ತುಮಕೂರು | ಕ್ಯಾನ್‌ಗೆ ಪೆಟ್ರೊಲ್‌ ತುಂಬಿಸುವಾಗ ಬೆಂಕಿ; ಯುವತಿ ಸಾವು

Date:

ಕ್ಯಾನ್‌ಗೆ ಪೆಟ್ರೋಲ್ ತುಂಬಿಸುವಾಗ ಬೆಂಕಿ ಹೊತ್ತಿಕೊಂಡು ಯುವತಿ ಮೃತಪಟ್ಟಿದ್ದು, ಮಹಿಳೆಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬಡವನಹಳ್ಳಿ ಗ್ರಾಮದ ಪೆಟ್ರೋಲ್‌ ಬಂಕ್‌ನಲ್ಲಿ ನಡೆದಿದೆ.‌

- Advertisement -

ಬೈಕ್‌ಗೆ ಬೆಂಕಿ ಹತ್ತಿಕೊಳ್ಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಿರಾ ತಾಲ್ಲೂಕಿನ ಜವನಹಳ್ಳಿ ನಿವಾಸಿ ಭವ್ಯ ಮೃತ ದುರ್ದೈವಿ. ಆಕೆಯ ತಾಯಿ ರತ್ನಮ್ಮ (46) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ದ್ವಿಚಕ್ರ ವಾಹನದ ಮೇಲೆ ಕ್ಯಾನ್ ಇಟ್ಟು ಪೆಟ್ರೋಲ್ ತುಂಬಿಸುವಾಗ ಅನಾಹುತ ನಡೆದಿದೆ. ಗಾಯಗೊಂಡಿದ್ದ ಭವ್ಯ ಮತ್ತು ರತ್ನಮ್ಮರನ್ನು ಶಿರಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಹೆಚ್ಚಿನ‌ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಭವ್ಯ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳು ಇಂದಿನಿಂದಲೇ ಜಾರಿ: ಸಿಎಂ ಸಿದ್ದರಾಮಯ್ಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ : ತುಮಕೂರು ಜಿಲ್ಲೆಯಲ್ಲಿ ಶೇ.71.56 ಮತದಾನ

 ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ತುಮಕೂರು...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...