ಚಿತ್ರದುರ್ಗ | ಮೀಸಲು ಅರಣ್ಯದಲ್ಲಿ ಬೆಂಕಿ; ನೂರಾರು ಎಕರೆ ಗಿಡ-ಮರಗಳಿಗೆ ಹಾನಿ

Date:

  • ಬೆಂಕಿ ನಂದಿಸಲು ಅಗ್ನಿಶಾಮಕ ದಳ, ಅರಣ್ಯ ಸಿಬ್ಬಂದಿ ಜಂಟಿ ಕಾರ್ಯಚರಣೆ
  • 368 ಹೆಕ್ಟೇರ್ ಪ್ರದೇಶದಲ್ಲಿ ಹಲವು ಜಾತಿಯ ಗಿಡಗಳನ್ನು ಪೋಷಿಸಲಾಗಿತ್ತು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ವರವು ಕಾವಲಿನ ನಾಲ್ಕನೇ ಹಂತದ ಮೀಸಲು ಅರಣ್ಯಕ್ಕೆ ಶನಿವಾರ ರಾತ್ರಿ ಬೆಂಕಿ ಬಿದ್ದಿದ್ದು, ನೂರಾರು ಎಕರೆ ಪ್ರದೇಶದಲ್ಲಿ ಅರಣ್ಯ ಆಹುತಿಯಾಗಿದೆ.

ನಾಯಕನಹಟ್ಟಿ ಹೋಬಳಿಯ ನೆಲಗೇತನಹಟ್ಟಿ ಮತ್ತು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ ಡಿಒ) ಕಾಂಪೌಂಡ್, ಬೊಮ್ಮಕ್ಕನಹಳ್ಳಿ, ನಕ್ಲರಹಟ್ಟಿ, ಮಟ್ಟಿದಿನ್ನೆಗೆ ಹೊಂದಿಕೊಂಡಿರುವ “ವರವು ಕಾವಲಿ”ನ 4ನೇ ಹಂತದ ಕಾಯ್ದಿರಿಸಿದ ಅರಣ್ಯ ಪ್ರದೇಶವಿದೆ. ಐದು ವರ್ಷದಿಂದ ಅರಣ್ಯ ಇಲಾಖೆಯು ಸುಮಾರು 368 ಹೆಕ್ಟೇರ್ ಪ್ರದೇಶದಲ್ಲಿ ಹಲವು ಜಾತಿಯ ಗಿಡಗಳನ್ನು ನೆಟ್ಟು ಪೋಷಣೆ ಮಾಡಿತ್ತು.

ಕಮರ, ಹೊಂಗೆ, ತಬಸೇ, ನೇರಳೆ, ಚಳ್ಳ ಉದಯ, ಆಲ, ಬೇಗ, ಅರಳಿ, ಸೀತಾಫಲ, ಸಿಮರುಬಾ, ಹಲಸು ಸೇರಿದಂತೆ ಹತ್ತಾರು ಜಾತಿಯ ಕಾಡು ಮರಗಳನ್ನು ನೆಟ್ಟು ಜಾಗರೂಕತೆಯಿಂದ ರಕ್ಷಣೆ ಮಾಡಲಾಗಿತ್ತು. ನೈಸರ್ಗಿಕವಾಗಿ ನೂರಾರು ಜಾತಿಯ ಕಾಡು ಮರಗಳು ಬೆಳೆದಿದ್ದವು.

ಇನ್ನೂ ಐದು ವರ್ಷಗಳು ಕಳೆದಿದ್ದರೆ ಜಿಲ್ಲೆಯಲ್ಲಿ ಅತ್ಯಂತ ದೊಡ್ಡ ಅರಣ್ಯ ಸಂಪತ್ತು ಇದಾಗಲಿತ್ತು. ಹಾಗೆ ನೈಸರ್ಗಿಕವಾಗಿ ಬೆಳೆದ ಈ ಅರಣ್ಯ ಪ್ರದೇಶದಲ್ಲಿ ಹುಲ್ಲುಗಾವಲು ಹೆಚ್ಚಾಗಿತ್ತು. ಕಳೆದ ಒಂದೂವರೆ ತಿಂಗಳಿನಿಂದ ಅತ್ಯಂತ ಬಿರು ಬಿಸಿಲಿಗೆ ಹುಲ್ಲುಗಾವಲು ಒಣಗಿತ್ತು.

800 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಅಭಿವೃದ್ಧಿಪಡಿಸಿರುವ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಸುತ್ತಲೂ ತಂತಿ ಬೇಲಿ ನಿರ್ಮಿಸಲು ಮುಂದಾಗಿದ್ದೇವೆ. ಈಗಾಗಲೇ ಬಹುತೇಕ ರಕ್ಷಣಾ ಬೇಲಿ ಕಾಮಗಾರಿ ಮುಕ್ತಾಯದ ಹಂತ ತಲುಪಿದೆ. ಇದರಿಂದ ಅಸಮಾಧಾನಗೊಂಡ ಸಮೀಪದ ಹಳ್ಳಿಯ ಕಿಡಿಗೇಡಿಗಳು ಶನಿವಾರ ರಾತ್ರಿ 7.30ರ ಸುಮಾರಿಗೆ ಅರಣ್ಯ ಪ್ರದೇಶದಲ್ಲಿ ಒಣಗಿರುವ ಹುಲ್ಲಿಗೆ ಬೆಂಕಿ ಹಚ್ಚಿದ್ದಾರೆ. ರಾತ್ರಿ ಗಾಳಿಯ ವೇಗ ಹೆಚ್ಚಾಗಿದ್ದು, ಬೆಂಕಿಯ ಕೆನ್ನಾಲಿಗೆ ರಭಸವಾಗಿ ಹಬ್ಬಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಈ ಭಾಗದಲ್ಲಿ ಮಳೆಯಾಗದೆ ಇಲ್ಲಿನ ಹುಲ್ಲು ಸಂಪೂರ್ಣವಾಗಿ ಒಣಗಿತ್ತು. ಇದರಿಂದ ಬೆಂಕಿಯ ಹರಡುವಿಕೆಯ ವೇಗ ಹೆಚ್ಚಾಗಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡಬೇಕಾಯಿತು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕಾಡಾನೆ ದಾಳಿಯಿಂದ ಪಾರಾದ ವಿಚಾರವಾದಿ ಕೆ ಎಸ್‌ ಭಗವಾನ್‌

ಭಾನುವಾರ ನಸುಕಿನ ಹೊತ್ತಿಗೆ ಅಗ್ನಿಶಾಮಕ ದಳ ಮತ್ತು ಚಳ್ಳಕೆರೆ ವಿಭಾಗ ವ್ಯಾಪ್ತಿಯ ಎಲ್ಲ ಅರಣ್ಯ ಸಿಬ್ಬಂದಿ ಸೇರಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದೇವೆ. ಎಷ್ಟು ಪ್ರದೇಶದ ಅರಣ್ಯ ಸಂಪತ್ತು ಬೆಂಕಿಗೆ ಆಹುತಿಯಾಗಿದೆ ಎಂಬುದನ್ನು ತಿಳಿಯಬೇಕಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎರಡು ತಿಂಗಳಿಂದ ಕಾಡಿನಲ್ಲಿದ್ದ ಹುಲ್ಲುಗಾವಲು ಸಂಪೂರ್ಣ ಒಣಗಿದ್ದು, ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಮಾಹಿತಿ ಇದೆ, ಈ ಬಗ್ಗೆ ತನಿಖೆ ನಡೆಯುತ್ತದೆ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳ ಸಹಕಾರದಿಂದ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದು ನಂದಿಸಿದ್ದೇವೆ, ಕಿಡಿಗೇಡಿಗಳ ಪತ್ತೆಗೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...