ಕೊಡಗು | ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ; ಆಸ್ಪತ್ರೆಗೆ ಭೇಟಿ ನೀಡಿದ ಎ ಎಸ್ ಪೊನ್ನಣ್ಣ

Date:

ಕೊಡಗು ಜಿಲ್ಲೆ, ಕಾಟಕೇರಿಯ ಬಳಿಯ ಹರಿಮಂದಿರ್ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡದಿಂದ ಗಾಯಾಳುಗಳಾಗಿ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧ್ಯಾರ್ಥಿಗಳನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

- Advertisement -

ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳನ್ನು ಭೇಟಿಯಾಗಿ ಧೈರ್ಯ ಹೇಳಿದರು. ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಮಕ್ಕಳ ಪೋಷಕರಿಗೆ ಸಾಂತ್ವನ ಹೇಳಿದರು. ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿರುವ ಶಾಲೆಯ ವಾರ್ಡನ್ ಬಳಿ ಘಟನೆಯ ಬಗ್ಗೆ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ದುರ್ಘಟನೆಯಲ್ಲಿ ಮೃತ ಪಟ್ಟ 2ನೇ ತರಗತಿಯ ಬಾಲಕ ಕುಂದಚೇರಿಯ ಪುಷ್ಪಕ್ ಕುಟುಂಬಕ್ಕೆ ಐದು ಲಕ್ಷ ರೂಪಾಯಿಗಳ ಪರಿಹಾರವನ್ನು ಸರ್ಕಾರದಿಂದ ಘೋಷಣೆ ಮಾಡಿದ್ದು, ಹೆಚ್ಚಿನ ಪರಿಹಾರಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಆಶ್ರಮ ಶಾಲೆಯಲ್ಲಿ ದುರಂತ ನಡೆದ ಬಗ್ಗೆ ಪೂರ್ಣ ತನಿಖೆಗೆ ಸೂಚಿಸಿದ್ದು, ವರದಿ ಬಂದ ನಂತರ ಕ್ರಮ ಜರುಗಿಸಲಾಗುವುದು. ಘಟನೆಯಿಂದ ತೀವ್ರ ಅಘಾತವಾಗಿದೆ. ಇಂತಹ ದುರ್ಘಟನೆ ಘಟಿಸಬಾರದಿತ್ತು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ವಸ್ತು ಪ್ರದರ್ಶನ ಮೈದಾನದಲ್ಲಿ ಬಾಲಕಿ ಮೃತದೇಹ ಪತ್ತೆ ಪ್ರಕರಣ: ಆರೋಪಿ ಬಂಧನ

ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಮೂಡಾ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಮಾಜಿ ನಗರಸಭಾ ಅಧ್ಯಕ್ಷ ಹೆಚ್.ಎಂ. ನಂದಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ, ವೈದ್ಯ ಸೋಮಶೇಖರ್, ಮುನೀರ್ ಅಹಮದ್, ಪ್ರಕಾಶ್ ಆಚಾರ್ಯ, ಹೊಸೂರು ಸೂರಜ್, ಸೇರಿದಂತೆ ಪಕ್ಷದ ಮುಖಂಡರು, ವೈದಕೀಯ ವಿಭಾಗದ ಅಧಿಕಾರಿಗಳು ಭೇಟಿ ಸಂದರ್ಭದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಜಮೀನು ಕಬಳಿಕೆ: ನಾಲ್ವರ ವಿರುದ್ಧ ಪ್ರಕರಣ

ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಸರ್ವೇ ನಂಬರ್ 619ಎ/2 ರಲ್ಲಿದ್ದ 6...

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...