ಬೆಂ.ಗ್ರಾಮಾಂತರ | ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ, ಸರಕಾರದ ಹೇಡಿತನದ ಕೃತ್ಯ; ಕೆಪಿಆರ್‌ಎಸ್‌

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಬಲವಂತ ಹಾಗೂ ಅನ್ಯಾಯದ ಕೆಐಎಡಿಬಿ ಭೂಸ್ವಾಧೀನಕ್ಕೆ ರೈತರ ಪ್ರಬಲ ವಿರೋಧ ಧಿಕ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರಾಜ್ಯ ಸರಕಾರದ ಹೇಡಿತನದ ಕೃತ್ಯ ಎಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಕಟುವಾಗಿ ಟೀಕಿಸಿದೆ.

- Advertisement -

ಸುಮಾರು ನಾಲ್ಕು ವರ್ಷಗಳಿಂದ(1118 ದಿನಗಳು) ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ನಾಡ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಶೇ.80ರಷ್ಟು ರೈತರು ಲಿಖಿತವಾಗಿ ಭೂ ಸ್ವಾಧೀನಕ್ಕೆ ತಮ್ಮ ಅಸಮ್ಮತಿ ಹಾಗೂ ವಿರೋಧವನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರೂ, ಬಲವಂತದ ಭೂ ಸ್ವಾಧೀನಕ್ಕೆ ಕ್ರಮ ವಹಿಸಿರುವುದು, ಭೂ ಸ್ವಾಧೀನ ಕಾಯ್ದೆ – 2013ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...
ಚನ್ನರಾಯಪಟ್ಟಣ ಹೋರಾಟ

ರೈತರು ವಿವಿಧೆಡೆ ನಡೆಸಿದ ಪ್ರತಿಭಟನಾ ಧರಣಿ ಸ್ಥಳಗಳಿಗೆ ಈಗಿನ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕರಾಗಿ ಭೇಟಿ ಕೊಟ್ಟು ತಾನು ಅಧಿಕಾರಕ್ಕೆ ಬಂದರೆ ಅನ್ಯಾಯ ಹಾಗೂ ಬಲವಂತದ ಭೂ ಸ್ವಾಧೀನವನ್ನು ರದ್ದುಪಡಿಸುವುದಾಗಿ ಸಾರ್ವಜನಿಕ ಘೋಷಣೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಈಗ ಉಸ್ತುವಾರಿ ಸಚಿವರಾಗಿರುವ ಕೆ.ಹೆಚ್ ಮುನಿಯಪ್ಪ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಬಲವಂತವಾಗಿ ಭೂಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ರೈತರ ಮತ ಕೇಳಿದ್ದರು. ಆದರೆ, ಈ ಇಬ್ಬರೂ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ತಮ್ಮ ವಚನಕ್ಕೆ ವಿರುದ್ದವಾಗಿ ವರ್ತಿಸಿ ವಚನ ಭ್ರಷ್ಟರು ಎಂದು ಸಾಬೀತು ಮಾಡಿಕೊಂಡಿದ್ದಾರೆ. ಇದು ಸಾರ್ವಜನಿಕ ಹುದ್ದೆಗೆ ಮತ್ತು ನಡವಳಿಕೆಗೆ ಯೋಗ್ಯವಲ್ಲದ್ದು ಎಂದು ಸಮಿತಿ ಖಂಡಿಸಿದೆ.

ಇತ್ತೀಚಿಗಿನ ಸಭೆಯೂ ಸೇರಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಪ್ರತಿಭಟನಾ ಒತ್ತಡ ಹೆಚ್ಚಿದ ಸಂದರ್ಭದಲ್ಲೆಲ್ಲಾ ಮುಖ್ಯಮಂತ್ರಿ ನೇತೃತ್ವದಲ್ಲಿ ನಾಲ್ಕಾರು ಸಭೆಗಳು, ಉಸ್ತುವಾರಿ ಮಂತ್ರಿ ನೇತೃತ್ವದಲ್ಲಿ ಹತ್ತಾರು ಸಭೆಗಳು ಅಲ್ಲದೇ ಸ್ವತಃ ಉಸ್ತುವಾರಿ ಮಂತ್ರಿ ಹತ್ತಾರು ಬಾರಿ ಧರಣಿ ಸ್ಥಳಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ತೀರ್ಮಾನ ಮಾಡುವುದಾಗಿ ಹೇಳಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ರೈತರ ಒಪ್ಪಿಗೆ ಇಲ್ಲದೇ ಭೂ ಸ್ವಾಧೀನ ಮುಂದುವರೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹಲವಾರು ಬಾರಿ ಸ್ಪಷ್ಟಪಡಿಸಿದ್ದಾರೆ. ಈ ರೀತಿ ಭರವಸೆ ನೀಡಿ ಒಳಗೊಳಗೆ ಭೂ ಸ್ವಾಧೀನದ ಪ್ರಕ್ರಿಯೆ ಮುಂದುವರೆಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರೈತರಲ್ಲಿ ಹತಾಶೆ – ನಿರಾಶೆ ಉಂಟು ಮಾಡಿ ಒಡಕುಂಟು ಮಾಡುವ ಹೀನ ಕುತಂತ್ರವಲ್ಲದೇ ಬೇರೇನೂ ಅಲ್ಲ ಎಂದು ಸಮಿತಿ ಕುಟುಕಿದೆ.

ಸಾರ್ವಜನಿಕವಾಗಿ ಒಂದು ಮುಖ ತೋರಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಇನ್ನೊಂದು ರೀತಿಯಲ್ಲಿ ಆದೇಶ ನೀಡಿ ರೈತ ಸಮುದಾಯವನ್ನು ಹಾಗೂ ರೈತ ಹೋರಾಟವನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಪಮಾನಿಸಿದೆ. ಚನ್ನರಾಯಪಟ್ಟಣ ಹೋಬಳಿ ರೈತರ ಧರಣಿ ಸ್ಥಳಕ್ಕೆ ಈ ನಾಲ್ಕು ವರ್ಷಗಳಲ್ಲಿ ಅಖಿಲ ಭಾರತ ಕಿಸಾನ್ ಸಭಾ ಅಧ್ಯಕ್ಷರು, ಸಿಪಿಐಎಂ ಪಾಲಿಟ್ ಬ್ಯೂರೋ ಸದಸ್ಯರು, ಸಂಯುಕ್ತ ಕಿಸಾನ್ ಮೋರ್ಚಾ ನಾಯಕರೂ ಆಗಿರುವ ಡಾ.ಅಶೋಕ್ ಧವಳೆ, ಅಖಿಲ ಭಾರತ ಕಿಸಾನ್ ಸಭಾದ ಅಖಿಲ ಭಾರತ ಹಣಕಾಸು ಕಾರ್ಯದರ್ಶಿ, ಮಾಜಿ ಶಾಸಕ ಕೃಷ್ಣಪ್ರಸಾದ್, ಭಾರತೀಯ ಕಿಸಾನ್ ಯೂನಿಯನ್‌ನ ರಾಕೇಶ್ ಟಿಕಾಯತ್ ಸೇರಿದಂತೆ ರಾಷ್ಟ್ರೀಯ ರೈತ ನೇತಾರರು ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದ ಎಲ್ಲಾ ರೈತ ಚಳವಳಿಗಳ ಹಾಗೂ ಬುದ್ಧಿಜೀವಿ, ಸಾಹಿತಿಗಳ ಬೆಂಬಲ ಮತ್ತು ಅನುಕಂಪ ಈ ಭೂ ಸ್ವಾಧೀನ ವಿರೋಧಿ ರೈತರ ಮೇಲೆ ಇದೆ. ಮೇಲಾಗಿ ತಮ್ಮ ತೀವ್ರ ಅನಾರೋಗ್ಯದ ನಡುವೆಯೂ ಈ ರೈತರ ಹೋರಾಟಕ್ಕೆ ನೇತೃತ್ವ ನೀಡುತ್ತಿದ್ದ ಜಿಸಿ ಬಯ್ಯಾರೆಡ್ಡಿರವರು ಈ ಹೋರಾಟದ ಬೇಡಿಕೆಯನ್ನು ಪುನರುಚ್ಚರಿಸುತ್ತಾ ಮರಣವನ್ನಪ್ಪಿದ್ದಾರೆ. 

ಇದನ್ನೂ ಓದಿ : ದೇವನಹಳ್ಳಿ | ಸರ್ಕಾರ ಉಳಿಯಬೇಕಾದರೆ ರೈತರ ಮಾತು ಕೇಳಿ: ನಿವೃತ್ತ ನ್ಯಾ.ಗೋಪಾಲ ಗೌಡ ಎಚ್ಚರಿಕೆ

ಇಷ್ಟೆಲ್ಲಾ ಇದ್ದರೂ ಬಹುರಾಷ್ಟ್ರೀಯ ಸಂಸ್ಥೆಗಳು, ರಿಯಲ್ ಎಸ್ಟೇಟ್ ಮಾಫಿಯಾಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ ಮಾಡೇ ತೀರುವ ಹಠ ಸರ್ವಾಧಿಕಾರಿ ಮನೋಭಾವದ್ದು ಮತ್ತು ಇಂತಹ ಭೂ ಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯಾದ್ಯಂತ ಸಂಪೂರ್ಣ ಮಟ್ಟ ಹಾಕುವ ಫ್ಯಾಸಿಸ್ಟ್ ದುರುದ್ದೇಶದ್ದು. ಈ ದುರುದ್ದೇಶ ಈಡೇರುವುದಕ್ಕೆ ರಾಜ್ಯದ ರೈತ ಸಮುದಾಯ ಅವಕಾಶ ನೀಡುವುದಿಲ್ಲ ಮತ್ತು ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಎಲ್ಲಾ ಭೂ ಸ್ವಾಧೀನದ ಭೀತಿ ಎದುರಿಸುತ್ತಿರುವ ಎಲ್ಲಾ ರೈತರನ್ನು ಒಗ್ಗೂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನಕ್ಕೆ ಪ್ರಬಲ ವಿರೋಧವನ್ನು ಇನ್ನೂ ಹೆಚ್ಚಿನ ಹೋರಾಟದ ಶಕ್ತಿಯೊಂದಿಗೆ ಮುಂದುವರೆಸುತ್ತೇವೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕರ್ನಾಟಕ ರಾಜ್ಯ ಸಮಿತಿಯ ಅಧ್ಯಕ್ಷ ಯು ಬಸವರಾಜು, ಪ್ರದಾನ ಕಾರ್ಯದರ್ಶಿ ಟಿ ಯಶವಂತ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...