ನಾಗಮಂಗಲ ಗಲಭೆ | ಸುಳ್ಳು ಸುದ್ದಿ ಹರಡಿದ್ದ ಬಿಜೆಪಿಯ ಶೋಭಾ ಕರಂದ್ಲಾಜೆ, ಅಶೋಕ್ ವಿರುದ್ಧ ಎಫ್‌ಐಆರ್

Date:

ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ‘ಎಕ್ಸ್’ನಲ್ಲಿ ಸುಳ್ಳು ಸುದ್ದಿಯನ್ನು ಹರಡಿದ್ದ ಆರೋಪದ ಮೇಲೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ.

- Advertisement -

ನಾಗಮಂಗಲ ಘಟನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಟೌನ್‌ಹಾಲ್ ಮುಂಭಾಗ ಸಂಘಪರಿವಾರದ ಕಾರ್ಯಕರ್ತರು ಗಣೇಶನ ಮೂರ್ತಿಯನ್ನು ಇಟ್ಟುಕೊಂಡು ಪ್ರತಿಭಟಿಸುತ್ತಿದ್ದರು. ಆ ವೇಳೆ ಪೊಲೀಸರು ಗಣೇಶನ ಮೂರ್ತಿಯನ್ನು ತೆಗೆದುಕೊಂಡು ಹೋಗಿದ್ದರು. ಆದರೆ, ಈ ಫೋಟೋಗಳನ್ನು ತಮ್ಮ “ಎಕ್ಸ್” ವೇದಿಕೆಯಲ್ಲಿ ಹಂಚಿಕೊಂಡು ನಾಗಮಂಗದಲ್ಲಿ ಪೂಜಿಸುತ್ತಿದ್ದ ಗಣೇಶನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ದೇಶದ್ರೋಹಿಗಳು ಗಣೇಶನ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಬರಹವನ್ನು ಪೋಸ್ಟ್ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ಈ ಬಗ್ಗೆ ಮಂಡ್ಯ ಪೊಲೀಸರು ಫೇಸ್‌ಬುಕ್ ಪೇಜ್‌ನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಸುಳ್ಳು ಸುದ್ದಿ ಹರಡಿದ್ದಕ್ಕೆ ಶೋಭಾ ಕರಂದ್ಲಾಜೆ ವಿರುದ್ಧ ಪೊಲೀಸ್ ಅಧಿಕಾರಿ ಎಂ.ರಮೇಶ್ ಎಂಬವರು ನೀಡಿದ ದೂರಿನ ಮೇರೆಗೆ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್), 2023(ಯು/ಎಸ್-169) ಪ್ರಕಾರ ಪ್ರಕರಣ ದಾಖಲಾಗಿದೆ.

ನಾಗಮಂಗಲ 1

ನಾಗಮಂಗಲದಲ್ಲಿ ನಡೆಯದ, ಎಲ್ಲೋ ನಡೆದಿರುವ ಘಟನೆಯ ಫೋಟೋಗಳನ್ನು ನಾಗಮಂಗಲದಲ್ಲಿ ಗಣೇಶನ ವಿಸರ್ಜನೆ ಸಮಯದಲ್ಲಿ ನಡೆದ ಘಟನೆಗಳನ್ನು ಬಿಂಬಿಸಿ ಸಮಾಜದಲ್ಲಿ ದೊಂಬಿ, ಗಲಭೆಯುಂಟು ಮಾಡುವ ದೃಷ್ಟಿಯಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸಿ ದೊಂಬಿಗೆ ಪ್ರಚೋದನೆ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಿರುದ್ಧವೂ ಎಫ್‌ಐಆರ್

ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ ವಿರುದ್ಧವೂ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್), 2023(ಯು/ಎಸ್-169) ಪ್ರಕಾರ ನಾಗಮಂಗಲ ಪೊಲೀಸ್ ಟೌನ್ ಪೊಲೀಸ್ ಠಾಣೆಯಲ್ಲಿ ಇನ್ನೊಂದು ಎಫ್‌ಐಆರ್ ದಾಖಲಾಗಿದೆ.

ಯುವಕನೊಬ್ಬ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಎರಡು ವಿಡಿಯೋಗಳನ್ನು ಆರ್ ಅಶೋಕ್ ಅವರು ತಮ್ಮ ಹೆಸರಿನ “ಎಕ್ಸ್” ವೇದಿಕೆಯಲ್ಲಿ ಹಂಚಿಕೊಂಡಿದ್ದರು.

ಇದನ್ನು ಓದಿದ್ದೀರಾ? ಉಡುಪಿ | ಜಿಲ್ಲೆಯಲ್ಲಿ ಕಾಲರಾ ಭೀತಿ: ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಕರೆ

ಅಲ್ಲದೇ, “ಈ ಘಟನೆ ನಾಗಮಂಗಲದ ಬದರಿಕೊಪ್ಪಲು ಗ್ರಾಮದಲ್ಲಿ ಗಣೇಶನ ವಿಸರ್ಜನೆ ವೇಳೆ ನಡೆದಿದೆ. ಪಾಕಿಸ್ತಾನ್ ಜಿಂದಾಬ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ” ಎಂಬ ಬರಹವನ್ನು ಹಂಚಿಕೊಂಡಿದ್ದರು. ಆದರೆ, ಈ ವಿಡಿಯೋ ಕೂಡ ದಾವಣಗೆರೆಯದ್ದಾಗಿದ್ದು, ವಾಸ್ತವವಾಗಿ ನಾಗಮಂಗಲದ ವಿಡಿಯೋ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸುಳ್ಳು ಹರಡಿದ್ದಕ್ಕಾಗಿ ಆರ್ ಅಶೋಕ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಈ ಬಾರಿ ಕಬ್ಬಿಗೆ ಟನ್‌ಗೆ ₹ 5,500 ದರ ನಿಗದಿಗೆ ರೈತ ಸಂಘದ ಅಧ್ಯಕ್ಷ ಚೂನಪ್ಪ‌ಪೂಜಾರಿ ಆಗ್ರಹ

"ಮಳೆ‌ ಕೊರತೆಯಿಂದ‌ ಎಲ್ಲ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...