುಳಿಗೆ ಸಿಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.‌ ಹಾಗಾಗಿ ಸರಕಾರಗಳು ಈ ರೀತಿಯ ಬೆಳೆ ನಷ್ಟವಾಗಿರುವ ಕಡೆ ಸೂಕ್ತ ರೀತಿಯಲ್ಲಿ ಸಮೀಕ್ಷೆ ನಡೆಸಿ ಬರಪೀಡಿತ ಪ್ರದೇಶವನ್ನಾಗಿ ಬಾಗೇಪಲ್ಲಿ ತಾಲೂಕನ್ನು ಘೋಷಿಸಲು ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲದೆ, ರೈತರ ಸಾಲ ಮನ್ನಾ ಮಾಡಿ,‌ ಸಾಲ ನೀಡುವುದನ್ನು ಮುಂದುವರಿಸಬೇಕು ಮತ್ತು ರೈತರಿಗೆ ನಷ್ಟ ಪರಿಹಾರಗಳು ಶೀಘ್ರವಾಗಿ ದೊರೆಯುವಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisements
1001870125

ತೆನೆಕಟ್ಟದ ಜೋಳ

ತಾಲೂಕಿನ ಬಹುತೇಕ ಮಳೆಯಾಶ್ರಿತ ಮೆಕ್ಕೆ ಜೋಳದ ಬೆಳೆಯು ತೆನೆ ಕಟ್ಟುವ ವೇಳೆ ಮಳೆ ಬಾರದ ಹಿನ್ನೆಲೆಯಲ್ಲಿ‌ ತೆನೆ ಬಿಡದೆ, ಬೆಳೆ ಕಮರಿ ಹೋಗಿದೆ.

ಇದರಿಂದಾಗಿ ರೈತನು ಬೆಳೆ ನಿರ್ವಹಣೆಯ ಖರ್ಚು ಸಿಗದಂತಾಗಿ ಕಂಗಾಲಾಗಿದ್ದಾರೆ. ಹಾಗೆಯೇ ಶೇಂಗಾ ಬೆಳೆಯೂ ಕಾಯಿ ಬಲಿಯುವಾಗ ಮಳೆ ಬಾರದೆ, ಬೆಳೆ ನಷ್ಟವಾಗಿದೆ. ಇದರಿಂದಾಗಿ ತಾಲೂಕಿನ ಗೂಳೂರು, ಪಾತಪಾಳ್ಯ, ಕಸಬಾ ಸೇರಿದಂತೆ ಬಹುತೇಕ ಎಲ್ಲ ಹೋಬಳಿಗಳಲ್ಲೂ ಬೆಳೆ ನಷ್ಟ ಅನುಭವಿಸುತ್ತಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X