ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ದೂರು-ಪ್ರತಿದೂರು ದಾಖಲು

Date:

  • ಸಿಮ್ಸ್‌ ನಿರ್ದೇಶಕನ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಲಾಗಿತ್ತು
  • ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದ್ದರಿಂದ ನಿಂದನೆ ಆರೋಪ

ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್‌) ಡೀನ್ ಮತ್ತು ನಿರ್ದೇಶಕ ಡಾ. ಸಂಜೀವ್ ರೆಡ್ಡಿ, ಡಾ. ಬಿ ಆರ್‌ ಅಂಬೇಡ್ಕರ್‌ ಅವರಿಗೆ ನಿಂದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.

- Advertisement -

ಸಿಮ್ಸ್‌ನ ನಾಲ್ವರು ನೌಕರರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಮೂವರು ವೈದ್ಯರು, ಮುಖ್ಯ ಆಡಳಿತಾಧಿಕಾರಿ ಸೇರಿದಂತೆ ನೌಕರರು ಚಾಮರಾಜನಗರ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪದ ಹಿನ್ನೆಲೆ ನಿರ್ದೇಶಕರ ವಿರುದ್ಧ ತನಿಖೆ ನಡೆಸಬೇಕೆಂದು ವೈದ್ಯರು ಒತ್ತಾಯಿಸಿದ್ದರು. ಈ ಪತ್ರದ ಆಧಾರದ ಮೇಲೆ ಬಿಎಸ್‌ಪಿ ಜಿಲ್ಲಾಧ್ಯಕ್ಷ ಎನ್ ನಾಗಯ್ಯ ಅವರು ನಿರ್ದೇಶಕರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಿಮ್ಸ್‌ ನಿರ್ದೇಶಕ ಡಾ. ಸಂಜೀವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ ಸುದ್ದಿಗಾರರಿಗೆ ತಿಳಿಸಿದ್ದರು.

ಪ್ರತಿಭಟನಾಕಾರರ ವಿರುದ್ಧ ಪ್ರತಿದೂರು ದಾಖಲು

“ಅಂಬೇಡ್ಕರ್‌ಗೆ ಅವಮಾನಿಸಿರುವ ಬಗ್ಗೆ ಯಾವುದೇ ಸಾಕ್ಷಿ ಆಧಾರವಿಲ್ಲದೆ ನನ್ನ ವಿರುದ್ಧ ದೂರು ನೀಡಿದ್ದು, ಇಲಾಖೆ ಕೆಲಸದ ಮೇಲೆ ತೆರಳುತ್ತಿದ್ದ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಪ್ರಚೋದನೆ ನೀಡಿ, ಕಾರಿನ ಮೇಲೆ ದಾಳಿ ಮಾಡಿ, ನನ್ನನ್ನು ಮತ್ತು ನನ್ನ ಪತ್ನಿಯನ್ನು ಎಳೆದಾಡಿ ಜೀವ ಬೆದರಿಕೆ ಒಡ್ಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್‌ ನಿರ್ದೇಶಕ ಡಾ. ಸಂಜೀವ್‌ ರೆಡ್ಡಿ, ಸಿಮ್ಸ್‌ನ ಡಾ. ಮಾರುತಿ ಹಾಗೂ ಇನ್ನು ಸುಮಾರು 70 ಮಂದಿ ಅಪರಿಚಿತರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ಸಿಮ್ಸ್‌ ಡೀನ್ ಮುಖಕ್ಕೆ ಮಸಿ

ಘಟನೆ ಹಿನ್ನೆಲೆ

“ಸಿಮ್ಸ್‌ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ. ಗಿರೀಶ್ ಮತ್ತು ಡಾ. ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್‌ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ದೂರಿನ ಪ್ರತಿಯು ಅಂಬೇಡ್ಕರ್‌ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಬಳಿಕ ಸಿಮ್ಸ್‌ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್‌ ನಿರ್ದೇಶಕರ ಡಾ. ಸಂಜೀವ್‌ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...