ಶಾಲೆಯಲ್ಲಿ ನೀಡಲಾಗಿದ್ದ ‘ಹೋಮ್ ವರ್ಕ್’ಅನ್ನು ಮುಗಿಸಿಕೊಂಡು, ತರಗತಿ ತರದೇ ಮನೆಯಲ್ಲಿ ಬಿಟ್ಟು ಬಂದ ಕಾರಣಕ್ಕೆ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿರುವ ಘಟನೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃಗದ ರೀತಿಯಲ್ಲಿ ವರ್ತಿಸಿ, ಕೃತ್ಯ ಎಸಗಿದ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದೆ.
ನಿಟ್ಟೂರ(ಬಿ) ಗ್ರಾಮದ ವೀರಭದ್ರರೇಶ್ವರ ಶಾಲೆಯ ಕನ್ನಡ ಶಿಕ್ಷಕ ಜೈಶಂಕರ್ ಎಂಬಾತ 8ನೇ ತರಗತಿಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ ವಿದ್ಯಾರ್ಥಿಯ ಬೆನ್ನು, ಕೈ, ತೊಡೆ ಮೇಲೆ ಬಾಸುಂಡೆ ಬಂದಿದಿದ್ದು, ರಕ್ತವೂ ಸುರಿದಿದೆ ಎಂದು ಆರೋಪಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದ್ದು, ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದೆ. ಡಿಡಿಪಿಎ ಸೂಚನೆ ಮೇರೆಗೆ ಶಾಲೆಗೆ ಭೇಟಿ ನೀಡಿದ ಭಾಲ್ಕಿ ತಾಲೂಕು ಬಿಇಓ ಮಜರ್ ಹುಸೇನಿ ಶಾಲಾ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳ ಒಳಗಾಗಿ ಶಿಕ್ಷಕನ ಮೇಲೆ ಕ್ರಮ ಕೈಗೊಂಡು ಘಟನೆ ಬಗ್ಗೆ ವಿವರ ನೀಡುವಂತೆ ಸೂಚಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ
ವೈರಲ್ ವಿಡಿಯೋ ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಅವರು ಧನ್ನೂರ್ ಠಾಣೆ ಪೊಲೀಸರಿಗೆ ಘಟನೆಯ ತನಿಖೆ ನಡೆಸುವಂತೆ ಸೂಚಿಸಿದ್ದರು. ಶುಕ್ರವಾರ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಶುಕ್ರವಾರ ವಿದ್ಯಾರ್ಥಿಯ ತಂದೆ ನೀಡಿದ ದೂರಿನ ಅನ್ವಯ ಧೂನ್ನೂರ ಠಾಣೆಯಲ್ಲಿ ಶಿಕ್ಷಕ ಜೈಶಂಕರ ವಿರುದ್ಧ ಪ್ರಕರಣ ದಾಖಲಾಗಿದೆ.
Super