ಯಾದಗಿರಿ | ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ನಾಲ್ವರ ವಿರುದ್ಧ ಪ್ರಕರಣ ದಾಖಲು

Date:

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ಪಟ್ಟಣದ ದಲಿತ ಯುವಕನನ್ನು ಜಾತಿ ನಿಂದನೆ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.

- Advertisement -

ಹಲ್ಲೆಗೊಳಗಾದ ಯುವಕ ಮೌನೇಶ ಎಂಬಾತನ ತಾಯಿ ಮಹಾದೇವಿ ಪರಮಣ್ಣ ಅವರು ನೀಡಿದ ದೂರಿನ ಅನ್ವಯ ಮಾ.30 ಕೊಡೇಕಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅದೇ ಗ್ರಾಮದ ನಾಗರಾಜ, ಸಂಗಪ್ಪ ಮೊರೆ, ಶಿವಣ್ಣ ಹಾಗೂ ನಾಗಣ್ಣ ಎಂಬುವರ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ 323,324, 504, 506 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸುರಪುರ ತಾಲೂಕಿನ ಕಕ್ಕೇರಾ ಪಟ್ಟಣದ ಮೌನೇಶ ಹಲ್ಲೆಗೊಳಗಾದ ಯುವಕ. ಮೌನೇಶ ಅವರು ಕಕ್ಕೆರಾ ಗ್ರಾಮದಲ್ಲಿ ಪಾನ್‌ ಶಾಪ್‌ ಅಂಗಡಿ ನಡೆಸುತ್ತಿದ್ದು, ಮಾ.29 ರಂದು ಸಂಜೆ ಅದೇ ಗ್ರಾಮದ ನಾಲ್ವರ ಗುಂಪು ಮೌನೇಶ ಅವರ ಪಾನ್‌ ಶಾಪ್‌ ಅಂಗಡಿಗೆ ಬಂದು ನೀರಿನ ಬಾಟಲಿ ಖರೀದಿಸಿದ್ದರು. ಬಳಿಕ ದುಡ್ಡು ಕೊಡಿ ಅಂಗಡಿ ಮುಚ್ಚುತ್ತೇನೆ ಎಂದು ಕೇಳಿದ್ದಕ್ಕೆ ಮೌನೇಶ ಅವರೊಂದಿಗೆ ವಾಗ್ವಾದ ನಡೆಸಿ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ್ದಾರೆ. ನಾಲ್ವರ ಗುಂಪು ನನ್ನ ಮಗನ ತಲೆ ಹಾಗೂ ಕಣ್ಣಿನ ಮೇಲೆ ಕಲ್ಲಿನಿಂದ ಹೊಡೆದಿದ್ದಾರೆ” ಎಂದು ಆರೋಪಿಸಿದ್ದಾರೆ.

“ಗಂಭೀರವಾಗಿ ಗಾಯಗೊಂಡಿರುವ ಮಗನನ್ನು ಕಲಬುರಗಿ ಇಎಸ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ನನ್ನ ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ” ಮೌನೇಶ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಈ ಬಾರಿಯ ಚುನಾವಣೆ ದೇಶದ ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ

ಈ ಕುರಿತು ಹಲ್ಲೆಗೊಳಗಾದ ಮೌನೇಶ ಅವರ ಸಹೋದರ ನಂದಕುಮಾರ್‌ ಈದಿನ.ಕಾಮ್‌ ಜೊತೆಗೆ ಮಾತನಾಡಿ, “ನನ್ನ ತಮ್ಮನ ಅಂಗಡಿಗೆ ಬಂದ ನಾಲ್ವರ ಗುಂಪು ಯಾವುದೇ ಕಾರಣವಿಲ್ಲದೆ ಏಕಾಏಕಿ ಮಾರಣಾಂತಿಕ ಹಲ್ಲೆ ಮಾಡಿದ್ದು ಸಹಿಸಿಕೊಳ್ಳಲು ಆಗುತ್ತಿಲ್ಲ. ನಾವು ನಂಬುವ ತತ್ವ ಸಿದ್ಧಾಂತ ಒಪ್ಪದ ಪಕ್ಷಕ್ಕೆ ಸೇರಿದ ಗುಂಪು ಹಲ್ಲೆ ನಡೆಸಿದೆ. ದಲಿತ ಸಮುದಾಯದವರೇ ಗೃಹಮಂತ್ರಿ  ಆಗಿರುವ ರಾಜ್ಯದಲ್ಲಿ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆಗಳು ನಡೆಯುತ್ತಿರುವುದು ದುರಂತ. ಕೂಡಲೇ ನಮ್ಮ ಕುಟುಂಬದ ಮೇಲೆ ಹಲ್ಲೆ ನಡೆಸಿದ ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...