ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ ಗ್ರಾಮದಲ್ಲಿನ ಜೆಸ್ಕಾಂ ಪವರ್ ಸ್ಟೇಷನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿ ಉರಿದಿದೆ.
ಭಾನುವಾರ ಸಂಜೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದ ತಕ್ಷಣ ಜೆಸ್ಕಾಂ ಸಿಬ್ಬಂದಿ ಕೂಡಲೆ ವಿದ್ಯುತ್ ಸರಬರಾಜನ್ನು ಬಂದ್ ಮಾಡಿದ್ದಾರೆ. ಈ ಹಿನ್ನೆಲೆ ಸೇಡಂ ತಾಲೂಕಿನ 25 ಗ್ರಾಮಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು, ಜನರಿಗೆ ಸಮಸ್ಯೆ ಉಂಟಾಗಿದೆ.
ಬೇಸಿಗೆ ಆರಂಭವಾಗಿರುವುದರಿಂದ ಬಿಸಿಲಿನ ತಾಪಮಾನ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.