ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ.
ಮೆದುಳು ಜ್ವರದಿಂದ ಬಳಲುತ್ತಿದ್ದ 22 ವರ್ಷದ ಮಾನ್ಯಾ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ವಿಶೇಷ ವಿಮಾನದ ಮೂಲಕ ಕಳುಹಿಸಿಕೊಡಲಾಯಿತು.
ಶಿವಮೊಗ್ಗದ ಗಾಂಧಿ ಬಜಾರ್‌ನ ತಿಮ್ಮಪ್ಪ ಕೊಪ್ಪಲು ಗ್ರಾಮದ ನಿವಾಸಿ ಹಾಗೂ ಮನೋಜ್ ಮನಿಷಾ ದಂಪತಿಯ ಪುತ್ರಿಯಾಗಿರುವ ಮಾನ್ಯಾ, ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಇವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಮುಂಬೈಗೆ ರವಾನಿಸಲು ನಿರ್ಧರಿಸಲಾಯಿತು.
ಯುವತಿಯನ್ನು ಖಾಸಗಿ ಆಸ್ಪತ್ರೆಯಿಂದ ವಿಮಾನ ನಿಲ್ದಾಣಕ್ಕೆ ಸಾಗಿಸಲು ಶಿವಮೊಗ್ಗ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಹಕಾರ .