ಮೈಸೂರು ಜಿಲ್ಲೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ- ಟಿ.ನರಸೀಪುರ ಮಾರ್ಗದ ಮುಖ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಇದರಲ್ಲಿ ಮಗು ಸೇರಿದಂತೆ ಹತ್ತು ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಕುಷ್ಟಗಿ | ಭೀಕರ ಅಪಘಾತ: 6 ಮಂದಿ ಸಾವು, ಎದೆ ನಲುಗಿತು ಎಂದ ಸಿಎಂ
ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.