ಬೆಳಗಾವಿ ಜಿಲ್ಲೆಯ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ತಂದೆಯೊಂದಿಗೆ ಮೀನುಗಾರಿಕೆಗೆ ಹೋದಾಗ ನೀರುಪಾಲಾಗಿದ್ದ ಇಬ್ಬರು ಮಕ್ಕಳ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿವೆ.
ಬೆನಕನಹೊಳಿಯ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ನೀರುಪಾಲಾಗಿದ್ದ ತಂದೆ ಮತ್ತು ಇಬ್ಬರು ಮಕ್ಕಳ ಪೈಕಿ ಮಕ್ಕಳಾದ ರಮೇಶ ಅಂಬಲಿ(15), ಯಲ್ಲಪ್ಪ ಅಂಬಲಿ(13) ಮೃತ ದೇಹಗಳು ಪತ್ತೆಯಾಗಿವೆ. ಅವರ ತಂದೆ ಲಕ್ಷ್ಮಣ ಅಂಬಲಿ(45) ಪತ್ತೆಗಾಗಿ ಅಗ್ನಿಶಾಮಕ ದಳ ತಂಡ ಹಾಗೂ ಪೊಲೀಸರಿಂದ ಕಾರ್ಯಾಚರಣೆಯನ್ನು ಮಂಗಳವಾರವೂ ಮುಂದುವರಿಸಲಾಗಿದೆ.

‘ಲಕ್ಷ್ಮಣ ಅವರು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ರಾತ್ರಿ ಬೈಕ್ ನಿಲ್ಲಿಸಿ ತಮ್ಮ ಇಬ್ಬರು ಮಕ್ಕಳೊಂದಿಗೆ ಮೀನುಗಾರಿಕೆಗಾಗಿ ನದಿಗೆ ಇಳಿದಿದ್ದರು. ಆದರೆ, ಸೋಮವಾರ ಬೆಳಿಗ್ಗೆಯವರೆಗೂ ಮನೆಗೆ ಬಂದಿರಲಿಲ್ಲ. ಊರಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿರಬಹುದು ಎಂದು ಕುಟುಂಬಸ್ಥರು ತಿಳಿಸಿದ್ದರು. ಅಲ್ಲಿ ವಿಚಾರಿಸಿದಾಗ ಸುಳಿವು ಸಿಗಲಿಲ್ಲ. ಆಗ ಈ ಅವಘಡ ನಡೆದಿರುವುದು ಗೊತ್ತಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಬೆಳಗಾವಿ | ನ.20ರಂದು ಲಿಂಗತ್ವ ಅಲ್ಪಸಂಖ್ಯಾತರಿಂದ ಸ್ವಾಭಿಮಾನದ ನಡಿಗೆ
‘ಕುಟುಂಬದ ಸದಸ್ಯರಿಗೆ ಸೂಕ್ತ ಪರಿಹಾರ ನೀಡಲಾಗುವುದು’ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
