ಕಲಬುರಗಿ | ಪವರ್ ಸ್ಟೇಷನ್‌ನಲ್ಲಿ ಬೆಂಕಿ; 25 ಗ್ರಾಮಗಳಿಗೆ ವಿದ್ಯುತ್‌ ಕಡಿತ

Date:

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ ಗ್ರಾಮದಲ್ಲಿನ ಜೆಸ್ಕಾಂ ಪವರ್ ಸ್ಟೇಷನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿ ಉರಿದಿದೆ.

ಭಾನುವಾರ ಸಂಜೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದ ತಕ್ಷಣ ಜೆಸ್ಕಾಂ ಸಿಬ್ಬಂದಿ ಕೂಡಲೆ ವಿದ್ಯುತ್​ ಸರಬರಾಜನ್ನು ಬಂದ್​ ಮಾಡಿದ್ದಾರೆ. ಈ ಹಿನ್ನೆಲೆ ​​​ಸೇಡಂ ತಾಲೂಕಿನ 25 ಗ್ರಾಮಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು, ಜನರಿಗೆ ಸಮಸ್ಯೆ ಉಂಟಾಗಿದೆ.

ಬೇಸಿಗೆ ಆರಂಭವಾಗಿರುವುದರಿಂದ ಬಿಸಿಲಿನ ತಾಪಮಾನ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಜಿಲ್ಲಾಸ್ಪತ್ರೆಯಲ್ಲಿ ಮಂಗಗಳ ಕಾಟ, ರೋಗಿಗಳು ಹೈರಾಣು

ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳ ಕೊರತೆ...

ಗದಗ | ಕಲಬುರಗಿಯಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿನಿಯರ ಸಮಾವೇಶ

ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ...

ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದಾಸಿ ಮಹಿಳೆಯರ ಧರಣಿ

ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ...

ಬೆಳಗಾವಿ | ಅಧಿವೇಶನದಲ್ಲಿ ಭಾಗವಹಿಸುವವರಿಗೆ ಮೂಲಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಡಿ.4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವವರಿಗೆ ವಸತಿ,...