ಕೊಡಗು | ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ವಿತರಣೆಯ ಮೇಲೆ ಕಟ್ಟುನಿಟ್ಟಿನ ನಿಗಾ

Date:

ರಸಗೊಬ್ಬರ ಖರೀದಿಗೆ ಇನ್ಮುಂದೆ ರೈತರು ಕಡ್ಡಾಯವಾಗಿ ಎಫ್‌ಐಡಿ (Farmer ID) ಹೊಂದಿರಬೇಕು ಎಂದು ಕೃಷಿ ಇಲಾಖೆ ಸೂಚಿಸಿದೆ. ಜೊತೆಗೆ, ರೈತರು ತಮ್ಮ ಭೂಮಿಯನ್ನು ಎಫ್‌ಐಡಿಗೆ ಜೋಡಿಸಿರಬೇಕು. ಈ ಮಾಹಿತಿಯ ಆಧಾರದಲ್ಲಿಯೇ ಕೆ-ಕಿಸಾನ್ ತಂತ್ರಜ್ಞಾನದ ಮೂಲಕ ರಸಗೊಬ್ಬರ ವಿತರಣೆ ನಡೆಯಲಿದೆ.

- Advertisement -

ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ಸಾಮಗ್ರಿಗಳನ್ನು ವಿದೇಶಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳಲಾಗುತ್ತಿದ್ದು, ಯುದ್ಧ ಪರಿಸ್ಥಿತಿಯಿಂದ ಆಮದು ಪ್ರಕ್ರಿಯೆಯಲ್ಲಿ ಅಡಚಣೆ ಉಂಟಾಗಿದೆ. ಇದರಿಂದ ರಸಗೊಬ್ಬರ ಉತ್ಪಾದನೆಯಲ್ಲಿ ಕುಸಿತವಾಗುವ ಸಾಧ್ಯತೆ ಇರುವುದರಿಂದ, ವಿತರಣೆಯ ಮೇಲೆ ವಿಶೇಷ ನಿಗಾ ಇರಿಸಲು ಸರ್ಕಾರ ನಿರ್ಧರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಈ ಹಿನ್ನೆಲೆಯಲ್ಲಿ, ರೈತರು ಮೊದಲು ಎಫ್‌ಐಡಿ ಹೊಂದಬೇಕು. ಬಳಿಕ ತಮ್ಮ ಎಲ್ಲಾ ಭೂಮಿಯ ಪಹಣಿ ವಿವರಗಳನ್ನು ಅದಕ್ಕೆ ಕಡ್ಡಾಯವಾಗಿ ಜೋಡಿಸಬೇಕು. ಬೆಳೆದಿರುವ ಬೆಳೆಗಳ ಆಧಾರದ ಮೇಲೆ ಅಗತ್ಯ ಪ್ರಮಾಣದ ರಸಗೊಬ್ಬರವನ್ನು ಮಾತ್ರ ಕೆ-ಕಿಸಾನ್ ತಂತ್ರಜ್ಞಾನದ ಮೂಲಕ ವಿತರಿಸಲಾಗುತ್ತದೆ.

ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುವ ದಂಧೆಗೆ ಕಡಿವಾಣ ಹಾಕುವುದು ಹಾಗೂ ಮಿತವ್ಯಯದ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ರೈತರ ಭೂಮಿ ಮತ್ತು ಬೆಳೆ ವಿವರಗಳ ಆಧಾರದಲ್ಲಿಯೇ ರಸಗೊಬ್ಬರ ವಿತರಣೆ ನಡೆಯಲಿದೆ.


ಎಫ್‌ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೇ ನಂಬರ್‌ಗಳನ್ನು ಅದಕ್ಕೆ ಲಿಂಕ್ ಮಾಡಿಸಿಕೊಳ್ಳಬೇಕು. ಎಫ್‌ಐಡಿ ಇಲ್ಲದವರು ಪಹಣಿ ಮತ್ತು ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿ ಹೊಸದಾಗಿ ಎಫ್‌ಐಡಿ ಸೃಜಿಸಿಕೊಳ್ಳಬಹುದು.

ಈ ವಿಶೇಷ ಸುದ್ದಿ ಓದಿದ್ದೀರಾ? ತಂಬಾಕು ದರ ಕುಸಿತ, ಬೆಳೆ ಮಿತಿ ಹೇರಿಕೆ: ಮೈಸೂರು ಜಿಲ್ಲೆಯ ರೈತರು ಸಂಕಷ್ಟದಲ್ಲಿ


ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾಂಶದ ಮೂಲಕ ರೈತರ ಎಫ್‌ಐಡಿ ನಮೂದಿಸಿ ಮಾರಾಟ ಮಾಡಬೇಕು. ಗರಿಷ್ಠ ಮಾರಾಟ ಬೆಲೆಯಿಗಿಂತ ಹೆಚ್ಚು ಬೆಲೆಗೆ ಮಾರಾಟ ಮಾಡಿದರೆ ಅಥವಾ ನಿಯಮ ಉಲ್ಲಂಘನೆ ಕಂಡುಬಂದರೆ ಪರವಾನಗಿ ಅಮಾನತು ಅಥವಾ ರದ್ದುಪಡಿಸುವ ಎಚ್ಚರಿಕೆ ನೀಡಲಾಗಿದೆ. ರಸಗೊಬ್ಬರ ವಿತರಣೆಗೆ ಪ್ರತ್ಯೇಕ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗಿದ್ದು, ಯಾರಿಗೆ ವಿತರಣೆ ಮಾಡಲಾಗಿದೆ ಹಾಗೂ ಅದರ ಬಳಕೆ ಹೇಗೆ ನಡೆದಿದೆ ಎಂಬುದನ್ನು ನಿಗಾ ಇಡಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಪಿರಿಯಾಪಟ್ಟಣ | ಪ್ರತಿಭಾ ಪುರಸ್ಕಾರ-ಕ್ರೀಡೆಗಳೊಂದಿಗೆ ಅಂಬೇಡ್ಕರ್-ಜಗಜೀವನರಾಮ್ ಜಯಂತಿ ಸಂಭ್ರಮ

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಒದಗಿಸುವ ರಸಗೊಬ್ಬರದ ವಿತರಣೆಯ ದೃಢೀಕರಣದ ಆಧಾರದಲ್ಲಿ ಹಂತ ಹಂತವಾಗಿ ಪೂರೈಕೆ ನಡೆಯಲಿದ್ದು, ಎಫ್‌ಐಡಿ ಕಡ್ಡಾಯಗೊಳಿಸುವ ಮೂಲಕ ಪಾರದರ್ಶಕತೆ ಮತ್ತು ಸಮರ್ಪಕ ವಿತರಣೆ ಸಾಧಿಸುವುದಾಗಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...