ಮೀನಿನ ಕ್ಷಾಮ | ಸಾಲ ನೀಡಿದ ಸಂಸ್ಥೆಗಳಿಂದ ಕಿರುಕುಳ; ಸಂತ್ರಸ್ತರ ನೆರವಿಗೆ ಬರಲು ಜಿಲ್ಲಾಡಳಿತಕ್ಕೆ ಡಿವೈಎಫ್ಐ ಒತ್ತಾಯ

Date:

ಇತ್ತೀಚಿನ ವರ್ಷದಲ್ಲೇ ಅತಿ ಗಂಭೀರವಾಗಿ ಕಾಡಿರುವ ಮೀನಿನ ಕ್ಷಾಮದಿಂದಾಗಿ ಮೀನುಗಾರರು ಹಾಗೂ ಮೀನುಗಾರಿಕೆಯನ್ನು ನಂಬಿರುವ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.

- Advertisement -

ಮೀನುಗಾರಿಕೆ ನಡೆಸುವ ನೂರಾರು ದೊಡ್ಡ ಬೋಟುಗಳು ಲಂಗರು ಹಾಕಿವೆ. ಮೀನುಗಾರಿಕೆಗೆ ತೆರಳುವ ಬೋಟುಗಳು ಮೀನಿಲ್ಲದೆ ವಾಪಸ್ ಬರುತ್ತಿವೆ. ಬೋಟು ಮಾಲೀಕರು ಬ್ಯಾಂಕ್ ಸಾಲ ಸಂದಾಯ ಮಾಡಲು ಪರದಾಡುತ್ತಿದ್ದರೆ, ಇನ್ನೊಂದೆಡೆ ಮೀನುಗಾರಿಕಾ ವೃತ್ತಿಯಲ್ಲಿರುವ ಒರಿಸ್ಸಾ, ತಮಿಳುನಾಡು ಮೂಲದ ವಲಸೆ ಕಾರ್ಮಿಕರು ಕೆಲಸವಿಲ್ಲದೆ ಬರಿಗೈಯಲ್ಲಿ ತಮ್ಮ ರಾಜ್ಯಗಳಿಗೆ ಹಿಂದಿರುಗುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಮಂಗಳೂರಿನ ಮೀನುಗಾರಿಕಾ ಕಾರ್ಮಿಕರ ಆರ್ಥಿಕ ಪರಿಸ್ಥಿತಿ ತೀರಾ ಶೋಚನೀಯವಾಗಿದೆ.‌
ಮೀನುಗಾರಿಕೆಯಿಂದ ಬರುವ ಆದಾಯವನ್ನು ನಂಬಿಕೊಂಡು ಸ್ವ ಸಹಾಯ ಸಂಘಗಳ ಮೂಲಕ ಕಿರು ಸಾಲ ಪಡೆದ ಕುಟುಂಬಗಳು ಮತ್ಸ್ಯ ಕ್ಷಾಮದಿಂದಾಗಿ ಸಾಲ ಮರುಪಾವತಿ ಮಾಡಲಾಗದೆ ಕಂಗಾಲಾಗಿದ್ದಾರೆ. ಸ್ವ ಸಹಾಯ ಸಂಘಗಳು ಸಾಲ ವಸೂಲಾತಿಗಾಗಿ ತಮ್ಮ ಪ್ರತಿನಿಧಿಗಳ ಮೂಲಕ ಒತ್ತಡ ಹಾಕುವುದು ಮಾತ್ರವಲ್ಲ ಮಾನಸಿಕ ಕಿರುಕುಳ ನೀಡಿ ದೌರ್ಜನ್ಯ ನಡೆಸಿರುವುದಲ್ಲದೆ ಕೆಲವು ಮಹಿಳೆಯರು ಆತ್ಮಹತ್ಯೆಗೂ ಮುಂದಾಗಿರುವ ಘಟನೆಗಳೂ ನಡೆದಿವೆ” ಎಂದು ಡಿವೈಎಫ್ಐ ಹೇಳಿದೆ.‌

ಬುಧವಾರ ಮಂಗಳೂರಿನ ಕಸಬಾ ಬೆಂಗರೆಯಲ್ಲಿ ಸಾಲ ಸಂತ್ರಸ್ತ ಮೀನುಗಾರ ಕುಟುಂಬಗಳನ್ನು ಭೇಟಿ ಮಾಡಿ ಸಭೆ ನಡೆಸಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್ ಮಾತನಾಡಿ, ಕೂಡಲೇ ಜಿಲ್ಲಾಧಿಕಾರಿ ಮದ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದರು.

“ಮೀನಿನ ಕ್ಷಾಮವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿ ಮೀನುಗಾರ ಕುಟುಂಬಗಳು ಸ್ವಸಹಾಯ ಸಂಘಗಳಿಂದ ಪಡೆದಿರುವ ಸಾಲಮನ್ನಾ ಮಾಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ಸಾಲ ವಸೂಲಾತಿಯ ಹೆಸರಿನಲ್ಲಿ ಕಿರುಕುಳ ನೀಡುವ ಹಣಕಾಸು ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಜರಗಿಸಬೇಕು” ಎಂದು ಇಮ್ತಿಯಾಜ್ ಒತ್ತಾಯಿಸಿದರು.

“ಕಿರುಕುಳ ನೀಡುವ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮಕೈಗೊಳ್ಳಲು ಜಿಲ್ಲಾಡಳಿತ ವಿಫಲವಾದರೆ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಇಮ್ತಿಯಾಜ್ ಎಚ್ಚರಿಕೆ ನೀಡಿದರು.

ಡಿವೈಎಫ್ಐ ನಗರಾಧ್ಯಕ್ಷ ಜಗದೀಶ್ ಬಜಾಲ್ ಮಾತನಾಡಿ, “ಸ್ವ ಸಹಾಯ ಸಂಘಗಳ ಮೂಲಕ ಸಾಲ ನೀಡಿರುವ ಹಣಕಾಸು ಸಂಸ್ಥೆಗಳು ರಿಸರ್ವ್ ಬ್ಯಾಂಕಿನ ನಿರ್ದೇಶನಗಳನ್ನು ಉಲ್ಲಂಘನೆ ಮಾಡಿದೆ. ಸಾಲಗಾರ ಸಂತ್ರಸ್ತರಿಗೆ ಸರಿಯಾದ ಮಾಹಿತಿ ನೀಡದೆ ವಂಚನೆ ಮಾಡುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಹಿಂದೆ ಹಲವು ಕೋಟೆಗಳು ಉರುಳಿವೆ, ಮಹಾರಾಷ್ಟ್ರದಲ್ಲೇ ಹಿಂದುತ್ವದ ಕೋಟೆ ಉಳಿದಿಲ್ಲ: ಬಿ ಕೆ ಹರಿಪ್ರಸಾದ್

ಸಾಲ ಸಂತ್ರಸ್ತರ ಪರವಾಗಿ ರೇಷ್ಮಾ, ಸುಹಾನ, ಸೌದ, ರಝಿಯಾ ಮಾತನಾಡಿದರು. ಇದೇ ವೇಳೆ ಡಿವೈಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ತಯ್ಯುಬ್ ಬೆಂಗ್ರೆ, ಸಿಪಿಎಂ ಬೆಂಗರೆ ಕಾರ್ಯದರ್ಶಿ ಎ ಬಿ ನೌಷಾದ್, ಗ್ರಾಮ ಸಮಿತಿ ಅಧ್ಯಕ್ಷ ಹನೀಫ್ ಬೆಂಗ್ರೆ, ಮುಖಂಡ ಜಮ್ಶೀರ್ ಬೆಂಗ್ರೆ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...