ಶಾಸಕ ಪ್ರದೀಪ್​ ಈಶ್ವರ್‌ಗೆ ಮಾತೃ ವಿಯೋಗ

Date:

Advertisements

ಬಿಜೆಪಿಯ ಪ್ರಬಲ ನಾಯಕ ಹಾಗೂ ಮಾಜಿ ಸಚಿವ ಕೆ ಸುಧಾಕರ್​ ವಿರುದ್ಧ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್​ ಪಕ್ಷದಿಂದ ಕಣಕ್ಕಿಳಿದು, ಭರ್ಜರಿ ಗೆಲುವು ದಾಖಲಿಸಿ, ಮೊದಲ ಬಾರಿಗೆ ಶಾಸಕರಾಗಿರುವ ಪ್ರದೀಪ್​ ಈಶ್ವರ್​ ಅವರಿಗೆ ಇಂದು ಮಾತೃವಿಯೋಗವಾಗಿದೆ.

ಪ್ರದೀಪ್​ ಈಶ್ವರ್​ ಅವರನ್ನು ಪೋಷಿಸಿದ್ದ ಸಾಕು ತಾಯಿ ರತ್ನಮ್ಮ ಅವರು ತುಂಬಾ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಬೆಳಿಗ್ಗೆ ಪೇರೇಸಂದ್ರ ಗ್ರಾಮದಲ್ಲಿ ರತ್ಮಮ್ಮ ವಿಧಿವಶರಾಗಿದ್ದಾರೆ.

ಸಿದ್ದರಾಮಯ್ಯ ಪ್ರಮಾಣ ವಚನ ಕ್ರಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿದ್ದ ಪ್ರದೀಪ್​ ಈಶ್ವರ್ ʼತಾಯಿ ಇನ್ನಿಲ್ಲʼ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಪೇರೇಸಂದ್ರ ಗ್ರಾಮಕ್ಕೆ ಮರಳಿದ್ದಾರೆ. ತಾಯಿಯ ಅಂತಿಮ ದರ್ಶನ ಪಡೆದು ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ ಎನ್ನಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ಸಿಮ್ಸ್‌ ಡೀನ್ ಮುಖಕ್ಕೆ ಮಸಿ

ಪ್ರದೀಪ್​ ಈಶ್ವರ್​ ಶಾಸಕರಾಗಿ ಆಯ್ಕೆಯಾದ ದಿನದಿಂದ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್​ ಸರ್ಕಾರ ರಚನೆಯಾಗುವ ಮುನ್ನವೇ ಕ್ಷೇತ್ರದಲ್ಲಿ ಜನರ ಜೊತೆ ನಿಕಟ ಸಂಪರ್ಕ ಬೆಳೆಸುತ್ತಿರುವ ಪ್ರದೀಪ್​ ಈಶ್ವರ್​, ಮನೆ ಮನೆಗೆ ತೆರಳಿ ಕ್ಷೇತ್ರದ ಜನರ ಕಷ್ಟ-ಸುಖಗಳನ್ನು ಆಲಿಸುತ್ತಿದ್ದಾರೆ. ಅಲ್ಲದೆ, ಸ್ಥಳದಲ್ಲೇ ಪರಿಹಾರವನ್ನು ನೀಡುವ ಮೂಲಕ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಪರಿಹರಿಸುವ ಭರವಸೆಯನ್ನು ನೀಡುವ ಮೂಲಕ ಜನನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X