ಕೋಲಾರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಭಾನುವಾರ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ಸಾವಿರಾರು ಟೊಮ್ಯಾಟೊ ಬಾಕ್ಸ್‌ಗಳು ಬೆಂಕಿಗಾಹುತಿಯಾಗಿವೆ.
ಸೋಮಣ್ಣ ಎಂಬುವರಿಗೆ ಸೇರಿದ ಮಂಡಿಯಲ್ಲಿ ಸಾವಿರಾರು ಟೊಮ್ಯಾಟೊ ಬಾಕ್ಸ್ ಗಳನ್ನು ಸಂಗ್ರಹಿಸಿಡಲಾಗಿತ್ತು.
ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಸಾವಿರಾರು ಟೊಮೇಟೊ ಬಾಕ್ಸ್ ಗಳು ಸುಟ್ಟು ಕರಕಲಾಗಿವೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
